Siddheshwar Swamiji: ಸಿದ್ದೇಶ್ವರ ಸ್ವಾಮೀಜಿಗೆ BLDE ವೈದ್ಯರ ತಂಡದಿಂದ ಚಿಕಿತ್ಸೆ: ನಾಳೆಯಿಂದ ಆನ್​ಲೈನ್​ನಲ್ಲಿ ಶ್ರೀಗಳ ದರ್ಶನ

ನಡೆದಾಡುವ ದೇವರು ಸಿದ್ದೇಶ್ವರ ಸ್ಚಾಮೀಜಿ ಅನಾರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬಿಎಲ್ಡಿಇ ಸಂಸ್ಥೆಯ ಬಿ. ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ವೈದ್ಯರ ತಂಡ ಚಿಕಿತ್ಸೆ ನೀಡಿದೆ.

Siddheshwar Swamiji: ಸಿದ್ದೇಶ್ವರ ಸ್ವಾಮೀಜಿಗೆ BLDE ವೈದ್ಯರ ತಂಡದಿಂದ ಚಿಕಿತ್ಸೆ: ನಾಳೆಯಿಂದ ಆನ್​ಲೈನ್​ನಲ್ಲಿ ಶ್ರೀಗಳ ದರ್ಶನ
ಸಿದ್ದೇಶ್ವರ ಶ್ರೀ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 30, 2022 | 8:02 PM

ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ಚಾಮೀಜಿ (Siddeshwara Swamiji) ಅನಾರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬಿಎಲ್​ಡಿಇ ಸಂಸ್ಥೆಯ ಬಿ. ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದೆ. ಯುರೋಲಾಜಿಸ್ಟ್​​ ಡಾ. ಎಸ್​.ಬಿ. ಪಾಟೀಲ್, ಬಿ‌.ಎಂ ಪಾಟೀಲ್ ಮೆಡಿಕಲ್ ಕಾಲೇಜ್​ ಪ್ರಾಂಶುಪಾಲರಾದ ಡಾ. ಅರವಿಂದ ಪಾಟೀಲ್, ಡಾ. ಮಲ್ಲಣ್ಣ ಮೂಲಿಮನಿ ಎಂಡಿ ಅವರ ನೇತೃತ್ವದಲ್ಲಿ ಶ್ರೀಗಳಿಗೆ‌ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಮಾತನಾಡಿದ ವೈದ್ಯರ ತಂಡ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಎಂದಿನಂತೆ ಆಹಾರ ಸೇವನೆ ಮಾಡುತ್ತಿದ್ದಾರೆ. ಪಲ್ಸ್ ಬಿಪಿ ಸಹಜವಾಗಿದೆ. ಯಾರೂ ಸುಳ್ಳು ವದಂತಿಗೆ ಕಿವಿಗೊಡಬೇಡಿ. ಸ್ವಾಮೀಜಿಗಳ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡಿ‌. ನಾಳೆಯಿಂದ ಸ್ಚಾಮೀಜಿಗಳ ದರ್ಶನವನ್ನು ಆನ್​ಲೈನ್ ಮೂಲಕ ಮಾಡಿಸಲಾಗುತ್ತದೆ ಎಂದು ಡಾ. ಎಸ್​ಬಿ‌‌ ಪಾಟೀಲ್ ತಿಳಿಸಿದರು.

ಸ್ವಾಮೀಜಿಗಳ ಆರೋಗ್ಯದ ಕುರಿತ ವದಂತಿ‌: ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಹೇಳಿಕೆ

ಇನ್ನು ಸ್ವಾಮೀಜಿಗಳ ಆರೋಗ್ಯದ ಕುರಿತ ಹರಡುತ್ತಿರುವ ವದಂತಿ‌ ವಿಚಾರವಾಗಿ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಆಶ್ರಮದ ವೆಬ್​ಸೈಟ್​ನಲ್ಲಿ ಎಲ್ಲಾ ಮಾಹಿತಿ ನೀಡಲಾಗುತ್ತಿದೆ. ನಾಳೆಯಿಂದ ಆಶ್ರಮದಿಂದ ಆನ್​ಲೈನ್​ನಲ್ಲೇ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. Janayogashrama Vijayapur ಎಂಬ ವಿಳಾಸ ಫೇಸ್ ಬುಕ್ ಹಾಗೂ ಯೂಟ್ಯೂಬ್​ನಲ್ಲಿ ಮಾಹಿತಿ ಬಿಡಲಾಗುತ್ತದೆ. ಏನೇ ಇದ್ದರೂ ಅಧಿಕೃತ ಮಾಹಿತಿ ಇಲ್ಲಿಯೇ ಹಾಕಲಾಗುತ್ತದೆ. ಬೇರೆ ಎಲ್ಲಿಯೋ ನೋಡಿ ವದಂತಿ ನಂಬಬೇಡಿ ಎಂದು ಮನವಿ ಮಾಡಲಾಗಿದೆ. ಸ್ವಾಮೀಜಿಗಳ ದರ್ಶನವನ್ನೂ ಸಹ ಆನ್​ಲೈನ್​ನಲ್ಲೇ ಅವಕಾಶ ಮಾಡಲಾಗುತ್ತದೆ. ಕೊರೊನಾ ಕಾರಣದಿಂದ ವೈದ್ಯರ ಸಲಹೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Siddheshwar Swamiji: ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ವಿಚಾರ, ಹರಿದು ಬಂದ ಜನರು: ಭಕ್ತರಿಗೆ ದರ್ಶನ ನೀಡಿದ ನಡೆದಾಡುವ ದೇವರು

ಸಾವಿರಾರು ಭಕ್ತರಿಗೆ ದರ್ಶನ ನೀಡಿದ ಸಿದ್ದೇಶ್ವರ ಸ್ವಾಮೀಜಿ 

ಅನಾರೋಗ್ಯ ಹಿನ್ನೆಲೆ ಜಿಲ್ಲೆಯ ಜ್ಞಾನ ಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಸಾರ್ಮಜನಿಕವಾಗಿ ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಮತ್ತು ಪ್ರಚನವನ್ನು ಸಹ ನೀಡಿರಲಿಲ್ಲ. ಆದರೆ ಇಂದು(ಡಿ. 30) ಮೊದಲ ಮಹಡಿಯಿಂದಲೇ ಸಾವಿರಾರು ಭಕ್ತರಿಗೆ ದರ್ಶನ ನೀಡಿದ್ದಾರೆ. ಮೊದಲ ಮಹಡಿಯ ಗೋಡೆ ತೆರವು ಮಾಡಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೊದಲ ಮಹಡಿಯಲ್ಲಿ ವೀಲ್ ಚೇರ್​ನಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡಿದರು.

ಇದನ್ನೂ ಓದಿ: Siddheshwar Swamiji: ನಾನು ಆರೋಗ್ಯವಾಗಿದ್ದೇನೆ; ವದಂತಿಗಳಿಗೆ ತೆರೆ ಎಳೆದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ

ನಾಳೆಯಿಂದ ಭಕ್ತರಿಗಿಲ್ಲ ಸ್ವಾಮೀಜಿ ದರ್ಶನ ಭಾಗ್ಯ

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದರ್ಶನ ಪಡೆದ ಸಾವಿರಾರು ಭಕ್ತರು ಸಂತಸಗೊಂಡರು. ಬಿಸಿಲು ಇರುವ ಕಾರಣ ಭಕ್ತರ ಅನುಕೂಲಕ್ಕಾಗಿ ಟೆಂಟ್​ ನಿರ್ಮಿಸಲಾಗಿದೆ. ಸುಮಾರು 20ನಿಮಿಷಕ್ಕೂ ಹೆಚ್ಚು ಕಾಲ ಶ್ರೀಗಳು ಭಕ್ತರೊಂದಿಗಿದ್ದು, ಬಳಿಕ ಮತ್ತೆ ವಿಶ್ರಾಂತಿ ಕೋಣೆಗೆ ತೆರಳಿದರು. ಇನ್ನು ವೈದ್ಯರ ಸೂಚನೆ ಮೇರೆಗೆ ದರ್ಶನ ನಿಲ್ಲಿಸಲಾಗುತ್ತಿದ್ದು, ನಾಳೆಯಿಂದ ಸ್ವಾಮೀಜಿಗಳ ದರ್ಶನಕ್ಕೆ ಭಕ್ತರು ಆಗಮಿಸಬಾರದು ಎಂದು ಕಿರಿಯ ಸ್ವಾಮೀಜಿಗಳು ಮೈಕ್​ನಲ್ಲಿ ಅನೌನ್ಸ್ ಮಾಡಿದ್ದಾರೆ. ಆದರೆ ಶ್ರೀಗಳನ್ನು ಫೇಸ್ ಬುಕ್ ಲೈವ್​ ಮಾಡಬೇಕೆಂದು ಸಾವಿರಾರು ಭಕ್ತರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:00 pm, Fri, 30 December 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ