AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ದಾರುಣ ಘಟನೆ; ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು

ಗಾಯಾಗಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ‌ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮರ ತೆರವಿಗೆ ಅರಣ್ಯ‌ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ವಿಜಯಪುರದಲ್ಲಿ ದಾರುಣ ಘಟನೆ; ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
TV9 Web
| Edited By: |

Updated on: Apr 05, 2022 | 4:40 PM

Share

ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ. ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಮಹಿಳೆ ಸಾವನ್ನಪ್ಪಿದ್ದಾರೆ. ಚಾಲಕ, ಮತ್ತಿಬ್ಬರು ಮಹಿಳೆಯರು ಹಾಗೂ ಒಟ್ಟು ಐದು ಮಂದಿಗೆ ಗಾಯ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಂಧಿಚೌಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಅಟೋ ಮೇಲೆ ಬೃಹತ್ ಮರ ಮುರಿದು ಬಿದ್ದ ಘಟನೆಯಲ್ಲಿ ಐವರು ಜನರಿಗೆ ಗಂಭೀರ ಗಾಯವಾಗಿದೆ. ಪೊಲೀಸ್ ತರಬೇತಿ‌ ಕೇಂದ್ರದ ಆವರಣದಲ್ಲಿದ್ದ ಮರ ಬಿದ್ದು ವಿಜಯಪುರ ‌ನಗರದ ಸಿದ್ದಾರೂಢ ಕಾಲೋನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಸಾವನ್ನಪ್ಪಿದ್ದಾರೆ. ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಅಟೋ ಚಾಲಕ ಸಚಿನ ರಾಠೋಡ್ ಎಂಬವರಿಗೆ ಗಾಯವಾಗಿದೆ. ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಅಟೋ‌ ಚಾಲಕ ಗಾಯಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಹೋಗುತ್ತಿದ್ದ ವೇಳೆ ನಡೆದ ಅವಘಡ ಸಂಭವಿಸಿದೆ.

ಗಾಯಾಗಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ‌ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮರ ತೆರವಿಗೆ ಅರಣ್ಯ‌ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ದಾವಣಗೆರೆ: ಹೆರಿಗೆ ಆದ ಬಳಿಕ ಮಗು ಬಿಟ್ಟು ಹೋದ ತಾಯಿ.

ಹೆರಿಗೆ ಆದ ಬಳಿಕ ತಾಯಿ ಮಗುವನ್ನು ಬಿಟ್ಟು ಹೋದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 29 ರಂದು ದಾವಣಗೆರೆ ಬಾಪೂಜಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ತಾಯಿ‌ ಜನ್ಮ ನೀಡಿದ್ದರು. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಿದ್ದ ಹಿನ್ನೆಲೆ ಸರ್ಕಾರಿ ಮಹಿಳಾ‌ ಮತ್ತು ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮಗುವಿನ ಆರೈಕೆ ಮಾಡಲಾಗಿತ್ತು. ಆದರೆ, ಹೆರಿಗೆ ಆಗಿ ಎಳು ದಿನವಾದ್ರೂ ತಾಯಿ ಮತ್ತು ಸಂಬಂಧಿಕರು‌ ಪತ್ತೆ ಆಗಿಲ್ಲ.

ತಾಯಿ ಮತ್ತು ಸಂಬಂಧಿಕರು ಪತ್ತೆ ಆಗದ ಹಿನ್ನೆಲೆ ಬಸವನಗರ ಠಾಣೆಯ ಪೊಲೀಸರಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಒಂದು ಕೆಜಿ 50 ಗ್ರಾಂ ತೂಕದ ಗಂಡು ಮಗುವಿಗೆ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಇದೇ ಆಸ್ಪತ್ರೆಯಲ್ಲಿ ಈ ಮೊದಲು ಒಂದು ಗಂಡು ಮಗ ಅಪರಣ ಆಗಿತ್ತು. ಇದೇ ಆಸ್ಪತ್ರೆ ಯಲ್ಲಿ ಮಾರ್ಚ 16 ರಂದು ಗಂಡು ಮಗು ಅಪಹರಣ ಪ್ರಕರಣ ನಡೆದಿತ್ತು. ಆ ಘಟನೆಯಲ್ಲಿ ಅಪಹರಣಕ್ಕೆ ಒಳಗಾದ ಮಗು ಇನ್ನೂ ಪತ್ತೆಯಾಗಿಲ್ಲ. ಮಗುವಿಗಾಗಿ ತಾಯಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ಇದೀಗ ಹೊಸ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಕೆಫೆಯಲ್ಲಿ ಮೂವರು ಯುವತಿಯರ ಹೊಡೆದಾಟ; ಜಗಳ ಬಿಡಿಸಲು ಪರದಾಡಿದ ಹುಡುಗರು

ಇದನ್ನೂ ಓದಿ: ವಿಜಯನಗರ: ಫಸಲು ಕಾಯಲು ತೆರಳಿದ್ದ ರೈತನ ಮೇಲೆ 3 ಕರಡಿಗಳ ದಾಳಿ; ಗಂಭೀರ ಗಾಯ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್