AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ವಿಜಯಪುರದ ವಿಶೇಷ ನ್ಯಾಯಾಲಯವು ಐದು ವರ್ಷದ ಮಗಳ ಅತ್ಯಾಚಾರ ಪ್ರಕರಣದಲ್ಲಿ ತಂದೆಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದಲ್ಲಿ ಆರೋಪಿ ತಂದೆ ತಪ್ಪಿತಸ್ಥರೆಂದು ಸಾಬೀತಾಗಿದೆ. 2025 ಆಗಸ್ಟ್ 30ರಂದು ಘಟನೆ ನಡೆದಿತ್ತು.

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್
ವಿಜಯಪುರ ವಿಶೇಷ ನ್ಯಾಯಾಲಯImage Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 06, 2026 | 10:24 PM

Share

ವಿಜಯಪುರ, ಮಾರ್ಚ್​ 06: ಐದು ವರ್ಷದ ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ (Father) ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ತಂದೆಯೇ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ನಡೆದಿದ್ದೇನು?

ಹೆಂಡತಿ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು ವರ್ಷದ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ. ಮೂಲತಃ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ನಿವಾಸಿ ಆರೋಪಿ ಸೋಮನಿಂಗ ಕಳಸದವರ ಶಿಕ್ಷೆಗೆ ಗುರಿಯಾಗಿದ್ದಾನೆ.

ಇದನ್ನೂ ಓದಿ: ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ

ಸೋಮನಿಂಗ ತನ್ನದೇ ಅಪ್ರಾಪ್ತ ಐದು ವರ್ಷದ ಮಗಳಿಗೆ ಕಳೆದ ಗಣೇಶ ಚತುರ್ಥಿ ವೇಳೆ ಗಣೇಶನ ಮೂರ್ತಿಗಳನ್ನು ತೋರಿಸುತ್ತೇನೆ ಎಂದು ಕರೆದುಕೊಂಡು ವಿಜಯಪುರ ನಗರದ ಆಲಕುಂಟೆ ನಗರದಲ್ಲಿನ ನಿರ್ಜನ ಪ್ರದೇಶದಕ್ಕೆ ಕರೆದುಕೊಂಡು ಹೋಗಿ 2025 ಆಗಸ್ಟ್ 30ರಂದು ಸಾಯಂಕಾಲ ಅತ್ಯಾಚಾರ ಎಸಗಿದ್ದ. ಈ‌ ಕುರಿತು ಅಪ್ರಾಪ್ತೆಯ ತಾಯಿ ವಿಜಯಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 65(2) ಬಿ ಎನ್ ಎಸ್ – 2023 ಹಾಗೂ 5(ಎಂ) 6 ಪೋಕ್ಸೋ ಕಾಯ್ದೆ 2012ರಂತೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!

ವಿಚಾರಣೆಯಲ್ಲಿ ಸಾಕ್ಷಿಗಳನ್ನು ಪರಿಶೀಲಿಸಿದ ವಿಜಯಪುರದ ವಿಶೇಷ ಪೋಕ್ಸೋ ನ್ಯಾಯಾಧೀಶೆ ಕು. ಸಿಂದು ಪೋತದಾರ ಅವರು ಆರೋಪಿ ಸೋಮನಿಂಗ ಕಳಸದಗೆ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಮಹಿಳಾ ಠಾಣೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ಜಯವಂತ ದುಲಾರಿ, ಆ‌ರ್ ಎ ದಿನ್ನಿ, ಪಿ ವೈ ಅಂಬಿಗೇರ, ಸಿಬ್ಬಂದಿಗಳಾದ ವಿಜಯ ಕೋಟ್ಯಾಳ, ಆರ್ ಜಿ ದೇವೂರ, ಎಸ್ ಎಂ ಕೋಳುರಗಿ, ಎಸ್ ಕೆ ಬಡಚಿ, ಕುಮಾರ ದೇಸಾಯಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಶೇಷ ಅಭಿಯೋಜಕ ವಿ ಜಿ ಹಗರಗೊಂಡ ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ