Vijayapura: ಟ್ರ್ಯಾಕ್ಟರ್ ಹಾಗೂ ಕ್ರೂಸರ್​ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಇತರರಿಗೆ ಗಾಯ

|

Updated on: May 18, 2023 | 10:42 PM

ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್​ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ. 

Vijayapura: ಟ್ರ್ಯಾಕ್ಟರ್ ಹಾಗೂ ಕ್ರೂಸರ್​ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಇತರರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us on

ವಿಜಯಪುರ: ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್​ ಮಧ್ಯೆ ಮುಖಾಮುಖಿ ಡಿಕ್ಕಿ (accident) ಹೊಡೆದ ಪರಿಣಾಮ ಕ್ರೂಸರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಕ್ರೂಸರ್​ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಮೃತರು. ಗಾಯಾಳುಗಳನ್ನು ಇಂಡಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಹಾಗೂ ಗಾಯಾಳು ಚಡಚಣ ತಾಲೂಕಿನ ಲಮಾನಹಟ್ಟಿ ಗ್ರಾಮದ ನಿವಾಸಿಗಳು ಎನ್ನಲಾಗುತ್ತಿದೆ.

ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ಮಣೂರು ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ದಾಖಲಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ, ಬಾಲಕಿ ಮೃತದೇಹ ಪತ್ತೆ

ವಿಜಯಪುರ: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯ ಶವ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಅಂಗಡಗೇರಿಯಲ್ಲಿ ನಡೆದಿದೆ. ಸಚಿನ ಮಾದರ ಹಾಗೂ ಸಕ್ಕುಬಾಯಿ ಮಾದರ ಮೃತರು. ಅಪ್ರಾಪ್ತರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕೂಡಗಿ ಎನ್​ಟಿಪಿಸಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೇರೊಬ್ಬಳ ಜೊತೆ ಸಂಬಂಧ, ಪತ್ನಿಯನ್ನು ಕೊಂದು ಕುಟುಂಬ ಸಹಿತ ಪತಿ ಪರಾರಿ

ಘಟನೆ ಕುರಿತಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಸಹೋದರರು ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ ನಡೆದಿದೆ.

ವೆಲ್ಡಿಂಗ್ ಕೆಲಸಗಾರರಾದ ಸುಹೇಲ್‌(27), ಸೈಯದ್(21) ಮೃತರು. ಮೃತ ಸೋದರರು ಸಾಗರದ ರಾಮನಗರ ಬಡಾವಣೆಯ ನಿವಾಸಿಗಳು. ಉಳವಿ ಗ್ರಾಮಕ್ಕೆ ಬೈಕ್‌ನಲ್ಲಿ ಮದುವೆಗೆ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ಸೊರಬ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ನಡು ರಸ್ತೆಯಲ್ಲಿ ಹತ್ಯೆಗೈದು ಸಹೋದರಿಗೆ ಕರೆ ಮಾಡಿ ವಿಷಯ ತಿಳಿಸಿದ ಹಂತಕರು

ರೌಡಿಶೀಟರ್​ನ ಬರ್ಬರ ಹತ್ಯೆ

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್​. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ್ ಆಪ್ತ ಎನ್ನಲಾಗುತ್ತಿದೆ. ಬೈಕ್​ಗಳಲ್ಲಿ ಬಂದ 6 ದುಷ್ಕರ್ಮಿಗಳು ಮಚ್ಚು, ಲಾಂಗ್​ನಿಂದ ಕೊಚ್ಚಿ ಬರ್ಬರ ಹತ್ಯೆಗೈದು ಪರಾರಿ ಆಗಿದ್ದಾರೆ. ಹುಣಸೂರು ಜೋಡಿ ಕೊಲೆ ಕೇಸ್​ನಲ್ಲಿ ಚಂದು ಆರೋಪಿಯಾಗಿದ್ದು, ಕೆಲ ದಿನಗಳಿಂದಷ್ಟೇ ಜೈಲಿನಿಂದ ಹೊರ ಬಂದಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:42 pm, Thu, 18 May 23