ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ

ವಿಜಯಪುರ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ. ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ತಪಾಸನೆ ಮಾಡಲಾಗಿದೆ.

ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ
ಗೋಲ್ ಗುಂಬಜ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 3:43 PM

ವಿಜಯಪುರ, ಜನವರಿ 06: ಭಾರತೀಯ ಪುರಾತತ್ವ ಇಲಾಖೆಯ ಆಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಬಂದಿದೆ. ಈ ವಿಚಾರವಾಗಿ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ. ಕಿಡಿಗೇಡಿಗಳು ದೇಶದ ಮ್ಯೂಸಿಯಂಗಳಲ್ಲಿ ಬಾಂಬ್ ಇಟ್ಟಿದ್ದಾಗಿ ಇಮೇಲ್​ ಮೂಲಕ ಬೆದರಿಕೆ ಹಾಕಿದ್ದು ಸುಳ್ಳು ವದಂತಿ. ಮುಂಜಾಗೃತಾ ಕ್ರಮವಾಗಿ ನಗರದ ಗೋಲಗುಂಬಜ್ ಆವರಣದ ಮ್ಯೂಸಿಯಂನಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳ ತಪಾಸನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ನಿನ್ನೆ ಮೇಲ್ ಮೂಲಕ ಪುರಾತತ್ವ ಇಲಾಖೆ ಅಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಮೇಲ್ ಹಾಕಿದ್ದರು. morgue999lol ನಿಂದ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂದು enquiries@museumofindia.org ಸೇರಿದಂತೆ ನೂರಕ್ಕೂ ಅಧಿಕ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ. ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ