ಸಿಂದಗಿ: ಪಂಚರತ್ನ ಯಾತ್ರೆಯಲ್ಲಿ ಕುಮಾರಸ್ವಾಮಿ ಜೊತೆ ಹೆಜ್ಜೆ ಹಾಕುತ್ತಿದ್ದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ನಡುರಾತ್ರಿ ಹೃದಯಾಘಾತಕ್ಕೆ ಬಲಿ

ಜಿಲ್ಲೆಯ ಆಲಮೇಲ ತಾಲೂಕಿನ ಮಜಾಳ ಗ್ರಾಮದ‌ ಶಿವಾನಂದ ಪಾಟೀಲ್ ಸೋಮಜಾಳ(54) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಸಿಂದಗಿ: ಪಂಚರತ್ನ ಯಾತ್ರೆಯಲ್ಲಿ ಕುಮಾರಸ್ವಾಮಿ ಜೊತೆ ಹೆಜ್ಜೆ ಹಾಕುತ್ತಿದ್ದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ನಡುರಾತ್ರಿ ಹೃದಯಾಘಾತಕ್ಕೆ ಬಲಿ
ಶಿವಾನಂದ ಪಾಟೀಲ್ ಸೋಮಜಾಳ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 21, 2023 | 10:56 AM

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆಗೊಂಡಿದ್ದ ಶಿವಾನಂದ ಸೋಮಜಾಳ (54) ನಿಧನರಾಗಿದ್ದಾರೆ. ಇಂದು(ಜ.20) ನಾಗಠಾಣ ಕ್ಷೇತ್ರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಸಾಯಂಕಾಲ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.

ರಾತ್ರಿ‌ 9 ರ ವೇಳೆ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಸೋಮಜಾಳ ಅವರನ್ನ ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ತೀವ್ರ ಹೃದಯಾಘಾತದಿಂದ ಶಿವಾನಂದ ಮೃತಪಟ್ಟಿದ್ದಾರೆ ಎಂದು ವೈದ್ಯರ ಹೇಳಿದ್ದಾರೆ. ಹದಿನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದು, ಇತ್ತೀಚಿನ‌ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 am, Sat, 21 January 23