Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ: 3.9ರಷ್ಟು ತೀವ್ರತೆ ದಾಖಲು, ಇಂದು ತಜ್ಞರಿಂದ ಪರೀಕ್ಷೆ

ವಿಜಯಪುರ ತಾಲೂಕಿನ ಹೊನ್ನುಟಗಿ ಹಾಗೂ ಸುತ್ತಮುತ್ತಲೂ ಭೂಂಕಪನ ದೃಢವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಅಧಿಕೃತ ಮಾಹಿತಿ  ನೀಡಲಾಗಿದೆ.

Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ: 3.9ರಷ್ಟು ತೀವ್ರತೆ ದಾಖಲು, ಇಂದು ತಜ್ಞರಿಂದ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 26, 2022 | 8:08 AM

ವಿಜಯಪುರ: ಜಿಲ್ಲೆಯಲ್ಲಿ ಭೂಕಂಪನ (Earthquake) ಮುಂದುವರೆದಿದ್ದು, ನಿನ್ನೆ ರಾತ್ರಿ 8.51 ಸುಮಾರಿಗೆ ಮತ್ತು ಮಧ್ಯರಾತ್ರಿ 2.18ಕ್ಕೆ ಭೂಮಿ ಕಂಪಿಸಿದ್ದು, 3.9 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ವಿಜಯಪುರ ತಾಲೂಕಿನ ಹೊನ್ನುಟಗಿ ಹಾಗೂ ಸುತ್ತಮುತ್ತಲೂ ಭೂಂಕಪನ ದೃಢವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಅಧಿಕೃತ ಮಾಹಿತಿ  ನೀಡಲಾಗಿದೆ. ಮೇಲಿಂದ ಮೇಲೆ ಭೂಕಂಪನ ಉಂಟಾಗುತ್ತಿದ್ದು, ಈ ಕುರಿತು ಇಂದು ತಜ್ಞ ವಿಜ್ಞಾನಿಗಳು ಜಿಲ್ಲೆಗೆ ಆಗಮಿಸಿ ಪರೀಕ್ಷೆ ನಡೆಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಆಧ್ಯಯನ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ನಿನ್ನೆ ಸಾಯಂಕಾಲ ಹಾಗೂ ರಾತ್ರಿ ಭೂಮಿ‌ ಕಂಪಸಿದ್ದು ರಿಕ್ಟರ್ ಮಾಪನದಲ್ಲಿ ‌ದಾಖಲಾಗಿದೆ. ಇಷ್ಟರ ಬಳಿಕ ಆಗಷ್ಟ 26 ರ ನಸುಕಿನ ಜಾವ 2-21ಕ್ಕೆ ಕಂಪಿಸ ಭೂಮಿ‌ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ ಬಸವನಬಾಗೇವಾಡಿ, ಸಿಂದಗಿ, ಇಂಡಿ, ನೆರೆಯ ಬಾಗಲಕೋಟೆಯ ಜಮಖಂಡಿ ಹಾಗೂ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರದಲ್ಲೂ ಕಂಪನದ ಅನುಭವ ಉಂಟಾಗಿದೆ. ಇಷ್ಟೇ ಅಲ್ಲದೆ ಇಂದು ಮುಂಜಾನೆ 6.58ಕ್ಕೆ ಮತ್ತೇ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ:  Vijayapura Earthquake: ಸಾಯಂಕಾಲ ಆಯ್ತು, ಇದೀಗ ರಾತ್ರಿಯೂ ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ಈ ಕಂಪನಗಳ ಕುರಿತು ಇನ್ನೂ ಮಾಹಿತಿ ತಿಳಿದಿಲ್ಲ. ಎಷ್ಟು ಪ್ರಮಾಣದಲ್ಲಿ ಕಂಪನವಾಗಿದೆ ಎಂದು ಕರಾನೈವಿನಿ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಬೇಕಿದೆ. ಮೇಲಿಂದ ಮೇಲೆ ಸರಣಿ ರೂಪದಲ್ಲಿ ಭೂಕಂಪನ ಕಾಡುತ್ತಿದ್ದು, ಇಂದು ಭೂಕಂಪನ ಕುರಿತು ತಜ್ಞ ವಿಜ್ಞಾನಿಗಳು ಪರೀಕ್ಷೆ ನಡೆಸಲಿದ್ದಾರೆ.

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು (Aug 21 ವರದಿ)

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಆಗಸ್ಟ್‌ 19ರ ರಾತ್ರಿ 8.16ಕ್ಕೆ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ. ಜನರು ಮನೆ ಬಿಟ್ಟು ಹೊರಗೋಡಿ ಬಂದಿದ್ದು, ಕೆಲ ಮನೆಗಳಲ್ಲಿನ ಪಾತ್ರೆ ಪಗಡೆ ಕೆಳಗೆ ಬಿದ್ದಿದ್ದವು. ಜನರು ಭೂಕಂಪನದಿಂದ ಆತಂಕಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:56 am, Fri, 26 August 22

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ