ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ವಿಜಯಪುರ ಜಿಲ್ಲೆಯಲ್ಲಿ ಮತ್ತೋರ್ವ ಶಿಕ್ಷಕನ ಬಂಧನ

Teacher recruitment scam: 2014-15ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೋರ್ವ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ವಿಜಯಪುರ ಜಿಲ್ಲೆಯಲ್ಲಿ ಮತ್ತೋರ್ವ ಶಿಕ್ಷಕನ ಬಂಧನ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 21, 2022 | 9:33 AM

ವಿಜಯಪುರ: 2014-15ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ (Teacher recruitment scam) ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೋರ್ವ ಶಿಕ್ಷಕನನ್ನು (Teacher) ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ. ಬಸವನಬಾಗೇಬಾಡಿ ತಾಲೂಕಿನ ಭೈರವಾಡಗಿ ಪ್ರೌಢ ಶಾಲೆಯ ಅಶೋಕ್ ಚೌಹಾಣ್ ಬಂಧಿತ ಶಿಕ್ಷಕ. ಅಶೋಕ್ ಚೌಹಾಣ್ ಮೊದಲು ಚಿತ್ರದುರ್ಗ ಜಿಲ್ಲೆಯ ಜಗಳೂರಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದನು. ಬಳಿಕ ವಿಜಯಪುರ ಜಿಲ್ಲೆಗೆ ವರ್ಗವಾಗಿ ಬಂದಿದ್ದನು. ಅಶೋಕ್ ಚೌಹಾಣ್ ನೇಮಕಾತಿಯಲ್ಲಿ ಬಂಧನವಾದ ಜಿಲ್ಲೆಯ ಮೂರನೇ ಶಿಕ್ಷಕ.

ಈಗಾಗಲೇ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಚಡಚಣ ತಾಲುಕಿನ ಹತ್ತಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಮಹೇಶ ಸೂಸಲಾದಿ. ಕಪನಿಂಬರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಿದ್ರಾಮಪ್ಪ ಬಿರಾದಾರ್ ಬಂಧಿತ ಶಿಕ್ಷಕರು.

ಅಶೋಕ್ ಚೌಹಾಣ್ 2012-13 ಹಾಗೂ 2014-15 ರ ಸಾಲಿನಲ್ಲಿ ನಡೆಸಲಾಗಿರೊ ಶಿಕ್ಷಕರ ನೇಮಕಾತಿಯ ಸಿಇಟಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹಾಗೂ ನೇಮಕಾತಿಯಾಗಿ ಸೇವೆಗೆ ಹೋಗದವರ ಸ್ಥಾನಕ್ಕೆ ಅಕ್ರಮವಾಗಿ ನೇಮಕವಾಗಿರೋ ಆರೋಪ ಕೇಳಿ ಬಂದಿದೆ. ಅಶೋಕ್ ಚೌಹಾಣ್  ಅನ್ಯ ಜಿಲ್ಲೆಗಳಲ್ಲಿ ನೇಮಕವಾಗಿ ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಿಕೊಂಡು ಬಂದಿದ್ದಾನೆ.

ದಾವಣಗೆರೆಯಲ್ಲಿ ಮೂವರು ಆರೋಪಿಗಳ ಬಂಧನ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ದಾವಣಗೆರೆಯಲ್ಲಿ ಮೂವರು ಆರೋಪಿಗಳ ಬಂಧಸಿದ್ದಾರೆ.  ಯಾಸ್ಮೀನ್ ಅಫ್ಜಾ, ಚೈತ್ರಾ ಬಿಸಿ, ಅಶೋಕ್ ನಾಯಕ್ ಬಂಧಿತ ಆರೋಪಿಗಳು. ಆರೋಪಿಗಳು ದಾವಣಗೆರೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂವರು ಮೂವರು ಅಕ್ರಮವಾಗಿ ನೇಮಕವಾಗಿದ್ದರು.

10 ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್​ 6 ರಂದು ಸಿಐಡಿ  ಅಧಿಕಾರಿಗಳು 10 ಜನ ಆರೋಪಿಗಳನ್ನು ಬಂಧಿಸಿದ್ದರು. ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 465, 768, 471ರ ಅಡಿ ಎಫ್​ಐಆರ್​ ದಾಖಲಾಗಿತ್ತು. ಎಫ್​ಐಆರ್ ದಾಖಲಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಈ ಸಂಬಂಧ ತನಿಕೆ ಆರಂಭಿಸಿದ್ದ ಸಿಐಡಿ ಅಧಿಕಾರಿಗಳಿಗೆ, ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿ ಅಕ್ರಮದಲ್ಲಿ ಭಾಗಿಯಾದವರಿಗೆ ಶೋಧಕಾರ್ಯ ನಡೆಸಿದ್ದಾರೆ.

ಘಟನೆ ಹಿನ್ನೆಲೆ 2014-15 ರಲ್ಲಿ ನಡೆದ ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಸೌಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 465, 768, 471ರ ಅಡಿ ಎಫ್​ಐಆರ್​ ದಾಖಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ತನಿಕೆ ಆರಂಭಿಸಿದ ಸಿಐಡಿ ಅಧಿಕಾರಿಗಳು  11 ಜನರನ್ನು ಬಂಧಸಿದ್ದಾರೆ. ತುಮಕೂರಿನ ಹತ್ತು ಜನ, ವಿಜಯಪುರದ ಓರ್ವ ಶಿಕ್ಷಕನನ್ನು ಸೆರೆ‌ ಹಿಡಿಯಲಾಗಿತ್ತು.

1. ಶಮೀನಾಜ್, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಬೋರನ ಕಣಿವೆ, ಚಿಕ್ಕನಾಯಕನಹಳ್ಳಿ.

2. ರಾಜೇಶ್ವರಿ ಜಗ್ಲಿ, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ, ಕೊಡವತ್ತಿ, ಕುಣಿಗಲ್

3. ಕಮಲಾ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಅಲ್ದೂರ್, ತಿಪಟೂರು

4. ನಾಗರತ್ನ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ನಾಗಸಂದ್ರ ಕುಣಿಗಲ್.

5. ದಿನೇಶ್, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹುಲಿಕಲ್, ತುರುವೇಕೆರೆ.

6. ನವೀನ್ ಹನುಮಗೌಡ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕಮ್ಲಾಪುರ, ಚಿಕ್ಕನಾಯಕನಹಳ್ಳಿ.

7. ನವೀನ್ ಕುಮಾರ್, ಶಿಕ್ಷಕರು, ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಅಮೃತೂರು ಕುಣಿಗಲ್.

8. ದೇವೇಂದ್ರ ನಾಯ್ಕ್, ಶಿಕ್ಷಕರು, ಸರ್ಕಾರಿ ಕಂಪೋಸಿಟ್ ಪ್ರೌಢಶಾಲೆ ಕೆ.ಮತ್ತಿಘಟ್ಟ ಗುಬ್ಬಿ.

9. ಹರೀಶ್ ಆರ್, ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಹೊಳಗೇರಿಪುರ, ಕುಣಿಗಲ್.

10 ಪ್ರಸನ್ನ ಬಿಎಂ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಹುಲಿಕೆರೆ, ತುರುವೇಕೆರೆ.

11. ಮಹೇಶ ಶ್ರೀಮಂತ ಸೂಸಲಾಡಿ, ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ ಹತ್ತಳ್ಳಿ, ಚಡಚಣ ತಾಲ್ಲೂಕು ವಿಜಯಪುರ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ ನಾಪತ್ತೆಯಾಗಿದ್ದು ಸಿಐಡಿ ತಂಡ ಶೋಧಿಸುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Wed, 21 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ