AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwara Swamiji: ಅಂತಿಮ ದರ್ಶನಕ್ಕೆ ಹೆಚ್ಚುವರಿಯಾಗಿ 2-3 ಗಂಟೆವರೆಗೆ ವಿಸ್ತರಣೆ: ಸಿಎಂ ಬೊಮ್ಮಾಯಿ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಹೆಚ್ಚುವರಿಯಾಗಿ 2 ರಿಂದ 3 ಗಂಟೆವರೆಗೆ ದರ್ಶನಕ್ಕೆ ಕಾಲಾವಕಾಶ ವಿಸ್ತರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Siddeshwara Swamiji: ಅಂತಿಮ ದರ್ಶನಕ್ಕೆ ಹೆಚ್ಚುವರಿಯಾಗಿ 2-3 ಗಂಟೆವರೆಗೆ ವಿಸ್ತರಣೆ: ಸಿಎಂ ಬೊಮ್ಮಾಯಿ
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ
TV9 Web
| Edited By: |

Updated on:Jan 03, 2023 | 7:36 PM

Share

ವಿಜಯಪುರ: ಜ್ಞಾನಯೋಗಾಶ್ರಮದ ಜ್ಞಾನ ಜ್ಯೋತಿ ಶ್ರೀ ಸಿದ್ದೇಶ್ವರ ಸ್ವಾಮೀಜಿ(82) (Siddeshwara Swamiji) ಅವರು ನಿನ್ನೆ (ಜ.2) ರಂದು ಸಾಯಂಕಾಲ 6 ಗಂಟೆಗೆ ದೈವಾದೀನರಾದರು. ನಿನ್ನೆಯಿಂದ ಶ್ರೀಗಳ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಇಲ್ಲಿವರೆಗು ಸುಮಾರು 15 ಲಕ್ಷ ಜನರು ಅಂತಿಮ ದರ್ಶನ ಪಡೆದಿದ್ದಾರೆ. ಇನ್ನೂ ಅಸಂಖ್ಯ ಭಕ್ತರು ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆ ಅಂತಿಮ ದರ್ಶನ ಪಡೆಯಲು ಹೆಚ್ಚಿನ ಅವಕಾಶ ನೀಡುತ್ತೇನೆ. ಹೆಚ್ಚುವರಿಯಾಗಿ 2 ರಿಂದ 3 ಗಂಟೆ ವರೆಗೆ ದರ್ಶನಕ್ಕೆ ಕಾಲಾವಕಾಶ ವಿಸ್ತರಿಸುತ್ತೇವೆ. ಜಿಲ್ಲಾಡಳಿತಕ್ಕೆ ಎಲ್ಲ ಭಕ್ತರು ಕೂಡ ಸಹಕಾರ ನೀಡಬೇಕು ಎಂದು ವಿಜಯಪುರ ನಗರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭಕ್ತರು ಶಾಂತಿಯಿಂದ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದೀರಿ. ಎಲ್ಲಾ ಭಕ್ತರಿಗೂ ನಾನು ಧನ್ಯವಾದ ಹೇಳುತ್ತೇನೆ. ಸಂಜೆ 5.15ಕ್ಕೆ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಸುತ್ತೇವೆ. ಸರ್ಕಾರಿ ಗೌರವದ ನಂತರವೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಶಾಂತಿಯುತವಾಗಿ ಅಂತಿಮ ದರ್ಶನ ಪಡೆಯಬೇಕು. ಜ್ಞಾನಯೋಗಾಶ್ರಮದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇಲ್ಲ. ಹೀಗಾಗಿ ಸೈನಿಕ ಶಾಲೆ ಆವರಣದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದೇವೆ ಎಂದರು.

ಇದನ್ನೂ ಓದಿ: ಮಣ್ಣಿನಿಂದ ಶ್ರೀಗಳ ಕಲಾಕೃತಿ ನಿರ್ಮಾಣ ಮಾಡಿ ವಿಶೇಷ ಪೂಜೆ ಸಲ್ಲಿಸಿದ ಭಕ್ತರು

ಇಂದು ಅಂತಿಮ ದರ್ಶನ ಮುಗಿಯದಿದ್ದರೆ ನಾಳೆವರೆಗೆ ವಿಸ್ತರಣೆ: ಡಿಸಿ

ಎಲ್ಲ ಭಕ್ತರು ಅಂತಿಮ ದರ್ಶನ ಪಡೆದ ನಂತರ ಅಂತ್ಯಸಂಸ್ಕಾರ ಮಾಡಲಾಗುವುದು. ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಿದ್ದೇಶ್ವರ ಸ್ವಾಮೀಜಿ ಭಕ್ತರು ಗಾಬರಿಯಾಗುವ ಅಗತ್ಯವಿಲ್ಲ. ಇಂದು ಅಂತಿಮ ದರ್ಶನ ಮುಗಿಯದಿದ್ದರೆ ನಾಳೆವರೆಗೆ ವಿಸ್ತರಣೆ ಮಾಡುತ್ತೇವೆ. ಪ್ರತಿಯೊಬ್ಬರೂ ಅಂತಿಮ ದರ್ಶನ ಪಡೆದ ನಂತರ ಶ್ರೀಗಳ ಪಾರ್ಥೀವ ಶರೀರವನ್ನು ಸೈನಿಕ ಶಾಲೆ ಆವರಣದಿಂದ ಸ್ಥಳಾಂತರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಸ್ಲಿಂ ಮನೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರ; ಶ್ರೀಗಳಿಗೆ ಮುಸ್ಲಿಂ ಮನೆಯಲ್ಲಿ ಪೂಜೆ

ರಾತ್ರಿ 3.30 ಆದ್ರು ಎಲ್ಲರ ದರ್ಶನ ಆದ ಬಳಿಕ ಅಂತ್ಯಸಂಸ್ಕಾರ

ಮಧ್ಯಾಹ್ನ 3.30ಕ್ಕೆ ದರ್ಶನ ಬಂದ್ ಆಗುತ್ತೆ ಅಂತಾ ಗಡಿ ಬಿಡಿ ಮಾಡಬೇಡಿ. ರಾತ್ರಿ 3.30 ಆದ್ರು ಎಲ್ಲರ ದರ್ಶನ ಆದ ಬಳಿಕ ಅಂತ್ಯಸಂಸ್ಕಾರ ಮಾಡುತ್ತೇವೆ. ಯಾರು ಓಡಿಕೊಂಡು ಗಡಿ ಬಿಡಿಯಲ್ಲಿ ಬರಬೇಡಿ. 3.30ಕ್ಕೆ ದರ್ಶನ ಬಂದ್ ಆಗುವುದಿಲ್ಲ ಎಂದು ಕನ್ಹೇರಿಮಠದ ಅದೃಶ್ಯನಂದ ಕಾಡಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ ಸ್ಥಳದಲ್ಲಿ ಮೈಕ್​ನಲ್ಲಿ ಮನವಿ ಮಾಡುತ್ತಿದ್ದಾರೆ.

Published On - 3:04 pm, Tue, 3 January 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ