ಯುಪಿಎಸ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ; ವಿಜಯಪುರದ ಇಬ್ಬರು ಪಾಸ್​

ಯುಪಿಎಸ್​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಮೂಲದ ವಿಜೇತಾ ಭೀಮಸೇನ ಹೊಸಮನಿ ಅವರು 100 ನೇ  ರ್‍ಯಾಂಕ್ ಪಡೆದರೆ, ಸಂತೋಷ ಶ್ರೀಕಾಂತ ಶಿರಾಡೋಣ ಎಂಬುವವರು 641 ನೇ  ರ್‍ಯಾಂಕ್ ಪಡೆದಿದ್ದಾರೆ. ಇಬ್ಬರೂ ಕೂಡ ಸತತ ಪ್ರಯತ್ನದಿಂದ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಮೂಲಕ ಜಿಲ್ಲೆಗೆ ಹೆಸರು ತಂದಿದ್ದಾರೆ.

ಯುಪಿಎಸ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ; ವಿಜಯಪುರದ ಇಬ್ಬರು ಪಾಸ್​
ಯುಪಿಎಸ್​ಸಿ ಪರೀಕ್ಷೆಯಲ್ಲಿ ವಿಜಯಪುರದ ಇಬ್ಬರು ಪಾಸ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 16, 2024 | 9:19 PM

ವಿಜಯಪುರ, ಏ.16: ಯುಪಿಎಸ್​ಸಿ(UPSC) ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ(Vijayapura)
ಮೂಲದ ವಿಜೇತಾ ಭೀಮಸೇನ ಹೊಸಮನಿ ಅವರು 100 ನೇ  ರ್‍ಯಾಂಕ್ ಪಡೆದರೆ, ಸಂತೋಷ ಶ್ರೀಕಾಂತ ಶಿರಾಡೋಣ ಎಂಬುವವರು 641 ನೇ  ರ್‍ಯಾಂಕ್ ಪಡೆದಿದ್ದಾರೆ. ಸಧ್ಯ ಹುಬ್ಬಳ್ಳಿಯಲ್ಲಿ ನೆಲೆಸಿರುವ ವಿಜೇತಾ ಹಾಗೂ ಕುಟುಂಬದವರು, ಮಗಳ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಎಲ್​ಕೆಜಿಯಿಂದ ಐದನೇ ತರಗತಿವರೆಗೆ ವಿಜಯಪುರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಅಭ್ಯಾಸ ಮಾಡಿದ ಇವರು, 6 ರಿಂದ 10th ವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ಹಾಗೂ ಪಿಯುಸಿ ಪ್ರಥಮ ವರ್ಷ ವಿಜಯಪುರ ನಗರದ ತುಂಗಳ ಕಾಲೇಜು, ಪಿಯುಸಿ ದ್ವಿತೀಯ ದರಬಾರ್ ಕಾಲೇಜ್ ವಿಜಯಪುರದಲ್ಲಿ ಪೂರ್ಣಗೊಳಿಸಿದ್ದಾರೆ.

ಕ್ರಿಮಿನಲ್ ಲಾ ದಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದ ವಿಜೇತಾ

ಪ್ಲ್ಯಾಟ್ ಎಕ್ಸಾಂ ಉತ್ತೀರ್ಣವಾಗಿ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ ಬಿಎಎಲ್​ಎಲ್​ ಪದವಿ ಪಡೆದು ಕ್ರಿಮಿನಲ್ ಲಾ ದಲ್ಲಿ ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡಿದ್ದಾರೆ. 2020 ರಿಂದ ಮೂರು ಬಾರಿ ಯುಪಿಎಸ್​ಸಿ ಪರೀಕ್ಷೆ ಎದುರಿಸಿದ ಇವರು,
2023 ರಲ್ಲಿ ಉತ್ತೀರ್ಣರಾಗಿದ್ದಾರೆ. ಆನ್ ಲೈನ್ ತರಬೇತಿ ಹಾಗೂ ಮನೆಯಲ್ಲೇ ಹೆಚ್ಚಿನ ಅಭ್ಯಾಸ ಮಾಡಿ ಸಾಧನೆ ಮಾಡಿದ ವಿಜೇತಾ ಅವರಿಗೆ ಇಂಡಿಯನ್ ರೆವೆನ್ಯೂ ಸರ್ವೀಸ್ ನಲ್ಲಿ ಸ್ಥಾನ ಸಿಗೋ ಸಾಧ್ಯತೆಯಿದೆ.

ಇದನ್ನೂ ಓದಿ:ಯುಪಿಎಸ್​ಸಿಯಲ್ಲಿ 440ನೇ ರ್‍ಯಾಂಕ್ ಪಡೆದ ಕಿರಾಣಿ ವರ್ತಕರ ಮಗಳು

ಯುಪಿಎಸ್​ಸಿಯಲ್ಲಿ 641 ರ್‍ಯಾಂಕ್ ಪಡೆದ ಸಂತೋಷ

ಸಂತೋಷ ಶ್ರೀಕಾಂತ ಶಿರಾಡೋಣ ಅವರು ಯುಪಿಎಸ್ಸಿಯಲ್ಲಿ 641 ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ ಮಾಡಿದ ಇವರು, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆ ಹಾಗೂ 8 ರಿಂದ 10th ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ.ನಂತರ ಪಿಯುಸಿ ಹೈದರಾಬಾದಿನ ವಿಚೇತನಾ ಕಾಲೇಜಿನಲ್ಲಿ, ಬೆಂಗಳೂರಿನ ಆರ್​ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದುಕೊಂಡಿದ್ದಾರೆ. ಇನ್ನು ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆದಿದ್ದ ಸಂತೋಷ್​, 2019 ನಿಂದ ಯುಪಿಎಸ್​ಸಿಗೆ ಪ್ರಯತ್ನ ಮಾಡಿದ್ದು, 2023 ರಲ್ಲಿ ಉತ್ತೀರ್ಣರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us