ಬಸ್ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್​​ ಸಾವು, ಪೆಟ್ರೋಲ್‌ ಬಂಕ್​ಗೆ ನುಗ್ಗಿದ ಬಸ್

ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದ ನಿನ್ನೆ (ಮೇ.30) ರಂದು‌ ನಡೆದಿದೆ.

Follow us
ವಿವೇಕ ಬಿರಾದಾರ
|

Updated on:May 31, 2023 | 10:50 AM

ವಿಜಯಪುರ: ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ (Driver) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ (Governmnet Bus) ಪೆಟ್ರೋಲ್‌ ಬಂಕ್​ಗೆ (Petrol Bunk) ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ (ಮೇ.30) ರಂದು‌ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಕಲಬುರಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ದಾರಿ ಮಧ್ಯೆ ಬಸ್ ಹೆಡ್​ಲೈಟ್ ಸಮಸ್ಯೆಯಾಗಿ ಬಂದ್​ ಆಗಿದೆ. ಈ ಹಿನ್ನೆಲೆ ದಾರಿ ಮಧ್ಯೆ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಬಸ್​​ ಹೊರಟಿತ್ತು.

ಹೀಗೆ ಹೊರಡುವಾಗ ಬಸ್​ ಸಿಂದಗಿ ನಗರ ಪ್ರವೇಶಿಸುತ್ತಿದ್ದಂತೆ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆಗ ಬಸ್​ ನಿಯಂತ್ರಣ ತಪ್ಪಿ ಪೆಟ್ರೋಲ್​ ಬಂಕ್​ಗೆ ನುಗ್ಗುತ್ತಿದ್ದಂತೆ ಅಕ್ಕ-ಪಕ್ಕದಲ್ಲಿದ್ದ ಜನ ಗಾಭರಿಯಿಂದ ಚಲ್ಲಾಪಿಲ್ಲಿಯಾಗಿದ್ದಾರೆ.

ಇದನ್ನು ಕಂಡ ನಿರ್ವಾಹಕ ಶರಣು ಟಾಕಳಿಯವರು ಬಸ್​ನ ಬ್ರೇಕ್ ಹಿಡಿದು ನಿಲ್ಲಿಸಿದ್ದಾರೆ. ಕಂಡೆಕ್ಟರ್​​ ಶರಣು ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅಲ್ಲದೇ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಸಂಭವನೀಯ ಅಪಾಯ ತಪ್ಪಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಪ್ಜಲಪುರ ಡಿಪೋ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 31 May 23

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್