ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು

ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ಹೊರಡುವ ರೈಲುಗಳು ಬಾಗಲಕೋಟೆಯಲ್ಲಿ ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿದೆ, ದಿನಾಂಕ ಇಲ್ಲಿದೆ ಮಾಹಿತಿ.

ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು
ರೈಲು
Follow us
ವಿವೇಕ ಬಿರಾದಾರ
|

Updated on:Sep 24, 2024 | 8:28 AM

ವಿಜಯಪುರ, ಸೆಪ್ಟೆಂಬರ್​ 24: ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ವಿಜಯಪುರಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ವಲಯ (South Western Railway) ಶಾಕ್​ ನೀಡಿದೆ. ಈ ಊರುಗಳಿಂದ ಹೊರಡುವ ರೈಲುಗಳು (Train) ಬಾಗಲಕೋಟೆಯಲ್ಲಿ (Bagalkote) ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ ಸಂಚಾರ ರದ್ದಾಗಲಿದೆ, ದಿನಾಂಕ ಇಲ್ಲಿದೆ ಮಾಹಿತಿ.

ಸೆಪ್ಟೆಂಬರ್​ 29 ರಿಂದ ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್​ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರ ಬಾಗಲಕೋಟೆ-ವಿಜಯಪುರ ನಡುವೆ ರದ್ದಾಗಲಿದೆ. ಕೆಲವು ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ರೈಲು ರದ್ದು

  1. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 06919 ಎಸ್‌ಎಸ್ಎಸ್ ಹುಬ್ಬಳ್ಳಿ- ವಿಜಯಪುರ ಪ್ಯಾಸೆಂಜ‌ರ್ ವಿಶೇಷ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟೆ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ.
  2. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಪ್ಯಾಸೆಂಜ‌ರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.
  3. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಬಾಗಲಕೋಟೆವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ.
  4. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ವಿಜಯಪುರ ಬದಲು ಬಾಗಲಕೋಟೆ ನಿಲ್ದಾಣದಿಂದ ತನ್ನ ನಿಗದಿತ ವೇಳಾಪಟ್ಟಿ ಪ್ರಕಾರ ಹೊರಡಲಿದೆ. ವಿಜಯಪುರ ಮತ್ತು ಬಾಗಲಕೋಟ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದಾಗಲಿದೆ.
  5. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1ರವರೆಗೆ ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್​ಪ್ರೆಸ್ ರೈಲು ವಿಜಯಪುರವರೆಗೆ ಮಾತ್ರ ಸಂಚರಿಸಲಿದೆ. ವಿಜಯಪುರ-ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  6. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್‌ಪ್ರೆಸ್ ರೈಲು ಬಾಗಲಕೋಟೆ ನಿಲ್ದಾಣದ ಬದಲು ವಿಜಯಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ರೈಲು ಸಂಚಾರ ಭಾಗಶಃ ರದ್ದಾಗಲಿದೆ.
  7. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.
  8. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2ರವರೆಗೆ ವಿಜಯಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ವಿಜಯಪುರದ ಬದಲು ಗದಗ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ. ವಿಜಯಪುರ-ಗದಗ ನಿಲ್ದಾಣಗಳ ನಡುವೆ ರೈಲು ಭಾಗಶಃ ರದ್ದಾಗಲಿದೆ.

ನಿಯಂತ್ರಣ:

  1. ಅಕ್ಟೋಬರ್ 2ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11305 ಸೋಲಾಪುರ-ಹೊಸಪೇಟೆ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಲಚ್ಯಾಣ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

ವಿಜಯಪುರ ಜಿಲ್ಲೆಯ ಜಗವ ಬೆಳಗಿದ ಮಹಾಮಹಿಮರ ಸುಕ್ಷೇತ್ರ ಲಚ್ಯಾಣದ ಶ್ರೀ ಸಿದ್ದಲಿಂಗ ಮಹಾರಾಜರ ಜಾತ್ರೆ ಇದೆ. ಹೀಗಾಗಿ ಬಸವ ಎಕ್ಸ್‌ಪ್ರೆಸ್ ರೈಲುಗಳು ಸೆಪ್ಟೆಂಬರ್ 24 ಮತ್ತು 25 ರಂದು ಲಚ್ಯಾಣ ನಿಲ್ದಾಣದಲ್ಲಿ ಎರಡು ನಿಮಿಷಗಳ ಕಾಲ ನಿಲ್ಲಲಿದೆ. ಈ ನಿಲ್ದಾಣದಲ್ಲಿ ಬಸವ ಎಕ್ಸ್‌ಪ್ರೆಸ್​ನ ಆಗಮನ ಮತ್ತು ನಿರ್ಗಮನದ ವಿವರಗಳು ಹೀಗಿವೆ:

  1. ರೈಲು ಸಂಖ್ಯೆ 17307: ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ ರೈಲು ಲಚ್ಯಾಣ ನಿಲ್ದಾಣಕ್ಕೆ ಬೆಳಿಗ್ಗೆ 07:23 ಗಂಟೆಗೆ ಆಗಮಿಸಿ, 07:25 ಕ್ಕೆ ಹೊರಡಲಿದೆ.
  2. ರೈಲು ಸಂಖ್ಯೆ 17308: ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್ ರೈಲು ಲಚ್ಯಾಣ ನಿಲ್ದಾಣಕ್ಕೆ ಸಂಜೆ 05:25 ಗಂಟೆಗೆ ಆಗಮಿಸಿ, 05:27 ಕ್ಕೆ ಹೊರಡಲಿದೆ.

ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತಾದಿಗಳಿಗೆ ಅನುಕೂಲವಾಗಲು ಈ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Tue, 24 September 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್