AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ನಿನ್ನೆ ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣು; ಪೋಷಕರ ಆಕ್ರೋಶ

ನಿನ್ನೆ ತಡರಾತ್ರಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ಇಂದು ಮುಂಜಾನೆ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆ ಸಿಂದಗಿ‌ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಆರೋಪಿ ದೇವಿಂದ ಸಂಗೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ: ನಿನ್ನೆ ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣು; ಪೋಷಕರ ಆಕ್ರೋಶ
ಸಿಂದಗಿ ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ
Follow us
TV9 Web
| Updated By: Skanda

Updated on:Aug 29, 2021 | 1:04 PM

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ಇಂದು ಮುಂಜಾನೆ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆ ಸಿಂದಗಿ‌ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ಆರೋಪಿ ದೇವಿಂದ ಸಂಗೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಆರೋಪಿಯ ಸಾವಿಗೆ ಪೋಷಕರು, ಸಂಬಂಧಿಕರು ಆಕ್ರೋಶ ಹೊರಹಾಕಿದ್ದು, ಪೊಲೀಸರ ನಿರ್ಲಕ್ಷ್ಯದಿಂದ ದೇವಿಂದ ಮೃತಪಟ್ಟಿದ್ದಾನೆಂದು ಆರೋಪಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಆರೋಪಿಯ ಪೋಷಕರು ಹಾಗೂ ಸಂಬಂಧಿಕರು ಸಿಂದಗಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ಉಂಟಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟ ಕಾರಣ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಿನ್ನೆ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಆದರೆ, ಇಂದು ನಸುಕಿನ ವೇಳೆ ಆತ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ನಂತರ ದೇವಿಂದ ಶವವನ್ನು ಜಿಲ್ಲಾ ಆಸ್ಪತ್ರೆಗೆ ತಂದ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಿದ್ದಾರೆ. ಆದರೆ, ಈ ನಡುವೆ ಠಾಣೆಗೆ ಮುತ್ತಿಗೆ ಹಾಕಿದ ಪೋಷಕರು ಹಾಗೂ ಸಂಬಂಧಿಗಳು ಮಾತ್ರ ಯಾರ ಸಮಜಾಯಿಷಿಗೂ ಜಗ್ಗದೇ ಪೊಲೀಸರ ವಿರುದ್ಧ ಹರಿಹಾಯ್ದಿದ್ದು, ನಿಮ್ಮ ನಿರ್ಲಕ್ಷ್ಯದಿಂದಲೇ ಯುವಕನ ಸಾವಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು, ನಸುಕಿನ ಜಾವ ಶೌಚಾಲಯಕ್ಕೆ ತೆರಳಿದ್ದ ಆರೋಪಿ ಅಲ್ಲಿ ನೇಣು ಹಾಕಿಕೊಂಡಿದ್ದಾನೆ. ಇದನ್ನು ಕಂಡ ನಮ್ಮ ಸಿಬ್ಬಂದಿ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ. ಲಾಕಪ್ ಡೆತ್ ಎನ್ನಬಹುದಾದರೂ ಪೊಲೀಸರ‌ ಕಿರುಕುಳದಿಂದ ಆರೋಪಿ ಮೃತಪಟ್ಟಿಲ್ಲ. ನೇಣು ಹಾಕಿಕೊಂಡಿದ್ದ ಕಾರಣ‌ ಮೃತಪಟ್ಟಿದ್ದಾನೆ. ಇಂಥ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ. ಈ ಘಟನೆ ಕುರಿತು ಸಿಐಡಿ ತನಿಖೆಗೆ ವಹಿಸುವಂತೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದಿದ್ದಾರೆ.

ಮೃತನ ಪೋಷಕರು ಹಾಗೂ ಸಂಬಂಧಿಕರಿಂದ ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂಥ ಘಟನೆಯಿಂದ ಸಹಜವಾಗಿ ಮನೆಯವರಿಗೆ ನೋವಾಗುತ್ತದೆ. ಆದರೆ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ವಿಜಯಪುರ ನಗರದಲ್ಲಿ ಎಸ್​ಪಿ ಆನಂದಕುಮಾರ ಹೇಳಿಕೆ ನೀಡಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವರದಿಯಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಯುವಕ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆರೋಪಿ ಯುವಕ ದೇವಿಂದ ಸಂಗೋಗಿ ಪರಾರಿಯಾಗಿದ್ದಾನೆ ಎಂಬ ಮಾಹಿತಿ ತಿಳಿದುಬಂದಿತ್ತು. ಸಿಂದಗಿ ಪೊಲೀಸರು ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿ ರಾತ್ರಿ ಆತನನ್ನು ಬಂಧಿಸಿದ್ದರು. ಆದರೆ, ಬೆಳಗ್ಗೆ ಆಗುವಷ್ಟರಲ್ಲಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ 

ಸಾಮೂಹಿಕ ಅತ್ಯಾಚಾರದಲ್ಲಿ ಇದ್ದಿದ್ದು 6 ಜನ ಮಾತ್ರ ಅಲ್ಲ; ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿಗಳು

(Vijayapura Accused Rapist committed suicide in Police Station early morning)

Published On - 12:44 pm, Sun, 29 August 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ