ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿಗೆ ಭಾಜನರಾದ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣ
ರಾಜ್ಯ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣನವರ ಪಾತ್ರರಾಗಿದ್ದಾರೆ.
ವಿಜಯಪುರ: ಜಿಲ್ಲಾ ಆಸ್ಪತ್ರೆಗೆ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಎರಡು ಬಾರಿ ಲಭಿಸಿತ್ತು. ಇದರಿಂದ ಜಿಲ್ಲಾ ಆಸ್ಪತ್ರೆಗೆ ಅನುದಾನವೂ ಬಂದಿತ್ತು. ಇದೀಗಾ 2022 ರ ಸಾಲಿನಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣನವರ ಅವರಿಗೆ ರಾಜ್ಯ ಸ್ಕಾರದ ಪ್ರಶಸ್ತಿ ಲಭಿಸಿದೆ.
ರಾಜ್ಯ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೀಡುವ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣನವರ ಪಾತ್ರರಾಗಿದ್ದಾರೆ. ರಾಷ್ಟ್ರೀಯ ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ವಿವಿಧ ಪ್ರಶಸ್ತಿಗಳನ್ನು ಅತ್ಯುತ್ತಮವಾಗಿ ಸೇವೆ ಸಲ್ಲಿಸಿದವರಿಗೆ ನೀಡಲಾಗಿದೆ. ಈ ಪೈಕಿ ರಾಜ್ಯದಲ್ಲಿ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿಯನ್ನು ಇಡೀ ರಾಜ್ಯದಲ್ಲಿ ಮೂರು ವೈದ್ಯರಿಗೆ ಮಾತ್ರ ನೀಡಲಾಗಿದೆ. ಈ ಪೈಕಿ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿಗೆ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎಸ್ ಎಲ್ ಲಕ್ಕಣ್ಣನವರ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಆಸ್ಪತ್ರೆಯ ಡಾ ಎಸ್ ಎಲ್ ಲಕ್ಕಣ್ಣನವರ ಎರಡನೇ ಕೊರೋನಾ ಅಲೆಯ ವೇಳೆ ಉತ್ತಮ ಸೇವೆ ನೀಡಲು ಕಾರಣೀಕರ್ತರಾಗಿದ್ದರು. ಕೋವಿಡ್ ಚಿಕಿತ್ಸೆಯನ್ನು ಉತ್ತಮವಾಗಿ ನೀಡಲು ಹಗಲು ರಾತ್ರಿ ಕೆಲಸ ಮಾಡಿದ್ದರು. ಸಹೋದ್ಯೋಗಿಗಳನ್ನು ಸಂಗಡ ತೆಗೆದುಕೊಂಡು ದಿನದ 24 ಗಂಟೆಗಳ ಕಾಲ ಕೊರೊನಾ ಪೀಡಿತರಿಗೆ ಚಿಕಿತ್ಸೆ ಸಿಗುವಂತೆ ಮಾಡಿದ್ದರು. ಇನ್ನುಳಿದಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ಸಿಗುವಂತೆ ಡಾ ಎಸ್ ಎಲ್ ಲಕ್ಕಣ್ಣನವರ ಶ್ರಮ ಪಡುತ್ತಿದ್ದಾರೆ. ಡಾ ಎಸ್ ಎಲ್ ಲಕ್ಕಣ್ಣನರ ಅವರಿಗೆ ಅತ್ಯುತ್ತಮ ಜಿಲ್ಲಾ ಶಸ್ತ್ರಚಿಕಿತ್ಸಕ ಪ್ರಶಸ್ತಿ ಲಭಿಸಿದ್ದಕ್ಕೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳು ಅಭಿನಂದಿಸಿ ಸನ್ಮಾನಿಸಿವೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:52 pm, Sat, 3 September 22