Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ

ವಿಜಯಪುರ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಡಿಸಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರು ಶ್ರೀ ಭೇಟಿ ನೀಡಿದರು.

Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ
ವಿಜಯಪುರ ಜ್ಞಾನಯೋಗಾಶ್ರಮಕ್ಕೆ ಸುತ್ತೂರು ಶ್ರೀಗಳ ಭೇಟಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 01, 2023 | 4:49 PM

ವಿಜಯಪುರ: ವಿಜಯಪುರದ (Vijayapur) ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Siddeshwar Swamiji) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿದರು. ಭೇಟಿ ಬಳಿಕ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ ಮಲ್ಲಣ್ಣ ಮೂಲಿಮನಿ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಬೆಳಿಗ್ಗೆಯಿಂದ ನಾರ್ಮಲ್ ಇದ್ದಾರೆ. ಪಲ್ಸ್, ಬಿಪಿ, ಉಸಿರಾಟ ಸಹಜವಾಗಿದೆ. ಸ್ವಾಮೀಜಿ ಗಂಜಿ‌ ಕುಡಿದಿದ್ದಾರೆ. ನಿನ್ನೆ ಆಕ್ಸಿಜನ್ ಕಡಿಮೆಯಾಗಿತ್ತು. ಈಗ ನಾರ್ಮಲ್ ಇದೆ. ಕಳೆದ ಕೆಲ ದಿನಗಳಿಂದ ಊಟ ಮಾಡಿಲ್ಲ ಕಾರಣ ಅವರು ಹೊರಗೆ ಬರಲಾಗುತ್ತಿಲ್ಲ ಎಂದರು.

ಜಿಲ್ಲಾಧಿಕಾರಿ ಡಾ ಮಹಾಂತೇಶ ದಾನಮ್ಮನವರ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಬಂದಿದ್ದೇವೆ. ನಿನ್ನೆ ಸಿಎಂ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದರ್ಶನ ಪಡೆದಿದ್ದಾರೆ. ಶ್ರೀಗಳ‌ಆರೋಗ್ಯದ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಸೂಚನೆ ಇದೆ. ಅವರ ಸೂಚನೆ ಮೇರೆಗೆ ನಾವು ‌ನಿತ್ಯ ಭೇಟಿ ಮಾಡುತ್ತಿದ್ದೇವೆ. ಕೆಲ ಮಾದ್ಯಮದಲ್ಲಿ ತಪ್ಪು ಸಂದೇಶ ಬಂದಿದೆ. ತಪ್ಪು ಸಂದೇಶ ಬೇಡ. ವೈದ್ಯರು ಹೆಲ್ತ್ ಬುಲೆಟಿನ್ ನೀಡುತ್ತಾರೆ. ಶ್ರೀಗಳು ಊಟ ಮಾಡದ ಕಾರಣ ಅಶಕ್ತಿ ಇದೆ. ಭಕ್ತರು ಸಹಕಾರ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಮೋದಿ ಕೂಡ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದ ಸಚಿವ ಜೋಶಿ

ತಪ್ಪು ಸಂದೇಶ ಜನರಲ್ಲಿ ಹೋಗಿದ್ದು ಸುಳ್ಳು. ಭಕ್ತರ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ತಪ್ಪು ಸಂದೇಶದ ಕಾರಣ ಜನರು ಹೆಚ್ಚು ಬರುತ್ತಿದ್ದಾರೆ. ಈ ಕಾರಣ ನಾವು ಇಲ್ಲಿ ಬಂದಿದ್ದೇವೆ. ಅದನ್ನು ಬಿಟ್ಟು ಬೇರೆ ವಿಚಾರ ಇಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ. ಏನೇ ಇದ್ದರೂ ಎಲ್ಲರ ಗಮನಕ್ಕೆ ತರುತ್ತೇವೆ. ಭಕ್ತರು ಗಾಬರಿಯಾಗಬೇಕಿಲ್ಲ. ಟ್ರಾಫಿಕ್, ಜನ ಸಂದನಿ, ಗದ್ದಲ ನಿವಾರಣೆಗೆ ಪೊಲೀಸ್ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಎಸ್ಪಿ ಹೆಚ್ ಡಿ ಆನಂದಕುಮಾರ ಹೇಳಿದರು.

ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿದೆ.ಸಿದ್ದೇಶ್ವರ ಸ್ವಾಮೀಜಿರವರ ಪಲ್ಸ್ ರೇಟ್, ಬಿಪಿ ನಾರ್ಮಲ್ ಇದೆ. ಹೆಚ್ಚಿನ ಚಿಕಿತ್ಸೆಗೆ ಶ್ರೀಗಳು ಒಪ್ಪುತ್ತಿಲ್ಲ, ಆಹಾರವನ್ನೂ ಸ್ವೀಕರಿಸುತ್ತಿಲ್ಲ. ಸಿದ್ದೇಶ್ವರ ಶ್ರೀಗಳು ಆಹಾರ ಸೇವಿಸದ ಕಾರಣ ಅಶಕ್ತರಾಗಿದ್ದಾರೆ. ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಅಧಿಕಾರಿಗಳು ಓಡಾಡುತ್ತಿದ್ದಾರೆ. ಸಿಎಂ ಹಾಗೂ ಕೇಂದ್ರ ಸಚಿವರು ನಿನ್ನೆ ಶ್ರೀಗಳ ದರ್ಶನ ಪಡೆದಿದ್ದಾರೆ. ಪ್ರಧಾನಿ ಮೋದಿ ಕೂಡ ಸಿದ್ದೇಶ್ವರ ಶ್ರೀಗಳ ಜೊತೆ ಮಾತನಾಡಿದ್ದಾರೆ ಎಂದು ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ