AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್

vijayapura Temple Theft: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಒಂದು ತಿಂಗಳ ಬಳಿಕ ಪೊಲೀಸರು ಭೇದಿಸಿದ್ದಾರೆ. ರೀಲ್ಸ್ ನೋಡಿ ದೇಗುಲದಲ್ಲಿ ಕಳ್ಳತನ ಮಾಡಿದ್ದ ಗುಜರಾತ್ ಮೂಲದ ಮೂವರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್
ಬಂಧಿತರುImage Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 07, 2026 | 4:59 PM

Share

ವಿಜಯಪುರ, ಆಗಸ್ಟ್​​ 07: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನ ಐತಿಹಾಸಿಕ ಐತಿಹ್ಯ ಹೊಂದಿರುವ ದೇವಸ್ಥಾನ. ಇದೇ ದೇವಸ್ಥಾನದಲ್ಲಿನ ಇತ್ತೀಚೆಗೆ ಬೆಳ್ಳಿ ಮೂರ್ತಿಯ ಕಳ್ಳತನವಾಗಿತ್ತು (temple theft). ಘಟನೆ ನಡೆದು ಒಂದು ತಿಂಗಳ ಬಳಿಕ ಕೃತ್ಯವೆಸಗಿದ್ದ ಗುಜರಾತ್​ ಮೂಲದ ಖದೀಮರನ್ನು ಜಿಲ್ಲಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರೀಲ್ಸ್ ನೋಡಿ ಕಳ್ಳತನ ಮಾಡಿದವರು ಇದೀಗ ಕಂಬಿ ಎಣಿಸುವಂತಾಗಿದೆ.

ನಡೆದಿದ್ದೇನು?

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಹಾಗೂ ಪವಾಡ ದೇವಸ್ಥಾನವೆಂದೇ ಖ್ಯಾತಿ ಪಡೆದ ಪವಾಡ ಬಸವೇಶ್ವರ ದೇವಸ್ಥಾನದ ಬಸವಣ್ಣನವರ ಬೆಳ್ಳಿ ಮೂರ್ತಿಯನ್ನು ಕಳ್ಳತನವಾಗಿತ್ತು. ಕಳೆದ ಜುಲೈ 6ರಂದು ಘಟನೆ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ದೇಗುಲದಲ್ಲಿದ್ದ ಅರ್ಧ ಕೋಟಿ ರೂ ಮೌಲ್ಯದ, 32 ಕೆಜಿ ತೂಕದ ಬೆಳ್ಳಿ ಮೂರ್ತಿಯನ್ನು ಎಗರಿಸಿಕೊಂಡು ಹೋಗಿದ್ದರು. ಘಟನೆ ನಡೆದಾಗ ಸ್ಥಳೀಯ ಕಳ್ಳರೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ, ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ತನಿಖೆ ನಡೆಸಿದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ.

ರೀಲ್ಸ್ ನೋಡಿ ಸ್ಕೆಚ್ ಹಾಕಿದ್ದ ಖದೀಮರು

‌ಕಳ್ಳತನ ಮಾಡುವ ಉದ್ದೇಶದಿಂದಲೇ ಖದೀಮರು ಗೂಗಲ್‌ನಲ್ಲಿ ದೇಗುಲಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಹೀಗೆ ಖದೀಮರು ಸರ್ಚ್ ಮಾಡುತ್ತಿದ್ದಾಗ, ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದ ಬಗ್ಗೆ ಮಾಹಿತಿ ಸಿಕ್ಕಿದೆ. ಆಗ ದೇಗುಲದ ಬೆಳ್ಳಿ ಮೂರ್ತಿ ಕಣ್ಣಿಗೆ ಬಿದ್ದಿದೆ. ಕೂಡಲೇ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ಮೂರ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿ, ಗುಜರಾತ್‌ನಿಂದ ಕಾರಿನಲ್ಲಿ ಬಂದು ಕಳ್ಳತನ ನಡೆಸಿ ಪರಾರಿಯಾಗಿದ್ದರು. ಸತತ ಒಂದು ತಿಂಗಳ ಕಾಲ ತನಿಖೆ ನಡೆಸಿದ ಪೊಲೀಸರು, ಗುಜರಾತ್ ಮೂಲದ ಸುರೇಶಕುಮಾರ್ ಸೋನಿ (51), ಬ್ರಹ್ಮಾರ್ ನೇಟ್ (35) ಮತ್ತು ಇಂದ್ರಜೀತ್ ನೇಟ್ (33) ಬಂಧಿತರು.

ಪವಾಡ ಬಸವೇಶ್ವರರ ದೇವಸ್ಥಾನ ಕಳ್ಳತನದಲ್ಲಿ ಸ್ಥಳಿಯ ಕಳ್ಳರ ಕೈವಾಡ ಇರಬಹುದು ಎಂದು ಮೊದಲು ಪೊಲೀಸರು ಶಂಕಿಸಿದ್ದರು. ನಂತರ ಸುತ್ತಮುತ್ತಲ ಭಾಗದ ಸಿಸಿ ಕ್ಯಾಮೆರಾದಲ್ಲಿ ವಿಡಿಯೋ ಪರಿಶೀಲನೆ ಮಾಡಿದಾಗ ಗುಜರಾತ್ ಮೂಲದ GJ-01-KS 4317 ಸಂಖ್ಯೆಯ ನೋಂದಣಿ ವಾಹನ ಸಂಚಾರ ಮಾಡಿದ್ದು, ಕಂಡುಬಂದಿತ್ತು. ಈ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರ ಬಲೆಗೆ ಆರೋಪಿಗಳು ಬಿದ್ದಿದ್ದಾರೆ.

52.70 ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ 

ಬಂಧಿತ ಆರೋಪಿಗಳು ಕದ್ದ ಮೂರ್ತಿಯನ್ನು ಕರಗಿಸಿ ಗಟ್ಟಿಗಳನ್ನಾಗಿ ಪರಿವರ್ತಿಸಿದ್ದರು. ಸದ್ಯ ಖದೀಮರಿಂದ 23 ಕೆಜಿ ಗಟ್ಟಿ ಬೆಳ್ಳಿ, 4 ಕೆಜಿ ಮೂರ್ತಿ ಕತ್ತರಿಸಿದ ತುಂಡುಗಳು, 67 ಸಾವಿರ ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಸೇರಿದಂತೆ ಒಟ್ಟು 52.70 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಯುವತಿ ಕುಟುಂಬಸ್ಥರಿಂದ ಹಲ್ಲೆ ಆರೋಪ: ದೂರು-ಪ್ರತಿದೂರು ದಾಖಲು

ದೂರದ ಗುಜರಾತಿನಿಂದ ಬಂದು ರಾಜ್ಯದ ಗಡಿ ದಾಟಿ ಬಂದು ಕಳ್ಳತನ ಮಾಡಿದ್ದ ಅಂತಾರಾಜ್ಯ ಖದೀಮರನ್ನು ಕೊನೆಗೂ ವಿಜಯಪುರ ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ಪೊಲೀಸರ ಈ ಚಾಣಾಕ್ಷ ತನಿಖೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ