ತುಮಕೂರು, ಜನವರಿ 12: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ವಾಹನದ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದರೆ (death), ನಾಲ್ವರಿಗೆ ಗಾಯಗಳಾಗಿರುವಂತಹ ಘಟನೆ ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಚಾಲಕ ಬಸವರಾಜು (40), ಸುರೇಶ್ (28) ಮೃತ ದುರ್ದೈವಿಗಳು.
ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಲು ಬೆಂಗಳೂರಿನತ್ತ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು
ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬಳಿ ನಡೆದಿದೆ. ಸಾಗರ್ ಬೈಚಬಾಳ್(21), ಸುದೀಪ್ ಗುದ್ದಿ(21) ಮೃತರು. ತೋಟದಿಂದ ಮನೆಗೆ ಬೈಕ್ ಸವಾರರು ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಬಸ್ಗೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೈಕ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕನ್ನಸಂದ್ರ ಗೇಟ್ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ತ್ರಿಬಲ್ ಮರ್ಡರ್: ಇಬ್ಬರು ಮಕ್ಕಳು, ಹೆಂಡ್ತಿಯನ್ನು ಕೊಂದ ಹೋಂ ಗಾರ್ಡ್!
ಕರಡಗೂರು ಗ್ರಾಮದ ಸುಮಿತ್ರ ಮೃತ ಮಹಿಳೆಯಾಗಿದ್ದು, ಲಕ್ಷ್ಮಯ್ಯಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸಕ್ಕೆ ಹೊರಟಿದ್ದವರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.