AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddheshwara swamiji funeral: ಉಸಿರು ನಿಲ್ಲಿಸಿದ ನಡೆದಾಡುವ ದೇವರು ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಡೆದಾಡುವ ದೇವರು ಎಂದು ಖ್ಯಾತಿ ಹೊಂದಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಕಳೆದ ಒಂದು ವಾರಕ್ಕಿಂತಲೂ ಹೆಚ್ಚು ದಿನದಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು (ಜ.2) ಅಸ್ತಂಗತರಾಗಿದ್ದಾರೆ.

Siddheshwara swamiji funeral: ಉಸಿರು ನಿಲ್ಲಿಸಿದ ನಡೆದಾಡುವ ದೇವರು ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ
Siddheshwara swamiji
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 03, 2023 | 12:13 AM

Share

ವಿಜಯಪುರ: ನಡೆದಾಡುವ ದೇವರು ಎಂದು ಖ್ಯಾತಿ ಹೊಂದಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwar swamiji) ಅವರು ಕಳೆದ ಒಂದು ವಾರಕ್ಕಿಂತಲೂ ಹೆಚ್ಚು ದಿನದಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು (ಜ.2) ಅಸ್ತಂಗತರಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪೂಜ್ಯರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದಿಂದ ಮಾಡಲು ಸೂಚನೆ ನೀಡಿದ್ದು, ನಾಳೆ (ಜ. 3) ಸಂಜೆ 5 ಗಂಟೆ ಆಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ಮಾಡಲು ತಿರ್ಮಾನಿಸಲಾಗಿದೆ.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು

ಆಶ್ರಮದಲ್ಲಿ ಬೆಳಗ್ಗೆ 4.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ(ಜ. 3) ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆವರೆಗೆ ಸೈನಿಕ ಶಾಲೆಯಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3-4 ಗಂಟೆವರೆಗೆ ಸರ್ಕಾರದ ವತಿಯಿಂದ ಪೂಜ್ಯರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗುವುದು. ಬಳಿಕ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ವಿಜಯಪುರ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.

ಅಂತಿಮ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ವ್ಯವಸ್ಥೆ ಮಾಡುತ್ತಿರುವ ಜಿಲ್ಲಾಡಳಿತ, ಅಂತಿಮ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಊಟ ಹಾಗೂ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಸಹಸ್ರಾರು ಭಕ್ತರು ಬರುವ ನಿರೀಕ್ಷೆ ಇದೆ.  ಇದಕ್ಕಾಗಿ ನೂರು ಎಕರೆಗೂ ಅಧಿಕ ವಿಸ್ತಾರವಾಗಿ ಜಿಲ್ಲಾಸ್ಪತ್ರೆಯ ಆವರಣವನ್ನು JCB ಗಳಿಂದ ಕ್ಲೀನಿಂಗ್ ಕಾರ್ಯ ನಡೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:13 pm, Mon, 2 January 23