ವಿಜಯಪುರ: ಅಂಜುಟಗಿ ಬಳಿ ವಾಹನ ಪಲ್ಟಿ, 30ಕ್ಕೂ ಹೆಚ್ಚು ಕರುಗಳು ಸಾವು

ವಧೆ ಮಾಡಲು ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಇಂಡಿಗೆ ಕರುಗಳನ್ನು ತರುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ.

ವಿಜಯಪುರ: ಅಂಜುಟಗಿ ಬಳಿ ವಾಹನ ಪಲ್ಟಿ, 30ಕ್ಕೂ ಹೆಚ್ಚು ಕರುಗಳು ಸಾವು
ಕರುಗಳ ಸಾವು
Edited By: ವಿವೇಕ ಬಿರಾದಾರ

Updated on: Sep 16, 2023 | 10:02 AM

ವಿಜಯಪುರ ಸೆ.16: ಇಂಡಿ (Indi) ತಾಲೂಕಿನ ಅಂಜುಟಗಿ ಗ್ರಾಮದ ಬಳಿ ತಡರಾತ್ರಿ ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡುತ್ತಿದ್ದ ವಾಹನ (Vehicle) ಪಲ್ಟಿಯಾಗಿ ಮೂವತ್ತಕ್ಕೂ ಅಧಿಕ ಕರುಗಳು (Calf) ಮೃತಪಟ್ಟಿವೆ. ಇಂಡಿ ಭಾಗದಲ್ಲಿ ಕರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ದುಷ್ಕರ್ಮಿಗಳು ಕರುಗಳ ಕಾಲುಗಳನ್ನು ಕಟ್ಟಿ, ಬಾಯಿಗೆ ಪ್ಲಾಸ್ಟಿಕ್ ಟೇಪ್ ಅಂಟಿಸಿ MH 11 AG 2228 ವಾಹನ ಸಂಖ್ಯೆಯಲ್ಲಿ ಮಹಾರಾಷ್ಟ್ರದ ಸಾತಾರಾದಿಂದ ಇಂಡಿಗೆ ತರುತ್ತಿದ್ದರು. ಬರುವ ಮಾರ್ಗದಲ್ಲಿ ವಾಹನ ಪಲ್ಟಿಯಾಗಿದೆ. ವಾಹನದಲ್ಲಿ ವಧೆ ಮಾಡಲು ಬಳಕೆ ಮಾಡುವ ಮಾರಕಾಸ್ತ್ರಗಳು ಸಹ ಪತ್ತೆಯಾಗಿವೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯಾದಗಿರಿ ಚಿತ್ತಾಪುರ ರಸ್ತೆಯಲ್ಲಿ ಟ್ರಕ್​ ಹರಿದು 25 ಕುರಿಗಳು ಸಾವು

ಯಾದಗಿರಿ ಸೆ.16: ಶನಿವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಯಾದಗಿರಿ ಹೊರವಲಯದ ಚಿತ್ತಾಪುರ ರಸ್ತೆಯಲ್ಲಿ ಟ್ರಕ್ ಹರಿದು 25 ಕುರಿಗಳು ಸಾವಿಗೀಡಾಗಿವೆ. ಯಾದಗಿರಿ ಸಂಚಾರ ಪೊಲೀಸರು ಟ್ರಕ್ ಚಾಲನನ್ನು ವಶಕ್ಕೆ ಪಡೆದಿದ್ದಾರೆ. ಕುರಿಗಾಯಿಗಳು ಕುರಿ ಮೇಯಿಸಲು ರಸ್ತೆ ದಾಟಿ ಹೋಗುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಟ್ರಕ್​ ಕುರಿಗಳ ಮೇಲೆ ಹರಿದಿದೆ. ಇದರಿಂದ ನಾಗಪ್ಪ, ಅಂಬಲಯ್ಯ, ಧರ್ಮರಾಜ ಹಾಗೂ ನಿಂಗಪ್ಪ ಎಂಬ ಕುರಿಗಾಯಿಗಳಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಯಾದಗಿರಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರುವನ್ನು ಹೊತ್ತೊಯ್ದು ತಿಂದ ಚಿರತೆ

ಮಂಡ್ಯ: ಮದ್ದೂರು ತಾಲೂಕಿನ ಮಾದಾಪುರದೊಡ್ಡಿ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ, ಹೊತ್ತೊಯ್ದು ತಿಂದಿದೆ. ಕರು ಕಳೆದುಕೊಂಡ ರೈತ ಕಂಗಾಲು ಆಗಿದ್ದಾನೆ. ಚಿರತೆ ಪ್ರತ್ಯಕ್ಷದಿಂದ ರೈತರು ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:59 am, Sat, 16 September 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us