AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬಿಎಸ್​ಎನ್​ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ

ಭಾರತ ಸಂಚಾರ ನಿಗಮ ಲಿಮಿಟೆಡ್​ನ (BSNL) ಬೆಳಗಾವಿ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ವಿಕಾಸ್ ಜೈಕರ್ ಅವರ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ: ಬಿಎಸ್​ಎನ್​ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ವಿಕಾಸ್ ಜೈಕರ್ ಬಳಕೆ ಮಾಡುತ್ತಿದ್ದ ವೈಟ್ ಬೋರ್ಡ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Feb 12, 2024 | 2:49 PM

Share

ವಿಜಯಪುರ, ಫೆ.12: ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ಆಗಿ ವಿಕಾಸ್ ಜೈಕರ್ ಕೆಲಸ ಮಾಡುತ್ತಿದ್ದಾರೆ. ಬಿಎಸ್​ಎಲ್​ನಿಂದ ಕಾರು ನೀಡಿದ್ದರೂ ವಿಕಾಸ್ ಜೈಕರ್ ಅವರು ಬೆಳಗಾವಿಯಿಂದ ಖಾಸಗಿ (ವೈಟ್ ಬೋರ್ಡ್) ಕಾರು ಮೂಲಕ ವಿಜಯಪುರದ ಕಚೇರಿಗೆ ಹೋಗಿದ್ದರು.

ಇದನ್ನೂ ಓದಿ: ಕಲಬುರಗಿ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡ್ತಿದ್ದ ಲಾರಿ ಜಪ್ತಿ: ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ?

ಬಿಎಸ್ಎನ್ಎಲ್​ನಿಂದ KA 22 C 8059 ಎಲೋ ಬೋರ್ಡ್ ಕಾರ್ ನೀಡಲಾಗಿತ್ತು. ಈ ಕಾರಿನ ಬದಲಾಗಿ ವಿಕಾಸ್ ಜೈಕರ್ ಅವರು KA 22 MB 0494 ನಂಬರಿನ ಕಾರ್ ಬಳಕೆ ಮಾಡುತ್ತಿದ್ದರು. ಈ ವಿಕಾಸ್ ಜೈಕರ್ ಅವರನ್ನು ಬಿಎಸ್ಎನ್ಎಲ್ ಸಿನೀಯರ್ ಆಫೀಸ್ ಅಸೋಸಿಯೇಟ್ ಸುರೇಶ ಬಿರಾದಾರ್ ಅವರು ಪ್ರಶ್ನೆ ಮಾಡಿದ್ದರು.

ಬೆಳಗಾವಿಂದ ವಿಜಯಪುರಕ್ಕೆ ಪ್ರತಿಬಾರಿ ಪತ್ನಿಯನ್ನು ಕರೆದುಕೊಂಡು ಹೋಗುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಜನರಲ್ ಮ್ಯಾನೇಜರ್ ಬೇರೆ ಕಾರು ಬಳಕೆ ಮಾಡುತ್ತಿರುವ ಕುರಿತು ಬಿಎಸ್ಎನ್ಎಲ್ ನೌಕರರೊಬ್ಬರು 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ 112 ಪೊಲೀಸರು ಪರಿಶೀಲನೆ ನಡೆಸಿ ವಿಕಾಸ್ ಜೈಕರ್ ಬಳಕೆ ಮಾಡುತ್ತಿದ್ದ ಬೇರೆ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಗಾಂಧಿಚೌಕ್ ಠಾಣೆಯ ಪೊಲೀಸರು ವಿಚಾರಣೆ ಕೂಡ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More