AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ, ಆರೋಪಿ ವೃದ್ಧ ಅರೆಸ್ಟ್

ಆಟವಾಡಲು ಮನೆಗೆ ಬರುತ್ತಿದ್ದ ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ. ಬಾಲಕಿಗೆ ತೀವ್ರ ರಕ್ತಸ್ರಾವವಾದ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ, ಆರೋಪಿ ವೃದ್ಧ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Oct 14, 2021 | 8:08 AM

Share

ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆಟವಾಡಲು ಮನೆಗೆ ಬರುತ್ತಿದ್ದ ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದಾನೆ. ಬಾಲಕಿಗೆ ತೀವ್ರ ರಕ್ತಸ್ರಾವವಾದ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ರಕ್ತಸ್ರಾವದಿಂದ ಬಳಲುತ್ತಿರುವ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿ ಹೇಳಿಕೆ ಆಧರಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರವೆಸಗಿ, ದರೋಡೆ ಆರೋಪ ಇನ್ನು ಮತ್ತೊಂದು ಇಂತಹದ್ದೇ ಘಟನೆ ಸಂಭವಿಸಿದೆ. ಅಪ್ರಾಪ್ತೆಯನ್ನ ಅಪಹರಿಸಿ ಅತ್ಯಾಚಾರವೆಸಗಿ, ಆಕೆ ಮೈಮೇಲಿದ್ದ ಚಿನ್ನಾಭರಣ ದೋಚಿದ ಆರೋಪ ಕೇಳಿ ಬಂದಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆಯಲ್ಲಿ ನಡೆದಿದೆ. ಸಂಗಡಿಗರ ಸಹಾಯದಿಂದ ಶಿವಯ್ಯ ಜಂಬಯ್ಯ ರುದ್ರಸ್ವಾಮಿಮಠ (32) ಎಂಬಾತ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದು ನಂತರ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದಾನೆ.

ಬಾಲಕಿಗಾಗಿ ಪೋಷಕರು ಹುಡುಕಾಡಿದ್ದು ತಡವಾಗಿ ಮನೆಗೆ ಬಂದ ಬಾಲಕಿ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಸದ್ಯ ಮದ್ದೇಬಿಹಾಳ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಆರೋಪಿ ರುದ್ರಯ್ಯನನ್ನು ಬಂಧಿಸಲಾಗಿದೆ. ಹಾಗೂ ಇತರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: Kotigobba 3, Salaga Release LIVE: ತೆರೆ ಮೇಲೆ ‘ಕೋಟಿಗೊಬ್ಬ 3’, ‘ಸಲಗ’ ಹವಾ ಶುರು; ಇಲ್ಲಿದೆ ಲೈವ್ ಅಪ್ಡೇಟ್ಸ್

Published On - 7:50 am, Thu, 14 October 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ