Go Back​ ಅನ್ನುವುದು ಶೋಭಾಯಮಾನವಲ್ಲ, ನಮಗೆ ಪ್ರಧಾನಿ ಮೋದಿ-ಕಮಲದ ಚಿಹ್ನೆಯಷ್ಟೇ ಕ್ಯಾಂಡಿಡೇಟ್ ಎಂದ ಶೋಭಾ ಕರಂದ್ಲಾಜೆ

ಗೋ ಬ್ಯಾಕ್​ ಅನ್ನುವುದು ಶೋಭಾಯಮಾನವಲ್ಲ, ನಾನು ಪಕ್ಷಕ್ಕಾಗಿ ತಳಮಟ್ಟದಿಂದ ದುಡ್ಡಿದಿದ್ದೇನೆ, ಕ್ಯಾಬಿನೆಟ್​​ನಲ್ಲಿ ಸೇವೆ ಸಲ್ಲಿಸಿದ್ದೇನೆ, ಒಟ್ಟಿನಲ್ಲಿ ಬಿಜೆಪಿಗಾಗಿ ನನ್ನನ್ನೇ ಅರ್ಪಿಸಿಕೊಂಡಿದ್ದೇನೆ. ಹೀಗಿರುವಾಗ ನನ್ನನ್ನು ಗೋ ಬ್ಯಾಕ್ ಎನ್ನುವುದು ಸರ್ವತಾಸಾಧುವಲ್ಲ ಎಂದು ಪಕ್ಷದ ಹಿರಿಯ ನಾಯಕಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಲಿ ಪರಿಸ್ಥಿತಿಯ ಬಗ್ಗೆ ವ್ಯಾಖ್ಯಾನಿಸಿದ್ದಾರೆ.

Go Back​ ಅನ್ನುವುದು ಶೋಭಾಯಮಾನವಲ್ಲ, ನಮಗೆ ಪ್ರಧಾನಿ ಮೋದಿ-ಕಮಲದ ಚಿಹ್ನೆಯಷ್ಟೇ ಕ್ಯಾಂಡಿಡೇಟ್ ಎಂದ ಶೋಭಾ ಕರಂದ್ಲಾಜೆ
Go Back​ ಅನ್ನುವುದು ಶೋಭಾಯಮಾನವಲ್ಲ -ಶೋಭಾ ಕರಂದ್ಲಾಜೆ ಅನಿಸಿಕೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಸಾಧು ಶ್ರೀನಾಥ್​

Updated on:Mar 13, 2024 | 1:50 PM

ವಿಜಯಪುರ, ಮಾರ್ಚ್​​ 13: ಗೋ ಬ್ಯಾಕ್​ ಅನ್ನುವುದು ಶೋಭಾಯಮಾನವಲ್ಲ, ನಾನು ಪಕ್ಷಕ್ಕಾಗಿ ತಳಮಟ್ಟದಿಂದ ದುಡ್ಡಿದಿದ್ದೇನೆ, ಕ್ಯಾಬಿನೆಟ್​​ನಲ್ಲಿ ಸೇವೆ ಸಲ್ಲಿಸಿದ್ದೇನೆ, ಒಟ್ಟಿನಲ್ಲಿ ಬಿಜೆಪಿಗಾಗಿ ನನ್ನನ್ನೇ ಅರ್ಪಿಸಿಕೊಂಡಿದ್ದೇನೆ. ಹೀಗಿರುವಾಗ ನನ್ನನ್ನು ಗೋ ಬ್ಯಾಕ್​ (Go Back) ಎನ್ನುವುದು ಸರ್ವತಾಸಾಧುವಲ್ಲ- ಇದು ಪಕ್ಷದ ಹಿರಿಯ ನಾಯಕಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರ ಸದ್ಯದ ಮನಸ್ಥಿತಿ. ಆದರೆ ಹಾಗಂತ ಅವರ ಕ್ಷೇತ್ರದಲ್ಲಿನ ಪಕ್ಷದ ಕೆಲ ಕಾರ್ಯಕರ್ತರು, ನಾಯಕರ ಅಭಿಪ್ರಾಯ ಇದಕ್ಕೆ ತದ್ವಿರುದ್ಧವಾಗಿದೆ ಎಂಬುದು ಗಮನಾರ್ಹ ಸಂಗತಿ. ತಾಜಾ ಬೆಳವಣಿಗೆಯಲ್ಲಿ…

17ನೆಯ ಲೋಕಸಭೆಗಾಗಿ ನಾಳೆ ಅಥವಾ ನಾಡಿದ್ದು ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಯಿದೆ. ಅದರ ಜೊತೆಜೊತೆಗೆ ಆಡಳಿತಾರೂಢ ಬಿಜೆಪಿ ಪಕ್ಷವು ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಇದು ಒಂದು ರೀತಿ ಕಗ್ಗಂಟಾಗಿದ್ದು ಪಕ್ಷಕ್ಕಷ್ಟೇ ಅಲ್ಲ; ಪಕ್ಷದ ಹಾಲಿ ಸಂಸದರಿಗೂ ಇರುಸುಮುರುಸು ತಂದಿರುವುದು ಸುಳ್ಳಲ್ಲ. ಉದಾಹರಣೆಗೆ ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಉತ್ತರ ಸಂಸದೀಯ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಮುಳುಗುನೀರು ತಂದಿರುವುದು ಅವರ ಅಭಿಮಾನಿಗಳಿಗೆ ಆತಂಕದ ವಿಚಾರವಾಗಿದೆ.

ಈ ಬಗ್ಗೆ ವಿಜಯಪುರ ನಗರದಲ್ಲಿ (Vijayapura) ಇಂದು ಬುಧವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ್ದಾರೆ. ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್​ ನೀಡ್ತಾರೆಂಬ ವಿಚಾರವನ್ನು ಪ್ರಸ್ತಾಪಿಸಿದ ಶೋಭಾ ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ತೇನೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್​ ನೀಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಾರಾಸಗಟಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಬಗ್ಗೆ ಮಾತನಾಡಿದ ಅವರು ನಾನು ಹೆತ್ತ ತಾಯಿಗೆ ದ್ರೋಹ ಮಾಡಿಲ್ಲ. ಒಮ್ಮೆ ಟಿಕೆಟ್ ಕೊಟ್ಟರೆ ಮುಗೀತು, ಅವರ ಪರವಾಗಿಯೇ ಕೆಲಸ ಮಾಡ್ತೇವೆ ಎಂಬುದ ಅರ್ಥ ಮಾಡಿಕೊಳ್ಳಬೇಕು. ಹಾಗಂತ ಯಾರೇ ಅಭ್ಯರ್ಥಿಯಾಗಲಿ ತಮ್ಮ ಸೋಲನ್ನು ಮತ್ತೊಬ್ಬರ ಮೇಲೆ ಹೇಳೋದು ದ್ರೋಹ ಬಗೆದಂತೆ. ಯಾರಿಗೆ ಟಿಕೆಟ್​ ನೀಡಬೇಕೆಂದು ನಮ್ಮ ಹಿರಿಯರು ತೀರ್ಮಾನಿಸ್ತಾರೆ ಎಂದು ವಿಜಯಪುರ ನಗರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇರ ನುಡಿಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ

ಇನ್ನು ತಮ್ಮ ವಿರುದ್ಧದ ಅಭಿಯಾನ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲುವ ಕ್ಷೇತ್ರ ನನ್ನದಾಗಿದೆ, ಹಾಗಾಗಿ ಸಹಜವಾಗಿಯೇ ಬೇಡಿಕೆ ಇದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನ 2 ಬಾರಿ ನನ್ನನ್ನು ಗೆಲ್ಲಿಸಿದ್ದಾರೆ. ಬೇರೆಯವರು ಟಿಕೆಟ್ ಕೇಳಿದ್ದು ತಪ್ಪಲ್ಲ, ಆದ್ರೆ ಹಾಲಿ ಸಂಸದೆಯಾಗಿ ನನಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಹೊರಗಿನವರು ಬಂದು ಗೋಬ್ಯಾಕ್​ ಅಭಿಯಾನ ಮಾಡುತ್ತಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ? ‌ನಾನು ವಿಚಲಿತಳಾಗಿಲ್ಲ, ನಮ್ಮ ಕಾರ್ಯಕರ್ತರು ಸಹ ವಿಚಲಿತರಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯದಲ್ಲೇ ಭಾರತದಲ್ಲಿ ಅತಿದೊಡ್ಡ ಪ್ರಜಾತಂತ್ರದ ಚುನಾವಣೆ ನಡೆಯಲಿದೆ. ಎಲ್ಲ ವರ್ಗದ ವಯೋಮಾನದವರಿಗೆ ಮತದಾನದ ಹಕ್ಕು ನೀಡಲಾಗಿದೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ಆಗುತ್ತಾರೆ. ಮೋದಿ 10 ವರ್ಷಗಳಲ್ಲಿ ದೇಶದ ಗೌರವ, ಭದ್ರತೆಗಾಗಿ ಕೆಲಸ‌ ಮಾಡಿದ್ದಾರೆ. ಮೋದಿ ಪ್ರಧಾನಿಯಾದ ಮೇಲೆ ದೇಶದ ಮತ್ತು ಸೈನ್ಯದ ದಿಕ್ಕು ಬದಲಾಗಿದೆ. ಈ ಹಿಂದೆ ಭಾರತದ ಪ್ರಧಾನಿ ಹೋದರೆ ಎದ್ದು‌ನಿಂತು ಗೌರವ ಕೊಡ್ತಿರಲಿಲ್ಲ. ಆದರೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿದೆ. ಯಾವುದೇ ದೇಶಕ್ಕೆ ಹೋದರೂ ಭಾರತಕ್ಕೆ ಗೌರವ ಸಿಗುತ್ತಿದೆ ಎಂದು ಶೋಭಾ ಹೆಮ್ಮೆಯಿಂದ ಹೇಳಿದರು.

ನಮಗೆ ಪ್ರಧಾನಿ ಮೋದಿ ಹಾಗೂ ಕಮಲದ ಚಿಹ್ನೆಯಷ್ಟೇ ಕ್ಯಾಂಡಿಡೇಟ್!

ಲೋಕಸಭಾ ಚುನಾವಣೆ ಸಮ್ಮುಖದಲ್ಲಿ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಈ ಬಾರಿ ಹಾವೇರಿ ಕ್ಷೇತ್ರದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆ ನೀಡುವ ಮತ್ತು ಮೈಸೂರು ಕ್ಷೇತ್ರದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪೋ ವಿಚಾರವಾಗಿ ಮಾತನಾಡಿದ ಶೋಭಾ ನಾನೀಗ ಯಾವುದರ ಬಗ್ಗೆಯೂ ಮಾತನಾಡಲ್ಲ. ಎಲ್ಲವನ್ನು ಕೇಂದ್ರ ತೀರ್ಮಾನ ಮಾಡುತ್ತದೆ. ಯಾರಿಗೆ ಟಿಕೆಟ್ ಕೊಡಬೇಕು ಯಾರು ಎಲ್ಲಿ ಬಂದರೆ ಅನುಕೂಲ. ಜಾತಿ ಸಮೀಕರಣ, ಸೋಶಿಯಲ್ ಇಂಜಿನಿಯರಿಂಗ್ ಮಾಡಿ ಭಾಗಗಳನ್ನ ವಿಂಗಡಿಸಿ ಟಿಕೆಟ್ ನೀಡಲಾಗುತ್ತದೆ. ಕೆಲವರು ಕೆಲಸ ಮಾಡಿರುತ್ತಾರೆ, ಆದರೂ ಅವರಿಗೆ ಟಿಕೆಟ್ ತಪ್ಪುತ್ತೆ. ಇದೆಲ್ಲ ನಮ್ಮ ಹಿರಿಯರು ತೀರ್ಮಾನ ಮಾಡುತ್ತಾರೆ. ನಮಗೆ ಪ್ರಧಾನಿ ಮೋದಿ ಹಾಗೂ ಕಮಲದ ಚಿಹ್ನೆಯಷ್ಟೇ ಕ್ಯಾಂಡಿಡೇಟ್! ನಮಗೆ ಟಿಕೆಟ್ ಸಿಗಲಿ ಬಿಡಲಿ ಮೋದಿಗಾಗಿ ಕೆಲಸ ಮಾಡುವವರು ನಾವು. ಮೋದಿಯವರ ಮೂಲಕ ದೇಶಕ್ಕಾಗಿ ಕೆಲಸ ಮಾಡುವವರು. ಟಿಕೆಟ್ ವಿಚಾರದಲ್ಲಿ ಅಸಮಾಧಾನದಲ್ಲಿರುವ ಅಭ್ಯರ್ಥಿಗಳನ್ನು ಸಮಾಧಾನ ಮಾಡುತ್ತೇವೆ. ನಮ್ಮ ಹಿರಿಯರಿಗೆ ಆ ಶಕ್ತಿ ಇದೆ. ದೇಶದ ಚುನಾವಣೆ ಗಾಗಿ ನಾವೆಲ್ಲ ಸೇರಿ ಒಟ್ಟಾಗಿ ಕೆಲಸ ಮಾಡೋ ವಿಶ್ವಾಸದಲ್ಲಿ ಹೋಗುತ್ತೇವೆಂದು ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:04 am, Wed, 13 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ