ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಕೈ, ಎದೆ ಭಾಗಕ್ಕೆ ಪೆಟ್ಟು, ಪ್ರಾಣಾಪಾಯದಿಂದ ಪಾರು

ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಕೈ, ಎದೆ ಭಾಗಕ್ಕೆ ಪೆಟ್ಟಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಕೈ, ಎದೆ ಭಾಗಕ್ಕೆ ಪೆಟ್ಟು, ಪ್ರಾಣಾಪಾಯದಿಂದ ಪಾರು
ಕಾರು ಅಪಘಾತ
Follow us
| Edited By: ಗಂಗಾಧರ​ ಬ. ಸಾಬೋಜಿ

Updated on:Nov 20, 2023 | 5:15 PM

ವಿಜಯಪುರ, ನವೆಂಬರ್​​ 20: ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ (Veena Kashappanavar) ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಕೈ, ಎದೆ ಭಾಗಕ್ಕೆ ಪೆಟ್ಟಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ವಿಜಯಪುರದಿಂದ ಸಿಂದಗಿ ಕಡೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ವೀಣಾ ಕಾಶಪ್ಪನವರ ಕಾರಿಗೆ ಅಡ್ಡಲಾಗಿ ಬಂದ ಸ್ಕೂಟಿ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಸರ್ವೆ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರದ ಸರ್ವೆ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸರ್ವೆ ಇಲಾಖೆ ವಿರುದ್ದ ಹಲವರ ದೂರು ಹಿನ್ನೆಲೆ ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗುತ್ತಿದೆ. ಖುದ್ದು ಫೀಲ್ಡಿಗಿಳಿದಿರುವ ಲೋಕಾಯುಕ್ತ ಬಿಎಸ್ ಪಾಟೀಲ್​, ಡಿಸಿ ಕಛೇರಿಯ ಕಟ್ಟಡದಲ್ಲೇ ಇರುವ ಭೂ ದಾಖಲೆಗಳ ನಿರ್ದೇಶಕರ ಕಛೇರಿಯಲ್ಲಿ ಪರಿಶೀಲನೆ ಮಾಡಿದ್ದು, 50 ಸಾವಿರಕ್ಕೂ ಹೆಚ್ಚು ನಗದು, ಕೆಲ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮದ್ವೆ ಮುಂಚೆಯೇ ವರನ ಮನೆಯಲ್ಲಿ ಮಧು ಆತ್ಮಹತ್ಯೆ: ಐಶ್ವರ್ಯ ಸಾವಿಗೆ ಜಾತಿಯೇ ಕಾರಣವಾಯ್ತಾ?

ಆನೇಕಲ್​​ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೂ ಲೋಕಾಯುಕ್ತ ಟೀಂ ದಾಳಿ ಮಾಡಿದೆ. ಮಧ್ಯಾಹ್ನ ದಿಢೀರ್ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳನ್ನ ಕೂರಿಸಿಕೊಂಡು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸರ್ವೆ ಇಲಾಖೆ ಕಚೇರಿಯಲ್ಲಿ ನಗದು ಸಮೇತ ಅಧಿಕಾರಿಗಳು ಸಿಕ್ಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಎಸ್ಪಿ ವಿವೇಕಾನಂದ್ ತುಳಸಿಗೇರಿ, ಡಿವೈಎಸ್ಪಿ ಮಲ್ಲಿಕಾರ್ಜುನ್ ಸಿಎಸ್, ಇನ್ಸ್‌ಪೆಕ್ಟರ್ ಮಂಜುನಾಥ್ ಹೂಗಾರ್ ಸೇರಿದಂತೆ ಒಟ್ಟು ಹನ್ನೆರಡು ಮಂದಿ ಅಧಿಕಾರಿಗಳ ತಂಡದಿಂದ ದಾಳಿ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Mon, 20 November 23

ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್