ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರು ಸಾವು

| Updated By: Ganapathi Sharma

Updated on: Jan 24, 2025 | 9:14 AM

ಕರ್ನಾಟಕದಲ್ಲಿ ಮತ್ತೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತರ ಕನ್ನಡದ ಯಲ್ಲಾಪುರದ ಗುಳ್ಳಾಪುರ ಅಪಘಾತ ಮತ್ತು ರಾಯಚೂರಿನ ಸಿಂಧನೂರಿನ ಆ್ಯಕ್ಸಿಡೆಂಟ್ ಬೆನ್ನಲ್ಲೇ ಇದೀಗ ವಿಜಯಪುರದಲ್ಲಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದು, ಕೆಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಇಲ್ಲಿದೆ.

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರು ಸಾವು
ಕಾರು ಪಲ್ಟಿಯಾಗಿ ನುಜ್ಜುಗುಜ್ಜಾಗಿರುವುದು
Follow us on

ವಿಜಯಪುರ, ಜನವರಿ 24: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ರಾಜು ಕಾಂಬಳೆ, ಪೋಳ ಎಂಬವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:06 am, Fri, 24 January 25