ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ

ಇಂದು(ಮಾ.19)​ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ವಿಜಯಪುರದಲ್ಲಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 2 ಕೋಟಿ ಅಧಿಕ ನಗದು ಜಪ್ತಿ; ಇಬ್ಬರು ವಶಕ್ಕೆ
ಬಂಧಿತ ಆರೋಪಿಗಳು
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 19, 2024 | 3:20 PM

ವಿಜಯಪುರ, ಮಾ.19:ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚೆಕ್​ಪೋಸ್ಟ್​ ನಿರ್ಮಿಸಿ ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಅದರಂತೆ ಇಂದು(ಮಾ.19)​ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ 93 ಲಕ್ಷ 50 ಸಾವಿರ ನಗದನ್ನು ವಿಜಯಪುರ(Vijayapura) ನಗರದ ಸಿಂದಗಿ ಬೈಪಾಸ್ ಬಳಿ ಜಿಲ್ಲಾ ಸಿಇಎನ್ ಪೊಲೀಸರು ತಪಾಸಣೆ ನಡೆಸಿ ಜಪ್ತಿ ಮಾಡಿದ್ದಾರೆ. ಜೊತೆಗೆ ಹಣದ ಸಮೇತ ಸಾಂಗ್ಲಿ ಮೂಲದ ಬಾಲಾಜಿ ನಿಕ್ಕಂ ಮತ್ತು ಸಚಿನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಹೈದ್ರಾಬಾದ್‌ದಿಂದ ಹುಬ್ಬಳ್ಳಿಗೆ MH 01. CD 7537 ನಂಬರಿನ ಟೋಯೊಟಾ ಇನ್ನೋವಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ಮಾಡಲಾಗಿದ್ದು, ಈ ವೇಳೆ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣವನ್ನು ಪೋಲಿಸರು ಜಪ್ತಿ ಮಾಡಿದ್ದಾರೆ. ಈ ಕುರಿತು ತನಿಖೆ ಮುಂದುವರೆದಿದ್ದು, ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Bagalakote: ಲಕ್ಷಾನಟ್ಟಿ ಚೆಕ್​ಪೋಸ್ಟ್​ನಲ್ಲಿ ಕೋಟಿ ಕೋಟಿ ಹಣ ಪತ್ತೆ; ಒಟ್ಟು ಸಿಕ್ಕಿದ್ದೆಷ್ಟು ಗೊತ್ತಾ?

ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 1.5 ಕೆಜಿ ಚಿನ್ನ ವಶಕ್ಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​​ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಸೇರಿ 99 ಲಕ್ಷ ಮೌಲ್ಯದ 1.5 ಕೆಜಿ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ.  ಕೌಲಾಲಂಪುರ್, ಕುವೈತ್, ಮೆದಿನಾ, ಬೆಹ್ರೇನ್​ನಿಂದ ಬಂದಿದ್ದವರು, ತಮ್ಮ ಲಗೇಜ್ ಬ್ಯಾಗ್​ನಲ್ಲಿ ಬಟ್ಟೆಯಲ್ಲಿ ಸುತ್ತಿ ಬಳೆ, ಚೈನ್, ಡಾಲರ್, ಕಟ್ ಪೀಸ್ ಮಾದರಿಯಲ್ಲಿ ಚಿನ್ನವನ್ನ ತಂದಿದ್ದರು. ಪ್ರಯಾಣಿಕರ ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us