AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯವಾಗಿದೆ.

ವಿಜಯಪುರ: ಮೊರಾರ್ಜಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಮೂವರು ವಿದ್ಯಾರ್ಥಿಗಳಿಗೆ ಗಾಯ
ವಸತಿ ಶಾಲೆಯಲ್ಲಿ ಅಗ್ನಿ ಅವಘಡ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 27, 2024 | 3:58 PM

Share

ವಿಜಯಪುರ, (ಫೆಬ್ರವರಿ 27): ಜಿಲ್ಲೆಯ ಮುದ್ದೇಬಿಹಾಳ(muddebihal) ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (vijayapura residential school ) ಕೊಠಡಿಯೊಂದರಲ್ಲಿ ಅಗ್ನಿ ಅವಘಡ (fire Accident) ಸಂಭವಿಸಿದೆ. ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಝಳ ತಾಕಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ.

ಸಾಗರ್, ಸಮರ್ಥ, ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಸುಟ್ಟು ಗಾಯಗಳಾಗಿವೆ. ಇನ್ನು ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಇದನ್ನೂ ಓದಿ: ತಾಂಡಾಗಳಲ್ಲಿ ತಾಂಡವವಾಡುತ್ತಿದೆ ರಣಭೀಕರ ಬರ, ಹೊಟ್ಟೆಪಾಡಿಗಾಗಿ ದೊಡ್ಡ ನಗರಗಳಿಗೆ ಗುಳೆ ಹೋದ ಜನ

ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಘಟನೆ ನಡೆದಿದೆ. ಅಗ್ನಿ ಅವಘಡದಿಂದಾಗಿ ಕೋಣೆಯ ಗೋಡೆಗೆ ಆವರಿಸಿರುವ ಹೊಗೆಯನ್ನು ಸ್ವಚ್ಛ ಮಾಡುವ ಕಾರ್ಯ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

ಇನ್ನು ಶಾಲೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಭೇಟಿ ನೀಡಿ ಘಟನೆಯ ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ವರದಿ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್