AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿ ಆತ್ಮಹತ್ಯೆ; ಮಾನವ ಹಕ್ಕು ನಿಯಮದ ಪ್ರಕಾರ ಆರೋಪಿಯನ್ನು ಬಂಧಿಸಿದ ನಾಲ್ವರು ಪೊಲೀಸರ ಅಮಾನತು

ಸಬ್‌ ಇನ್ಸ್‌ಪೆಕ್ಟರ್ ಸಂಗಮೇಶ್ ಹೊಸಮನಿ, ಕಾನ್ಸ್‌ಟೇಬಲ್‌ಗಳಾದ ಹೆಚ್.ಸಿ.ಮಂತ್ರಿ, ಗುರುರಾಜ ಮಶಿಹಾಳ, ಆನಂದ ಪಾಟೀಲ್‌ ಎಂಬುವವರನ್ನು ಅಮಾನತು ಮಾಡಿ ವಿಜಯಪುರ ಎಸ್‌ಪಿ ಆನಂದ ಕುಮಾರ್ ಆದೇಶ ಹೊರಡಿಸಿದ್ದಾರೆ.

ಅತ್ಯಾಚಾರ ಆರೋಪಿ ಆತ್ಮಹತ್ಯೆ; ಮಾನವ ಹಕ್ಕು ನಿಯಮದ ಪ್ರಕಾರ ಆರೋಪಿಯನ್ನು ಬಂಧಿಸಿದ ನಾಲ್ವರು ಪೊಲೀಸರ ಅಮಾನತು
ಸಿಂದಗಿ ಪೊಲೀಸ್​ ಠಾಣೆ ಮುಂದೆ ನಿನ್ನೆ (ಆಗಸ್ಟ್​ 29) ನಡೆದಿದ್ದ ಪ್ರತಿಭಟನೆ
TV9 Web
| Updated By: Skanda|

Updated on:Aug 30, 2021 | 12:53 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂದಗಿ ಠಾಣೆಯ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇರೆಗೆ ಪೊಲೀಸರ ಅಮಾನತು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮದ ಪ್ರಕಾರ ಕ್ರಮ ಕೈಗೊಂಡಿದ್ದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್ ಸಂಗಮೇಶ್ ಹೊಸಮನಿ, ಕಾನ್ಸ್‌ಟೇಬಲ್‌ಗಳಾದ ಹೆಚ್.ಸಿ.ಮಂತ್ರಿ, ಗುರುರಾಜ ಮಶಿಹಾಳ, ಆನಂದ ಪಾಟೀಲ್‌ ಎಂಬುವವರನ್ನು ಅಮಾನತು ಮಾಡಿ ವಿಜಯಪುರ ಎಸ್‌ಪಿ ಆನಂದ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ದೇವೇಂದ್ರ ಸಂಗೋಗಿ (40 ವರ್ಷ) ಎಂಬಾತನನ್ನು ಆಗಸ್ಟ್​ 28ರ ತಡರಾತ್ರಿ ವಶಕ್ಕೆ ಪಡೆಯಲಾಗಿತ್ತು. ಆದರೆ, ನಿನ್ನೆ (ಆಗಸ್ಟ್​ 29) ನಸುಕಿನ ವೇಳೆ ಆತ ಠಾಣೆಯ ಶೌಚಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸುವ ವೇಳೆ ಹಾಗೂ ನಂತರ ಕರ್ತವ್ಯ ಲೋಪವೆಸಗಲಾಗಿದೆ ಎಂಬ ಕಾರಣ ನೀಡಿ ಸಬ್ ಇನ್ಸಪೆಕ್ಟರ್ ಸಂಗಮೇಶ ಹೊಸಮನಿ, ಕಾನ್ಸಸ್ಟೇಬಲ್ಸ್​ಗಳಾದ ಹೆಚ್.ಸಿ.ಮಂತ್ರಿ, ಗುರುರಾಜ‌ ಮಶಿಹಾಳ, ಆನಂದ ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಯುವಕ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಯುವಕ ದೇವಿಂದ ಸಂಗೋಗಿ ಪರಾರಿಯಾಗಿದ್ದಾನೆ ಎಂಬ ಮಾಹಿತಿ ತಿಳಿದುಬಂದಿತ್ತು. ಸಿಂದಗಿ ಪೊಲೀಸರು ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ರಾತ್ರಿ ಆತನನ್ನು ಬಂಧಿಸಿದ್ದರು. ಆದರೆ, ಬೆಳಗ್ಗೆ ಆಗುವಷ್ಟರಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ನಸುಕಿನ ಜಾವ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ನಮ್ಮ ಸಿಬ್ಬಂದಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ. ಲಾಕಪ್ ಡೆತ್ ಎನ್ನಬಹುದಾದರೂ ಪೊಲೀಸರ‌ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ. ನೇಣು ಹಾಕಿಕೊಂಡಿದ್ದ ಕಾರಣ‌ ಮೃತಪಟ್ಟಿದ್ದಾನೆ. ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದಿದ್ದರು.

ಇದನ್ನೂ ಓದಿ: ವಿಜಯಪುರ: ನಿನ್ನೆ ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣು; ಪೋಷಕರ ಆಕ್ರೋಶ 

Mysuru Gang Rape: ಜೇಬಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಆರೋಪಿ; 3 ಯುವತಿಯರು ಕೈಕೊಟ್ಟ ಬಳಿಕ ವಿಕೃತನಾಗಿದ್ದ

(Vijayapura Accused Rapist committed suicide 4 Police officers suspended)

Published On - 12:47 pm, Mon, 30 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ