ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​: ಸಿಬಿಐ ತನಿಖೆಗೆ ಯತ್ನಾಳ್​ ಆಗ್ರಹ, ಸರ್ಕಾರಕ್ಕೆ ಪತ್ರ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ವಿಜಯಪುರ(Vijayapura) ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಪತ್ರ ಬರೆದಿದ್ದು, ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​: ಸಿಬಿಐ ತನಿಖೆಗೆ ಯತ್ನಾಳ್​ ಆಗ್ರಹ, ಸರ್ಕಾರಕ್ಕೆ ಪತ್ರ
ಯತ್ನಾಳ್​
Edited By: ಕಿರಣ್ ಹನುಮಂತ್​ ಮಾದಾರ್

Updated on: May 30, 2024 | 7:32 PM

ವಿಜಯಪುರ, ಮೇ.30: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ವಿಜಯಪುರ(Vijayapura) ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)​ ಪತ್ರ ಬರೆದಿದ್ದಾರೆ. ಹೌದು, ‘ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಆಪಾದಿತ ಹಣಕಾಸು ವಂಚನೆಯಗಿದೆ. ಈ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

‘ಜೊತೆಗೆ 187.3 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ವಹಿವಾಟು ನಡೆಸುವ ಮುನ್ನ ಪಾಲಿಕೆ ಅಧಿಕಾರಿಗಳ ಸಹಿ ನಕಲಿಯಾಗಿದೆ. ಈ ಪ್ರಕರಣದ ಪ್ರಸ್ತುತ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಸರಕಾರಕ್ಕೆ ವರದಿ ನೀಡಿರುವುದರಿಂದ ಆರೋಪಿಗಳ ರಕ್ಷಣೆಗೆ ಅನಗತ್ಯ ಪ್ರಭಾವ ಬೀರುವ ಆತಂಕ ಇದೆ. ಸರ್ಕಾರ ತನ್ನ ಪ್ರಭಾವಕ್ಕೆ ಒಳಗಾಗಿರುವ ಸಿಐಡಿಗೆ ತನಿಖೆಯನ್ನು ವಹಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಯತ್ನಾಳ ಕಿಡಿಕಾರಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​; ಡೆತ್​ನೋಟ್​ನಲ್ಲಿದ್ದ ಇಬ್ಬರು ಅಧಿಕಾರಿಗಳು ಅಮಾನತು

ಸಚಿವ ನಾಗೇಂದ್ರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಕೇಸ್​ನ್ನು ಸಿಬಿಐಗೆ ವಹಿಸಬೇಕು. ಜೊತೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಇಂದು(ಮೇ.30) ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದರು. ಚಂದ್ರಶೇಖರನ್ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ‘ನಮ್ಮ ಈ 2 ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 1 ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಶಾಸಕ ಯತ್ನಾಳ್​ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Thu, 30 May 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us