ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು

IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು
ಪ್ರಾತಿನಿಧಿಕ ಚಿತ್ರ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 30, 2024 | 7:49 PM

ವಿಜಯಪುರ, ಜನವರಿ 30: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು (suspended) ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.

ಹಣ ದುರ್ಬಳಕೆ: ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಅಮಾನತು 

ಮಂಡ್ಯ: ಪಶು ಇಲಾಖೆಯಲ್ಲಿ 2018-19ನೇ ಸಾಲಿನ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಲ್ಲಿ ಅವ್ಯವಹಾರ ನಡೆಸಿ, ಹಣ ದುರ್ಬಳಕೆ ಮಾಡಿಕೊಂಡು, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಯನ್ನ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸರ್ಜರಿ, 33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಮದ್ದೂರು ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಬಿ ಪ್ರವೀಣ್ ಕುಮಾರ್ ಅಮಾನತು ಆದ ಅಧಿಕಾರಿ. ಈ ಹಿಂದೆ ಪಾಂಡವಪುರದಲ್ಲಿ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಆಕ್ರಮ ಎಸೆಗಿದ್ದರು. ಈ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯಲ್ಲಿ ಸಹ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾಮಗಾರಿ ಮಾಡದೇ ಹಣ ದುರುಪಯೋಗ ಆರೋಪ: ಇಂಜನೀಯರ್ ವಜಾ

ಕೊಪ್ಪಳ: ಕೆಆರ್​ಐಡಿಎಲ್​ ಕಾರ್ಯಪಾಲಕ ಇಂಜನೀಯರ್ ಝರಣಪ್ಪ ಚಿಂಚೋಳಿಕರ್​ರನ್ನು ಕೆಆರ್​ಐಡಿ ಎಲ್ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೆಆರ್​ಐಡಿಎಲ್​ ವ್ಯವಸ್ಥಾಪಕ ನಿರ್ದಶಕ ಬಸವರಾಜ್, ತಕ್ಷಣದಿಂದಲೇ ಝರಣಪ್ಪ ಚಿಂಚೋಳಿಕರ್​ನ್ನು ವಜಾಗೊಳಿಸಿ ಆದೇಶಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

2016-17 ರಲ್ಲಿ ಸುವರ್ಣ ಗ್ರಾಮ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಝರಣಪ್ಪ ಚಿಂಚೋಳಿಕರ್ ಮೇಲಿತ್ತು. ಝರಣಪ್ಪ ಚಿಂಚೋಳಿಕರ್​ರಿಂದ ದುರುಪಯೋಗ ಮಾಡಿಕೊಂಡಿರು ಒಂದು ಕೋಟಿ 55 ಲಕ್ಷ 44 ಸಾವಿರ 897 ರೂಪಾಯಿ ಹಣವನ್ನು ಕೂಡ ವಸೂಲಿ ಮಾಡಬೇಕು. ಕೂಡಲೇ ಝರಣಪ್ಪ ಅವರು ಸಂಸ್ಥೆಯ ಅಕೌಂಟ್​ಗೆ ಹಣ ಜಮೆ ಮಾಡಬೇಕು ಅಂತ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್