ವಿಜಯಪುರ: ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಇನ್ನೊಂದೆಡೆ, ಬೈಕಿನಿಂದ ಬಿದ್ದ ಬೈಕ್ ಸವಾರನ ಮೇಲೆ KSRTC ಬಸ್ ಹರಿದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಜಯಪುರ, ನ.30: ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ (Accident) ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತುಂಬಗಿ ಗ್ರಾಮದ ಮೆಹಬೂಬ್ (35) ಮತ್ತು ಹುಸೇನ್ (38) ಮೃತ ದುರ್ದೈವಿಗಳು.
ಮೆಹಬೂಬ್ ಮತ್ತು ಹುಸೇನ್ ಬೈಕ್ ಮೂಲಕ ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಅಂಗಾಂಗ ರವಾನೆ ವೇಳೆ ಆಂಬುಲೆನ್ಸ್ ಅಪಘಾತ; ಸ್ವಂತ ಗಾಯ ಲೆಕ್ಕಿಸದೆ ರೋಗಿಗೆ ಶ್ವಾಸಕೋಶ ಕಸಿ ಶಸ್ತ್ರಕ್ರಿಯೆ ನಡೆಸಿದ ವೈದ್ಯ
ಬೈಕ್ ಸವಾರನ ಮೇಲೆ ಹರಿದ ಕೆಎಸ್ಆರ್ಟಿಸಿ ಬಸ್
ಬೆಂಗಳೂರು: ಬೈಕಿನಿಂದ ಬಿದ್ದ ಸವಾರನ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಬೆಂಗಳೂರು ನಗರದ ಮೈಸೂರು ಸ್ಯಾಂಡಲ್ ಸೋಫ್ ಪ್ಯಾಕ್ಟರಿ ಬಳಿ ನಡೆದಿದೆ. ಸಿದ್ದಾನಂಜಪ್ಪ (68) ಮೃತ ದುರ್ದೈವಿ.
ನವೆಂಬರ್ 21 ರಂದು ಸಂಜೆ 6 ಗಂಟೆ ಸುಮಾರಿಗೆ ನಡೆದಿದ್ದ ಅಫಘಾತ ಇದಾಗಿದ್ದು, ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಅಪಘಾತದ ದೃಶ್ಯವಾಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ