AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddheshwara Swamiji Funeral: ಸಿದ್ದೇಶ್ವರ ಶ್ರೀ ಪಂಚಭೂತಗಳಲ್ಲಿ ಲೀನ, ಅವರ ಇಚ್ಛೆಯಂತೆ ನಡೆಯಿತು ಅಂತ್ಯಕ್ರಿಯೆ

ಶತಮಾನದ ಸರಳ ಸಂತ, ನಡೆದಾಡುವ ದೇವರು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ (Siddeshwar Swamiji) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ನೆರವೇರಿಸಲಾಯಿತು.

Siddheshwara Swamiji Funeral: ಸಿದ್ದೇಶ್ವರ ಶ್ರೀ ಪಂಚಭೂತಗಳಲ್ಲಿ ಲೀನ, ಅವರ ಇಚ್ಛೆಯಂತೆ ನಡೆಯಿತು ಅಂತ್ಯಕ್ರಿಯೆ
ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ಶ್ರೀಗಳು
TV9 Web
| Edited By: |

Updated on:Jan 03, 2023 | 9:24 PM

Share

ವಿಜಯಪುರ: ನಿನ್ನೆ(ಜನವರಿ 02) ವೈಕುಂಟ ಏಕಾದಶಿಯಂದು ಸಾಯಂಕಾಲ 6 ಗಂಟೆಗೆ  ಶಿವೈಕ್ಯರಾಗಿದ್ದ ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು(ಜನವರಿ 03) ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಅವರ ಇಚ್ಛೆಯಂತೆಯೇ ನೆರವೇರಿಸಲಾಯಿತು. ಬಸವಲಿಂಗ ಶ್ರೀ ಸೇರಿದಂತೆ ವಿವಿಧ ಮಠಾಧೀಶರಿಂದ ಅಗ್ನಿಸ್ಪರ್ಶ ಮಾಡಿದರು. ಕೊಬ್ಬರಿಯೊಳಗೆ ದೇಶಿ ಹಸುವಿನ ತುಪ್ಪ ಹಾಕಿ ಅಗ್ನಿಸ್ಪರ್ಶ ಮಾಡಲಾಯ್ತು. ಇನ್ನು ಚಿತೆಗೆ ಶ್ರೀಗಂಧದ ಕಟ್ಟಿಗೆ, ಬೆರಣಿ, ದೇಶಿ ಹಸುವಿನ ತುಪ್ಪ ಬಳಸಲಾಗಿದೆ.

ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯಿಂದ ಸ್ಪರ್ಶ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಬಾರದು ಎಂದು ಸ್ವಾಮೀಜಿ ಅಭಿವಂದನ ಪತ್ರದಲ್ಲಿ ಬರೆದಿಟ್ಟಿದ್ದರು. ಅದರಂತೆ ಅಗ್ನಿಸ್ಪರ್ಶ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯ್ತು.

ಅಂತ್ಯಕ್ರಿಯೆಗೂ ಮುನ್ನ ಶ್ರೀಗಳಿಗೆ ಸಾಯಂಕಾಲ 5 ಗಂಟೆ 15 ನಿಮಿಷಕ್ಕೆ ಪೊಲೀಸರಿಂದ ಮೂರು ಸುತ್ತಿನ ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಶ್ರೀಗಳ ಅಂತಿಮ ದರ್ಶನ ಪಡೆಯಲು ನಗರದ ವಿಜಯಪುರದ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಲಕ್ಷಾಂತರ ಭಕ್ತರು ದರ್ಶನ ಪಡೆದರು. ಬಳಿಕ ಶ್ರೀಗಳ ಪಾರ್ಥಿವ ಶರೀರವನ್ನು ಸೈನಿಕ ಶಾಲೆಯಿಂದ ಜ್ಞಾನಯೋಗಾಶ್ರಮದ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆತರಲಾಯ್ತು.

ಇನ್ನು ಶ್ರೀಗಳ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು. ಇನ್ನೂ ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್​, ಶಾಸಕರಾದ ಸಿದ್ದು ಸವದಿ, ದೊಡ್ಡನಗೌಡ ಪಾಟೀಲ್, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಪ್ರಭಾಕರ ಕೋರೆ ಭಾಗಿಯಾಗಿದ್ದರು

ಬೊಮ್ಮಾಯಿ ಸಂಪುಟದ ಕೆಲವು ಸಚಿವರು, ಬಿಜೆಪಿಯ ಕೆಲ ಶಾಸಕರು, ಕಾಂಗ್ರೆಸ್​ ಮತ್ತು ಜೆಡಿಎಸ್​ನ ಕೆಲವು ಶಾಸಕರು ಭಾಗಿಯಾಗಿದ್ದರು. ಇನ್ನೂ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಕನ್ಹೇರಿಮಠದ ಅದೃಶ್ಯನಂದ ಕಾಡಸಿದ್ದೇಶ್ವರ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಸೇರಿದಂತೆ ಇನ್ನೂ ವಿವಿಧ ಮಠಗಳ ಮಠಾದೀಶರು ಭಾಗಿಯಾಗಿದ್ದರು.

Published On - 8:59 pm, Tue, 3 January 23

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ