ವಿಜಯಪುರ, ಡಿ.28: ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ(Vijayapur Corporation Mayor and Deputy Mayor Election). ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ 2024ರ ಜ.9 ರಂದು ಚುನಾವಣೆ ನಿಗದಿ ಮಾಡಿ ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯು 35 ಸದಸ್ಯ ಬಲವನ್ನು ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರ 5, ಎಂಐಎಂ 2 ಹಾಗೂ 1 ಜೆಡಿಎಸ್ ಸದಸ್ಯರನ್ನು ಹೊಂದಿದೆ.
ವಾರ್ಡ್ ಮರುವಿಂಗಡನೆ, ಮೇಯರ್, ಉಪ ಮೇಯರ್ ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ವ್ಯಾಜ್ಯವಿತ್ತು. ಕಲಬುರಗಿ ಹೈಕೋರ್ಟ್ ನಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಸಿದ್ದ ಕಾರಣ ಚುನಾವಣೆಗೆ ತಡೆ ಬಿದ್ದಿತ್ತು. ಕಳೆದ ಅಕ್ಟೋಬರ್ 30 ರಂದು ನಡೆಯಬೇಕಿದ್ದ ಚುನಾವಣೆಗೂ ಹೈಕೋರ್ಟ್ ತಡೆ ನೀಡಿತ್ತು. ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳ ಮೀಸಲಾತಿ ವಿಚಾರದಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಕೆ ಮಾಡಿದ್ದರಿಂದ ತಡೆ ನೀಡಲಾಗಿತ್ತು. ಸದ್ಯ ಇದೀಗಾ ನ್ಯಾಯಾಲಯದ ವಿಚಾರಣೆ ಪೂರ್ಣಗೊಂಡು ಚುನಾವಣೆ ನಡೆಸಲು ಅನುಮತಿ ಸಿಕ್ಕಿದೆ. 2024ರ ಜನವರಿ 9 ರಂದು ಚುನಾವಣೆ ನಡೆಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆಧಿಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಡಕ್ ನುಡಿ
2022ರಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದರೂ ಮೇಯರ್ ಉಪ ಮೇಯರ್ ಚುನಾವಣೆ ನಡೆದಿರಲಿಲ್ಲ. ವಿಜಯಪುರ ಮಹಾನಗರ ಪಾಲಿಕೆ 35 ಸದಸ್ಯ ಬಲ ಹೊಂದಿದೆ. 17 ಸ್ಥಾನಗಳಲ್ಲಿ ಬಿಜೆಪಿ, 10 ಸ್ಥಾನಗಳಲ್ಲಿ ಕಾಂಗ್ರೆಸ್, 5 ಸ್ಥಾನಗಳಲ್ಲಿ ಪಕ್ಷೇತರರು, 2 ಸ್ಥಾನಗಳಲ್ಲಿ ಎಐಎಂಐಎಂ ಹಾಗೂ 1 ಜೆಡಿಎಸ್ ಸದಸ್ಯರನ್ನು ಹೊಂದಿದೆ. ಸದ್ಯ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಪಾಲಿಕೆ ಚುಕ್ಕಾಣಿಗಾಗಿ ಹೋರಾಟ ನಡೆಯುತ್ತಿದೆ. ಪಕ್ಷೇತರರು ಎಐಎಂಐಎಂ, ಜೆಡಿಎಸ್ ಸದಸ್ಯರ ಬೆಂಬಲದಿಂದ ಆಧಿಕಾರ ಹಿಡಿಯಲು ಕಾಂಗ್ರೆಸ್ ಮುಂದಾಗಿದೆ.
ಇನ್ನು ಸದರಿ ಚುನಾವಣೆಯಲ್ಲಿ ಮತದಾನದ ಅರ್ಹತೆ ಇರುವ ಪಾಲಿಕೆ ಸದಸ್ಯರು, ಸಂಸದರು, ಶಾಸಕರಿಗೆ ಚುನಾವಣಾ ತಿಳುವಳಿಕೆ ಪತ್ರ ತಲುಪಿಸುವ ಕರ್ತವ್ಯಕ್ಕೆ 8 ಸಿಬ್ಬಂದಿ ನಿಯೋಜಿಸಿ ವಿಜಯಪುರ ಮಹಾನಗರ ಪಾಲಿಕೆ ಉಪ ಆಯಕ್ತರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ