AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರಗೊಂಡಿದ್ದು, ನೋಟಿಸ್​ ನೀಡಿದ್ದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ. ಇನ್ನು ಇದನ್ನು ಪರಿಶೀಲನೆ ಬಂದಿರುವ ಬಿಜೆಪಿ ನಿಯೋಗ ಸಹ ರೈತರ ಜತೆ ಚರ್ಚಿಸಿ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಭೂಬಾಲನ್ ಮಾಧ್ಯಮಗಳ ಜೊತೆ ಮಾತನಾಡಿ ಕೆಲ ಮಾಹಿತಿ ಹಂಚಿಕೊಂಡಿದ್ದು, ಅದು ಈ ಕೆಳಗಿನಂತಿದೆ.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ
ವಿಜಯಪುರ ಡಿಸಿ ಟಿ ಭೂಬಾಲನ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 30, 2024 | 10:50 AM

Share

ವಿಜಯಪುರ, (ಅಕ್ಟೋಬರ್ 29): ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ (Wakf Land Dispute) ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇಂದು (ಅಕ್ಟೋಬರ್ 29) ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ ಜಿಲ್ಲಾಧಿಕರಿ ಭೂಬಾಲನ್ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭೂಬಾಲನ್, ಸಚಿವ ಜಮಿರ್ ಅಹಮ್ಮದ್ ಖಾನ್ ಅವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನಿಯೋಗ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ವಕ್ಫ್​ ಸಚಿವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ. ನೋಟಿಸ್ ಕೊಡದೆಯೂ ಇಂದೀಕರಣ ಆದ ಉದಾಹರಣೆ ಇವೆ ಎಂದು ಸ್ಪಷ್ಟಪಸಿದರು.

ಇದನ್ನೂ ಓದಿ: ವಕ್ಫ್​ ವಿವಾದ: ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ

ನೋಟಿಸ್ ಕೊಟ್ಟ ತಕ್ಷಣ ಖಾತಾ ಬದಲಾವಣೆ ಆಗುವುದಿಲ್ಲ. ಭೂಮಾಲೀಕರು ಹಾಗೂ ವಕ್ಫ್​ಗೆ ನಾವು ನೊಟೀಸ್ ಕೊಟ್ಟಿದ್ದೇವೆ. ಎರಡೂ ಪಾರ್ಟಿಗಳಿಗೆ ಕರೆದು ವಿಚಾರಣೆ ನಡೆಸುತ್ತೇವೆ. ಕಾಲಂ ನಂ.9ರಲ್ಲಿ ಹಾಗೂ ಮಾಲೀಕತ್ವ ಜಾಗದಲ್ಲಿ ವಕ್ಫ್ ಹೆಸರು ಹಾಕಿಲ್ಲ, 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಆದರೆ ಅವರ ಮಾಲೀಕತ್ವ ಬದಲಾಗಲ್ಲ. ಇಂಡಿ ತಹಶೀಲ್ದಾರ್ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಗಣಕೀಕರಣಗಳನ್ನೂ ಕ್ಯಾನ್ಸಲ್ ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್​ ಹೆಸರು ಹೋಗಲಿದೆ ಎಂದು ಹೇಳಿದರು.

ಭವಿಷ್ಯದಲ್ಲಿ ಇಂತಹ ಸಮಸ್ಯೆ ಆಗಬಾರದೆಂದು ಸಚಿವರು ಟಾಸ್ಕ್​ಫೋರ್ಸ್ ರಚನೆ ಮಾಡಿದ್ದಾರೆ. 250 ಎಕರೆ ಭೂಮಿಗೆ ನೋಟಿಸ್ ಕೊಡಲಾಗಿದೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಎರಡು ಮೂರು ವರ್ಷಗಳ ಹಾಗೂ ಅದಕ್ಕೂ‌ ಮುಂಚೆ ಆದ ಇಂದೀಕರಣ ಪ್ರಕರಣಗಳ ಕುರಿತು ಸರ್ಕಾರ ನೀಡುವ ಸೂಚನೆ ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Tue, 29 October 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು