AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ

ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ವಿಜಯಪುರ ನಗರದ ಮಹಲ್ ಹೋಟೆಲ್ ಮುಂಭಾಗ ಏಳೆಂಟು ಜನ ಮಂಗಳಮುಖಿಯರು ಸೇರಿ ಮತ್ತೊಬ್ಬ ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ
ಮಂಗಳಮುಖಿ ಮೇಲೆ ಹಲ್ಲೆ
ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:Jul 31, 2024 | 3:02 PM

Share

ವಿಜಯಪುರ, ಜುಲೈ 31: ಸಾರ್ವಜನಿಕ ಸ್ಥಳದಲ್ಲಿ ಮಂಗಳಮುಖಿಯನ್ನು (Transgender) ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ (Vijayapura) ನಗರ ಬಸ್ ನಿಲ್ದಾಣ ಬಳಿಯ ಲಲಿತ ಮಹಲ್ ಹೋಟೆಲ್ ಮುಂಭಾಗ ಘಟನೆ ನಡೆದಿದೆ. ಮಂಗಳಮುಖಿ ಅಂತ ಹೇಳಿಕೊಂಡು ಹಣ ಕೇಳುತ್ತೀಯಾ ಅಂತ ಏಳೆಂಟು ಮಂಗಳಮುಖಿಯರು ಪ್ಯಾಂಟ್, ಶರ್ಟ್ ಬಿಚ್ಚಿ ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದು, ಖಾರದಪುಡಿ ಎರಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಂಗಲಾಚಿ ಬೇಡಿಕೊಂಡರು ಸಹ ಮಂಗಳಮುಖಿಯರು ಬಿಡುತ್ತಿಲ್ಲ. ಅಲ್ಲದೆ ಮಂಗಳಮುಖಿಯರು ತಮ್ಮ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದಾರೆ. ಮಂಗಳಮುಖಿಯರು ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. 15 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.

ಹಣದ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ

ಚಿಕ್ಕೋಡಿ: ಹಣದ ವಿಚಾರವಾಗಿ ನಡು ರಸ್ತೆಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕನದಾಳ ಗ್ರಾಮದಲ್ಲಿ ನಡೆದಿದೆ. ರೋಹಿತ್ ವಡ್ಡರ್ ಹಲ್ಲೆಗೊಳಗಾದ ವ್ಯಕ್ತಿ. ನಾಗಪ್ಪ ವಡ್ಡರ ಎಂಬಾತನ ಬಳಿ‌ ರೋಹಿತ್​ ವಡ್ಡರ್​ ಎರಡು ಸಾವಿರ ಸಾಲ ಪಡೆದಿದ್ದನು.

ಇದನ್ನೂ ಓದಿ: ಮೊಬೈಲ್​ ಕಳ್ಳತನ: ಅಬ್ದುಲ್ ರಜಾಕ್ ಬಂಧನ

ತೆಗೆದುಕೊಂಡ ಹಣಕ್ಕೆ ಬಡ್ಡಿ ಕೊಡಲು ವಿಳಂಬವಾಗಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಕಲ್ಲಿನಿಂದ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ರೋಹಿತ್ ವಡ್ಡರ್​ನನ್ನು ಹಾರೂಗೇರಿ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ

ವಿಜಯನಗರ: ನಾಲ್ಕು ವರ್ಷದ ಬಾಲಕನ ಮೇಲೆ ನಾಯಿ ದಾಳಿ ಮಾಡಿರುವ ಘಟನೆ ಹೊಸಪೇಟೆ ಪಟ್ಟಣದ ಚಿತ್ತವಾಡ್ಗಿಯಲ್ಲಿ ನಡೆದಿದೆ. ಹೊಸಪೇಟೆಯ ಕಾಕರ ಓಣಿಯ 4 ವರ್ಷದ ಪರಶುರಾಮನ ಕೆನ್ನೆ, ಕಾಲಿಗೆ ಶ್ವಾನ ಕಚ್ಚಿದೆ. ಬಾಲಕನನ್ನು ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಗವಿಯಪ್ಪ ಭೇಟಿ ನೀಡಿ, ಬಾಲಕನ ಆರೋಗ್ಯ ವಿಚಾರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 31 July 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ