ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು

Vijayapura car accident: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು
ಕಾರು ಅಪಘಾತ
Image Credit source: tv9 kannada
Edited By:

Updated on: Jul 10, 2026 | 8:56 PM

ವಿಜಯಪುರ, ಜುಲೈ 10: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ, ಇಬ್ಬರು ಪುತ್ರರು ಸೇರಿದಂತೆ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ (death) ಘಟನೆ ವಿಜಯಪುರ (vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ್(20) ಮತ್ತು ಜಶ್ವಂತ(18) ಮೃತರು. ತಂದೆ ರಾಘವೇಂದ್ರ(41)ಗೆ ಗಂಭೀರ ಗಾಯವಾಗಿದೆ.

ನಿದ್ದೆಯ ಮಂಪರೇ ದುರಂತಕ್ಕೆ ಕಾರಣ?

ಕುಟುಂಬವು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಶಿರಡಿಗೆ ಹೊರಟಿದ್ದರು. 20 ವರ್ಷದ ಮಗ ಹರಿವೆಂಕಟರಾಮ್​​ ಕಾರು ಚಲಾಯಿಸುತ್ತಿದ್ದ. ಈ ವೇಳೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ: ವಿಡಿಯೋ ವೈರಲ್

ಇನ್ನು ಘಟನಾ ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಲಾರಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಹೊರವಲಯದಲ್ಲಿರುವ ಹೈಕೋರ್ಟ್ ಕ್ರಾಸ್ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದು ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜುಗುಜ್ಜಾಗಿದೆ.

ಇದನ್ನೂ ಓದಿ: ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್: ಎಂಟು ಮಕ್ಕಳಿಗೆ ಗಾಯ

ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಶಾಲೂ ಸೇರಿ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕಲಬುರಗಿ ಟ್ರಾಫಿಕ್-01 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Fri, 10 July 26

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us