AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು

ವಿಜಯಪುರದ ಯೋಗಾಪುರದ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಕೈಗಡಿಯಾರ ವಿಚಾರವಾಗಿ ನಡೆದ ಗಲಾಟೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. 5ನೇ ತರಗತಿ ಬಾಲಕನ ಮೇಲೆ 9ನೇ ತರಗತಿ ಬಾಲಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು
ಮೃತ ವಿದ್ಯಾರ್ಥಿ ಅನ್ಸ್, ಶಾಲೆ ಮುಂದೆ ಪ್ರತಿಭಟನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 07, 2025 | 9:01 AM

Share

ವಿಜಯಪುರ, ಆಗಸ್ಟ್​ 07: ನಮ್ಮ ಮಗ ಓದಿ ವಿದ್ಯಾವಂತನಾಗಬೇಕೆಂಬ ಆಸೆಯಿಂದ ದೂರದ ಬಿಹಾರದಿಂದ ಬಂದು ವಿಜಯಪುರ ನಗರದ ಹೊರಭಾಗದಲ್ಲಿನ ಯೋಗಾಪುರದಲ್ಲಿ ನೆಲೆಸಿದ್ದ ಕುಟುಂಬ ಖಾಸಗಿ ಶಾಲೆಗೆ ಆತನನ್ನು ಸೇರಿಸಿದ್ದರು. ಆದರೆ ಇದೀಗ ಪೋಷಕರು ಕಣ್ಣೀರು ಹಾಕುವಂತಾಗಿದೆ. ಶಾಲೆಯಲ್ಲಿ ನಡೆದ ಅದೊಂದು ಜಗಳದಲ್ಲಿ 5ನೇ ತರಗತಿಯ ವಿದ್ಯಾರ್ಥಿ (student) ಸಾವನ್ನಪ್ಪಿದ್ದಾನೆ. ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಸಾವಾಗಿದೆ (death) ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆ ಮುಂದೆ ಬಾಲಕನ ಶವವಿಟ್ಟು ಪೋಷಕರು ಹಾಗೂ ಸ್ಥಳಿಯರು ಪ್ರತಿಭಟಿಸಿದರು.

ಶಾಲೆ ಮುಂದೆ ವಿದ್ಯಾರ್ಥಿ ಶವವಿಟ್ಟು ಪ್ರತಿಭಟನೆ 

ವಿಜಯಪುರ ನಗರದ ಹೊರಭಾಗದ ಯೋಗಾಪುರದಲ್ಲಿ ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಮುಂದೆ ಜನ ಸಾಗರ ಸೇರಿತ್ತು. ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಬಿಹಾರ ಮೂಲದ ಅನ್ಸ್ ಸುನೀಲ್ ಎಂಬ 11 ವರ್ಷದ ಬಾಲಕನ ಶವವನ್ನು ಇಟ್ಟು ಆತನ ತಂದೆ-ತಾಯಿ ರೋಧಿಸುತ್ತಿದ್ದರು. ಸ್ಥಳಿಯ ಜನರು ಸಹ ಬಾಲಕನ ಸಾವಿಗೆ ಮಮ್ಮಲ ಮರಗುತ್ತಿದ್ದರು. ಅಷ್ಟಕ್ಕೂ ಶಾಲೆ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವುದಕ್ಕೆ ಕಾರಣ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯ.

ಕೈಗಡಿಯಾರ ವಿಚಾರದಲ್ಲಿ ಗಲಾಟೆ

ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್​ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್​ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ.

ಇದನ್ನೂ ಓದಿ
Image
ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್​: ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!
Image
ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ
Image
ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
Image
ಬಾಲಕನ ಕಿಡ್ನಾಪ್: ಪೊಲೀಸರಿಗೆ ಹೇಳಿದ್ದಕ್ಕೆ ಕೊಂದ ದುಷ್ಕರ್ಮಿಗಳು!

ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್​: ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!

ಪೋಷಕರು ಮಗ ಅನ್ಸ್​​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ 5 ದಿನಗಳ ಬಳಿಕ ಸಾವನ್ನಪ್ಪಿದ್ದಾನೆ. ಹಲ್ಲೆ ವಿಚಾರ ಶಾಲಾ ಮುಖ್ಯಸ್ಥರಿಗೆ ತಿಳಿಸಿದ್ದರೂ ಸ್ಪಂದಿಸಿರಲಿಲ್ಲ. ನಿಮ್ಮ ಮಗ ಏನಾದರೂ ಸತ್ತಿದ್ದಾನಾ ಎಂದು ವಿದ್ಯಾರ್ಥಿ ಪೋಷಕರಿಗೆ ಬೆದರಿಕೆ ಹಾಕಿದ್ದು, ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣವೆಂದು ಪೋಷಕರು, ಸ್ಥಳೀಯರ ಆರೋಪಿಸಿದ್ದಾರೆ.

ಬಾಲಕನ ಶವ ಶಾಲೆಯ ಗೇಟ್ ಬಳಿ ಇಟ್ಟು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಶಾಲೆಗೆ ಬೀಗ ಹಾಕಿ ಪರಾರಿಯಾಗಿದ್ಧಾರೆ. ನೆರೆದ ಜನರಂತೂ ಶ್ರೀ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಶಾಲೆಯ ಮುಖ್ಯಸ್ಥರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಘಟನೆಯ ಸುದ್ದಿ ತಿಳಿದ ಕೂಡಲೇ ವಿಜಯಪುರ ಡಿವೈಎಸ್​​ಪಿ ಬಸವರಾಜ ಯಲಿಗಾರ, ಗೋಲಗುಂಬಜ್ ಇನ್ಸಪೆಕ್ಟರ್ ಮಲ್ಲಯ್ಯ ಮಠಪತಿ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಹಾಗೂ 20ಕ್ಕೂ ಅಧಿಕ ಕಾನ್ಸಸ್ಟೇಬಲ್ಸ್​ಗಳು ಸ್ಥಳಕ್ಕೆ ಆಗಮಿಸಿದ್ದರು.

ಪೋಷಕರ ಮನವೊಲಿಸಿದ ಪೊಲೀಸ್​

ಪ್ರತಿಭಟನಾ ನಿರತ ಮೃತ ಬಾಲಕನ ಪೋಷಕರು ಹಾಗೂ ಸ್ಥಳಿಯರೊಂದಿಗೆ ಮಾತುಕತೆ ನಡೆಸಿದರು. ಘಟನೆ ಕುರಿತು ದೂರು ನೀಡಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು. ಪ್ರತಿಭಟನೆಯನ್ನು ಕೈಬಿಟ್ಟು ಮುಂದಿನ ಪ್ರಕ್ರಿಯೆಗೆ ಅವಕಾಶ ನೀಡಿ ಎಂದು ಹೇಳಿದರು. ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ ಕಾರಣ ಬಾಲಕನ ಶವವನ್ನು ಮಣೋತ್ತರ ಪರೀಕ್ಷೆಗೆ ರವಾನೆ ಮಾಡಲು ಪೋಷಕರು ಹಾಗೂ ಸ್ಥಳಿಯರು ಸಹಕಾರ ನೀಡಿದರು. ಪ್ರತಿಭಟನೆ ಕೈಬಿಟ್ಟು ಶಾಲಾ ಆಡಳಿತ ಮಂಡಳಿ ವಿರುದ್ದ ದೂರು ನೀಡೋದಾಗಿ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಮಾತ್ರ ಈ ಘಟನೆಗೆ ಶಾಲೆಯ ಮುಖ್ಯಸ್ಥರೇ ಕಾರಣವೆಂದು ತೀವ್ರ ಅಸಮಾಧಾನ ಹೊರ ಹಾಕಿದ್ಧಾರೆ.

ಇದನ್ನೂ ಓದಿ: ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಸದ್ಯ ಬಾಲಕ ಸಾವಿಗೆ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರು ಕಾರಣವೆಂಬ ಆರೋಪ ಕೇಳಿ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಹಿರಿಯ ವಿದ್ಯಾರ್ಥಿಗಳು ಮಾಡಿದ ಹಲ್ಲೆಯಿಂದ ಮೃತಪಟ್ಟಿದ್ದಾ ಅಥವಾ ಬೇರೆ ಕಾರಣದಿಂದ ಮೃತಪಟ್ಟಿರುವುದಾ ಎಂಬುದು ತಿಳಿದು ಬರಲಿದೆ. ಘಟನೆ ಕುರಿತು ಗೋಲಗುಂಬಜ್ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 am, Thu, 7 August 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು