AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yatnal vs Muslim Leaders: ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್​

ವಿಜಯಪುರ ಜಿಲ್ಲೆಯಲ್ಲಿ ಮುಸ್ಲಿಂ ಮುಖಂಡರು ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ನಡುವೆ ಮಾತಿನ ಸಮರ ಆರಂಭವಾಗಿದೆ. ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಮುಸ್ಲಿಂ ಮುಖಂಡರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಕಿಡಿ ಕಾರಿದ್ದಾರೆ.

Yatnal vs Muslim Leaders: ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್​ ಸವಾಲ್​
ಬಸನಗೌಡ ಪಾಟೀಲ್​ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on:Oct 15, 2024 | 11:25 AM

Share

ವಿಜಯಪುರ, ಅಕ್ಟೋಬರ್​ 15: ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ (SS Khadri) ಮತ್ತು ಮುಸ್ಲಿಂ ಮುಖಂಡರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ತಿರುಗೇಟು ನೀಡಿದ್ದಾರೆ.

“ಖಾದ್ರಿ ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ.

ಹಿಂದೆಯೂ ನಾನು ಹೇಳಿದ್ದೆ ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್​ ಪೋಸ್ಟ್​​

ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಹೇಳಿದ್ದೇನು?

ತಿ…… ಮುಚ್ಚಿಕೊಂಡು ಬಸನಗೌಡ ಪಾಟೀಲ್​ ಯತ್ನಾಳ ಅವರು ರಾಜಕಾರಣ ಮಾಡಬೇಕು. ಇಲ್ಲದಿದ್ದರೇ ನವೆಂಬರ್​ 6 ರಂದು ಸಿಡಿ ಬಿಡುಗಡೆ ಮಾಡುವುದು ಗ್ಯಾರೆಂಟಿ ಎಂದು ವಿಜಯಪುರ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ಎಚ್ಚರಿಕೆ ನೀಡಿದ್ದರು.

ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣ

ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ವಕ್ಫ ಆಸ್ತಿ ಎಂದು ನೋಂದಣಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನೋಂದಣಿ ಮಾಡುವುದನ್ನು ಕೈಬಿಡುವಂತೆ ಒತ್ತಾಯಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪ್ರತಿಭಟನೆಗೆ​ ಕರೆ ಕೊಟ್ಟಿದ್ದಾರೆ.

ಅದರಂತೆ ಇಂದು (ಅ.15) ಸಿದ್ದೇಶ್ವರ ದೇವಸ್ಥಾನದ ಬಳಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಬಿಜೆಪಿ ನಾಯಕ ಸಿಟಿ ರವಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಯಾಗಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ನೇತೃತ್ವದ ಪ್ರತಿಭಟನೆಗೆ ಎಸ್​ಎಸ್​ ಖಾದ್ರಿ ಮತ್ತು ಮುಸ್ಲಿಂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕ ಬಸನಗೌಡ ಯತ್ನಾಳ್​ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:24 am, Tue, 15 October 24