AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ​​: ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರ ಬಂಧನ

ವಿಜಯಪುರದ ಇಟ್ಟಿಗೆ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಭೀಕರ ಹಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆ ಮಾಲೀಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಣ ಪಡೆದು ಕೆಲಸಕ್ಕೆ ಬರಲು ತಡ ಮಾಡಿದ್ದಕ್ಕೆ ಹಲ್ಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನು ಪರಾರಿಯಾಗಿರುವ ಇಬ್ಬರಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.

ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ​​: ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರ ಬಂಧನ
ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ​​: ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರ ಬಂಧನ
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 20, 2025 | 4:41 PM

Share

ವಿಜಯಪುರ, ಜನವರಿ 20: ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮನಸೋಇಚ್ಛೆ ಮಾರಣಾಂತಿಕವಾಗಿ ಹಲ್ಲೆ (assault) ನಡೆಸಿದ್ದವರ ಪೈಕಿ ಇಟ್ಟಿಗೆ ಕಾರ್ಖಾನೆ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿವ ಮಾನವರ ಅನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ. ಪರಾರಿಯಾದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮವೆಂದ ಲಕ್ಷ್ಮಣ ನಿಂಬರಗಿ

ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜನವರಿ 18ರಂದು ಮಾಲೀಕ ಖೇಮು ರಾಥೋಡ್, ಸಹಚರರಿಂದ ವಿಜಯಪುರ ಹೊರವಲಯದ ಇಟ್ಟಿಗೆ ಕಾರ್ಖಾನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಚಿಕ್ಕಲಕಿ ಗ್ರಾಮದ ಕಾರ್ಮಿಕರ ಮೇಲೆ ಹಲ್ಲೆ ಮಾಡಲಾಗಿದೆ. ಮುಂಗಡ ಹಣ, ಕೆಲಸ ಮಾಡುವ ವಿಚಾರವಾಗಿ ಹಲ್ಲೆ ನಡೆದಿದೆ ಎಂದರು.

ಇದನ್ನೂ ಓದಿ: ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್​ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು. ಹಲ್ಲೆಗೊಳಗಾದ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ: ಸಿಎಂ

ಪ್ರಕರಣ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

ಇದು ಎಲ್ಲರೂ ತಲೆತಗ್ಗಿಸುವಂತ ಅಮಾನವೀಯ ಘಟನೆ: ಸಚಿವ ಸಂತೋಷ್ ಲಾಡ್

ರಾಯಚೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಎಲ್ಲರೂ ತಲೆತಗ್ಗಿಸುವಂತ ಅಮಾನವೀಯ ಘಟನೆ ಇದು. ಲೇಬರ್, ಪೊಲೀಸ್ ಕೇಸ್ ಎಲ್ಲಾ ಸೆಕೆಂಡರಿ. ಈ ತರ ಮನಸ್ಥಿತಿ ಇರುವಂತದ್ದು ನಮ್ಮ ರಾಜ್ಯದಲ್ಲಿ ನಡೆದಿದೆ ಅಂದರೆ ನನಗೆ ವೈಯಕ್ತಿಕವಾಗಿ ತಲೆತಗ್ಗಿಸುವಂತದ್ದು. ಕಾರ್ಮಿಕರನ್ನ ಹಿಗ್ಗಾ ಮುಗ್ಗಾ ಹೊಡೆದಿರುವುದನ್ನ ನಾನು ಮಾಧ್ಯಮಗಳ ಮುಖಾಂತರ ನೋಡಿದ್ದೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳನ್ನ ಕಾಲುವೆಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ಮಹಿಳೆ ವಿರುದ್ಧ ಕೇಸ್ ಬುಕ್

ಕಾನೂನಿನ ಕಠಿಣ ಕ್ರಮ ಪರಿಹಾರ ಅಲ್ಲಾ ಮನಸ್ಥಿತಿಗಳು ಬದಲಾಗಬೇಕು. ಬಾಲಕಾರ್ಮಿಕ ಪದ್ದತಿ ಕೂಡ ಬದಲಾಗಬೇಕು. ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಈ ರೀತಿಯ ಮನಸ್ಥಿತಿ ಬದಲಾಗಬೇಕು. ಇದಕ್ಕೆ ನನ್ನ ಸಮ್ಮತಿಯಿದೆ. ಕಾರ್ಮಿಕ ಅಂತ ಅಲ್ಲಾ ಯಾರ ಮೇಲೂ ಇಂತಹ ಘಟನೆ ನಡೆಯಬಹುದು. ಕಾರ್ಮಿಕ ಅಂತ ಪದ ತೆಗೆದರು ಈ ರೀತಿ ಹೊಡಿಬಹುದಾ, ಇದು ಮನಸ್ಥಿತಿ. ಇಂತಹ ಮನಸ್ಥಿತಿಯನ್ನ ನಾವು ವಿರೋಧಿಸಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:32 pm, Mon, 20 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!