ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ; ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ
Siddeshwara Swamiji: ಯಾವುದೇ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ನೀಡಲಾಗಲ್ಲ ಎಂದು ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿಯನ್ನು ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು.
ವಿಜಯನಗರ: ಸಿದ್ದೇಶ್ವರ ಸ್ವಾಮೀಜಿಗಳ(Siddeshwara Swamiji) ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ ಎಂದು ಜ್ಞಾನ ಯೋಗಾಶ್ರಮದ(jnanayogashrama) ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ನಿನ್ನೆ( ಜ.03) ಜ್ಞಾನಯೋಗಾಶ್ರಮದ ಆವರಣದಲ್ಲಿ ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ ಆತ್ಯಸಂಸ್ಕಾರದ ಬಳಿಕ ಕನ್ನೇರಿ ಮಠದ ಸ್ವಾಮೀಜಿಗಳು ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಾಗಿ ಹೇಳಿದ್ದರು. ಆದ್ರೆ ಇಂದು ಬಸವಲಿಂಗ ಸ್ವಾಮೀಜಿ ಮಾತನಾಡಿ, ಭಕ್ತರಿಗೆ ಚಿತಾಭಸ್ಮವನ್ನು ನೀಡುವುದಿಲ್ಲ ಎಂದಿದ್ದಾರೆ.
ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆ ವೇಳೆ ಕನ್ಹೇರಿ ಮಠದ ಸ್ವಾಮೀಜಿಗಳು ಹೇಳಿದ್ದರು. ಸಿದ್ಧೇಶ್ವರ ಸ್ವಾಮೀಜಿಗಳ ಚಿತಾಭಸ್ಮವನ್ನು ಯಾರು ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆ ಪಡುತ್ತಾರೋ ಅವರು ಹೆಸರು ನೋಂದಾಯಿಸಲು ಹೇಳಿದ್ದರು. ಆದರೆ ಯಾವುದೇ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ನೀಡಲಾಗಲ್ಲ ಎಂದು ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಸ್ವಾಮೀಜಿಗಳ ಅಣತೆಯಂತೆ ನಾವು ಯಾವುದೇ ಚಿತಾಭಸ್ಮವನ್ನು ನೀಡಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿಯನ್ನು ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು. ಚಿತಾಭಸ್ಮವನ್ನು ಯಾವ ನದಿ, ಸಮುದ್ರದಲ್ಲಿ ವಿಸರ್ಜನೆ ಮಾಡಬೇಕೆಂಬುದರ ಕುರಿತು ಚರ್ಚೆ ಮಾಡುತ್ತೇವೆ. ಆಶ್ರಮದಲ್ಲಿರುವ ನಾವೆಲ್ಲ ಸ್ವಾಮೀಜಿಗಳು ಸೇರಿ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಈ ಕುರಿತು ಕನ್ಹೇರಿ ಮಠದ ಶ್ರೀಗಳು ಹಾಗೂ ಸುತ್ತೂರು ಮಠದ ಶ್ರೀಗಳು ಸೇರಿದಂತೆ ಇತರ ಸ್ವಾಮೀಜಿಗಳ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಸಭೆಯ ಬಳಿಕ ಚಿತಾಭಸ್ಮ ವಿಸರ್ಜನೆಯ ಕುರಿತು ನಿರ್ಧಾರ ಮಾಡುತ್ತೇವೆ. ಮೂರು ದಿನಗಳ ನಂತರ ಅಂದರೆ ನಾಳೆ ಸರಳ ವಿಧಿ ವಿಧಾನಗಳ ಆಚರಣೆಯ ಮೂಲಕ ಚಿತಾಭಸ್ಮ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಜ್ಞಾನಯೋಗಾಶ್ರಮದಲ್ಲಿ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ರು.
ಇದನ್ನೂ ಓದಿ: Siddeshwara Swamiji: ಶ್ರೀಗಳ ಆಸೆಯಂತೆ ನದಿ, ಸಮುದ್ರಕ್ಕೆ ಚಿತಾ ಭಸ್ಮ ಬಿಡಲು ಭಕ್ತರಿಗೆ ಅವಕಾಶ
ಶುಭ್ರ ಶ್ವೇತವರ್ಣದ ಬಟ್ಟೆ.. ಅಂಗಿಗೇ ಜೇಬುಗಳೇ ಇರಲಿಲ್ಲ!
ಸಿದ್ದೇಶ್ವರ ಶ್ರೀ ತಮಗಾಗಿ ಬಿಡಿಗಾಸನ್ನು ಸಂಪಾದಿಸಿರಲಿಲ್ಲ. ಸಿದ್ದೇಶ್ವರ ಸ್ವಾಮೀಜಿ ಧರಿಸುತ್ತಿದ್ದ ಅಂಗಿಗೆ ಜೇಬುಗಳೇ ಇರಲಿಲ್ಲ. ಕೇವಲ 2 ಜತೆ ಬಿಳಿ ಪಂಚೆ, ಅಂಗಿ ಮಾತ್ರ ಹೊಂದಿದ್ದರು. ತಮ್ಮ ಬಟ್ಟೆಗಳನ್ನು ತಾವೇ ಸ್ವಚ್ಛಗೊಳಿಸಿಕೊಳ್ಳುತ್ತಿದ್ದ ಸಿದ್ದೇಶ್ವರಶ್ರೀ, ಸರಳತೆಗೆ ಜೀವಂತ ಸಾಕ್ಷಿಯಾಗಿ ನಿಂತಿದ್ರು. ಯಾವತ್ತು ಮನಸ್ಸು ಶುಭ್ರ ಇರಬೇಕು ಎನ್ನುವ ಕಾರಣಕ್ಕೆ ಸದಾ ಬಳಿ ಬಟ್ಟೆ ಧರಿಸುತ್ತಿದ್ದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:38 am, Wed, 4 January 23