ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ; ಸ್ಥಳದಲ್ಲಿ ಭಯದ ವಾತಾವರಣ

ವಾರ್ಡ್ ನಂ.19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ; ಸ್ಥಳದಲ್ಲಿ ಭಯದ ವಾತಾವರಣ
ಹೈದರ್ ಅಲಿ ನದಾಫ್ ಹಾಗೂ ಕಣ್ಣೀರು ಹಾಕುತ್ತಿರುವ ಪಾಲಿಕೆ ಸದಸ್ಯೆ ನಿಶಾತ್
Follow us
ಆಯೇಷಾ ಬಾನು
| Updated By: Digi Tech Desk

Updated on:Jul 19, 2023 | 2:15 PM

ವಿಜಯಪುರ: ಹಾಡುಹಗಲೇ ಗುಂಡಿನ ದಾಳಿ ನಡೆದಿದ್ದು, ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ. ವಾರ್ಡ್ ನಂ.19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮೃತ ಹೈದರ್ ನದಾಫ್ ರೌಡಿ ಶೀಟರ್ ಆಗಿದ್ದ. ದುಷ್ಕರ್ಮಿಗಳು ಗುಂಡಿನ ದಾಳಿ‌ ನಡೆಸಿದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ. ವಿಜಯಪುರ ನಗರದಲ್ಲಿ ಚಾಂದಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ, ಬೆನ್ನಟ್ಟಿದ್ದ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿವೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊನ್ನೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Sat, 6 May 23

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ