ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ
ಇಂದು(ಮಾ.19) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ, ಮಾ.19:ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚೆಕ್ಪೋಸ್ಟ್ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಅದರಂತೆ ಇಂದು(ಮಾ.19) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಹೈದ್ರಾಬಾದ್‌ದಿಂದ ಹುಬ್ಬಳ್ಳಿಗೆ MH 01. CD 7537 ನಂಬರಿನ ಟೋಯೊಟಾ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ಮಾಡಲಾಗಿದ್ದು, ಈ ವೇಳೆ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಪೋಲಿಸರು ಜಪ್ತಿ ಮಾಡಿದ್ದಾರೆ. ಈ ಕುರಿತು ತನಿಖೆ ಮುಂದುವರೆದಿದ್ದು, ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Bagalakote: ಲಕ್ಷಾನಟ್ಟಿ ಚೆಕ್ಪೋಸ್ಟ್ನಲ್ಲಿ ಕೋಟಿ ಕೋಟಿ ಹಣ ಪತ್ತೆ; ಒಟ್ಟು ಸಿಕ್ಕಿದ್ದೆಷ್ಟು ಗೊತ್ತಾ?
ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 1.5 ಕೆಜಿ ಚಿನ್ನ ವಶಕ್ಕೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಸೇರಿ 99 ಲಕ್ಷ ಮೌಲ್ಯದ 1.5 ಕೆಜಿ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ. ಕೌಲಾಲಂಪುರ್, ಕುವೈತ್, ಮೆದಿನಾ, ಬೆಹ್ರೇನ್ನಿಂದ ಬಂದಿದ್ದವರು, ತಮ್ಮ ಲಗೇಜ್ ಬ್ಯಾಗ್ನಲ್ಲಿ ಬಟ್ಟೆಯಲ್ಲಿ ಸುತ್ತಿ ಬಳೆ, ಚೈನ್, ಡಾಲರ್, ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ತಂದಿದ್ದರು. ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ