ಕಾರು-ಬೈಕ್​ ನಡುವೆ ಡಿಕ್ಕಿ: ಶಿಕ್ಷಕ ಮತ್ತು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರು ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಚಿಕ್ಕಬೇವನೂರ ಬಳಿ ಘಟನೆ ನಡೆದಿದೆ. ವಿದ್ಯಾರ್ಥಿ ಹಾಗೂ ಶಿಕ್ಷಕ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕಾರು-ಬೈಕ್​ ನಡುವೆ ಡಿಕ್ಕಿ: ಶಿಕ್ಷಕ ಮತ್ತು ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಮೃತ ಶಿಕ್ಷಕ
Edited By:

Updated on: Dec 17, 2021 | 6:29 PM

ವಿಜಯಪುರ: ಕಾರು ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಚಿಕ್ಕಬೇವನೂರ ಬಳಿ ಘಟನೆ ನಡೆದಿದೆ. ವಿದ್ಯಾರ್ಥಿ ಹಾಗೂ ಶಿಕ್ಷಕ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಶಿವಪ್ಪ ಜಾಮಗೊಂಡ, ರಾಹುಲ್ ನಾಯ್ಕೋಡಿ ಮೃತ ಶಿಕ್ಷಕ ಹಾಗೂ ವಿದ್ಯಾರ್ಥಿ. ಅಪಘಾತ ಬಳಿಕ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಬೈಕ್ ಗೆ ಗುದ್ದಿದ್ದು,ಕಾರ್​ ಪಲ್ಟಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್​ನಲ್ಲಿದ್ದ ವಿದ್ಯಾರ್ಥಿ ಹಾಗೂ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಕಸ್ಮಿಕ ಬೆಂಕಿ, ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಆಕಸ್ಮಿಕ ಬೆಂಕಿಯಿಂದ ಹೆದ್ದಾರಿಯಲ್ಲಿ ಕಾರು ಹೊತ್ತು ಉರಿದ ಘಟನೆ ನಡೆದಿದೆ. ವಿಜಯಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಕಾರುಬೆಂಕಿಗೆ ಸಿಲುಕಿ ನಾಶವಾಗಿದ್ದು ಅದೃಷ್ಟವಶಾತ್​ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಸೊಲ್ಹಾಪುರದಿಂದ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಅರಿಗೆ ಹತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ​

ಟ್ರ್ಯಾಕ್ಟರ್ ಪಲ್ಟಿ ರಸ್ತೆಪಾಲಾದ ಕಬ್ಬು

ಚಾಲಕನ ನಿಯಂತ್ರಣ ತಪ್ಪಿ ಕಬ್ಬು ಲೋಡ್​ ಆಗಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಕಬ್ಬು ರಸ್ತೆಯಲ್ಲಿ ಬಿದ್ದಿದ್ದು, ಟ್ರಾಫಿಕ್ ಜಾಮ್​ ಉಂಟಾದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹೊರವಲಯದ ಕಟ್ಟಿಕೆರಿ ಬಳಿ ಘಟನೆ ನಡೆದಿದೆ. ಪ್ರಭುಲಿಂಗೇಶ್ವರ ಕಾರ್ಖಾನೆಗೆ ಕಬ್ಬಿನ ಲೋಡ್ ಒಯ್ಯುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಇದರಿಂದ ದಾರಿ ಮಧ್ಯೆ ಕೆಲಕಾಲ ಟ್ರಾಫಿಕ್ ಜಾಮ್​ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಇದನ್ನೂ ಓದಿ:

Bengaluru Crime: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯ