ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಂದಗಿ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ.
ನಾಜಿಯಾ ಶಕೀಲಾ ಅಂಗಡಿ MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಸಹ ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು? ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ Be, M tech ಪದವೀಧರ ನಿಯಾಜ್ ಶೇಕ್ ಅವರನ್ನು ಎಚ್.ಡಿ.ಕುಮಾರಸ್ವಾಮಿ ಆಯ್ಕೆ ಮಾಡಿದ್ದಾರೆ.
ಜೆಡಿಎಸ್ನಿಂದ ಪಂಚರತ್ನ ಯೋಜನೆ ಘೋಷಣೆ; ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ನೆರವು ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ಘೋಷಣೆ ಮಾಡಲಾಗಿದೆ. ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ಯೋಜನೆ ಕೈಗೊಳ್ಳಲಾಗಿದೆ. ಸಾಲಮನ್ನಾ ಶಾಶ್ವತ ಪರಿಹಾರ ಅಲ್ಲ, ರೈತರಿಗೆ ನೆರವಾಗಬೇಕು. ರೈತರು ಸಾಲವನ್ನೇ ಮಾಡದ ರೀತಿಯಲ್ಲಿ ನೆರವಾಗಬೇಕು ಎಂದು ಹೇಳಿದ್ದಾರೆ. ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸರ್ಕಾರದ ಮೂಲಕ ಆರ್ಥಿಕವಾಗಿ ನೆರವಾಗುವ ಯೋಜನೆ. ಮಹಿಳೆಯರು, ಯುವಕರಿಗೆ ಉದ್ಯೋಗ ನೀಡುವ ಯೋಜನೆ ಇದಾಗಲಿದೆ ಎಂದು ತಿಳಿಸಿದ್ದಾರೆ. ಜನವರಿಯಿಂದ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗೆ ಹೋಗುತ್ತೇವೆ. ಮಹಿಳೆಯರಿಗೆ ವಿಧವಾ ವೇತನ, ಬಿಸಿಯೂಟ ತಯಾರಕರು, ಹಿರಿಯ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ನೆರವು ನೀಡುತ್ತೇವೆ. ಹೀಗೆ ಹಲವಾರು ವಿಚಾರ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಪಂಚರತ್ನ ಯೋಜನೆ ಘೋಷಣೆ ಮಾಡಿದ್ದೇವೆ. ಪಂಚರತ್ನ ಅಂದರೆ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುತ್ತೇವೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಸಮಸ್ಯೆ ಪರಿಹಾರ ನೀಡುವ ಕೆಲಸ ಮಾಡ್ತೀವಿ. ವಿಧವಾ ವೇತನಾ, ಹಿರಿಯ ನಾಗರೀಕರು, ಯುವಕ ಸಮಸ್ಯೆಗೆ ಬೇಕಾದ ಹಲವು ಯೋಜನೆ ಪ್ರಾರಂಭ ಮಾಡ್ತೀವಿ. 17 ತಿಂಗಳು ಈ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸೋ ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಹಾಸನದ ಆಲೂಗಡ್ಡೆ ಬೆಳೆಗಾರರಿಗೆ 129 ಕೋಟಿ ನಷ್ಟವಾಗಿದೆ: ಎಚ್.ಡಿ.ರೇವಣ್ಣ ಆಕ್ಷೇಪ
ನಾನು ಮತ್ತು ನಿಖಿಲ್ ಕುಮಾರಸ್ವಾಮಿ ಒಂದೇ; ಪ್ರಜ್ವಲ್ ರೇವಣ್ಣ ಘೋಷಣೆ