ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ‌ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2024 | 9:50 PM

ವಿಜಯಪುರ, ಜು.12: ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal)​ ವಿರುದ್ದದ ಆರೋಪವನ್ನು​ ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಹೈಕೋರ್ಟ್(High Court) ದಂಡ ವಿಧಿಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು.

ಪ್ರಕರಣ ವಜಾ ಮಾಡಿದ ಹೈಕೋರ್ಟ್

ಈ ಕುರಿತು ಇಂದು(ಶುಕ್ರವಾರ) ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್​ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್​ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್​ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯತ್ನಾಳ್​ ಟ್ವೀಟ್​

ಇದನ್ನೂ ಓದಿ:ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು”  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ