AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ಒಡೆತನದ ಸಂಸ್ಥೆಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ವಿಮೆ ಭಾಗ್ಯ! ಪೋಷಕರಿಂದ ಮೆಚ್ಚುಗೆ

ಈಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇತ್ತೀಚಿಗಷ್ಟೇ ಚಾಮರಾಜನಗರದಲ್ಲಿ ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಮೃತಪಟ್ಟಿದ್ದಳು. ಅಲ್ಲದೇ, ಕೆಲವು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ, ಕಟ್ಟಡಗಳು ಶಿಥಿಲಗೊಂಡು ದುರಂತ ಸಂಭವಿಸುತ್ತಿವೆ. ಈ ದುರಂತಗಳಲ್ಲಿ ಅನೇಕ ಮಕ್ಕಳು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ತಮ್ಮ ಮಾಲೀಕತ್ವದ ಸಂಸ್ಥೆ ವತಿಯಿಂದ ಸರ್ಕಾರಿ ಮಕ್ಕಳಿಗೆ ಗುಂಪು ವಿಮೆ ಮಾಡಿಸಿದ್ದಾರೆ. ಇಲ್ಲಿದೆ ವಿವರ.

ಯತ್ನಾಳ್​ ಒಡೆತನದ ಸಂಸ್ಥೆಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ವಿಮೆ ಭಾಗ್ಯ! ಪೋಷಕರಿಂದ ಮೆಚ್ಚುಗೆ
ಯತ್ನಾಳ್​ ಒಡೆತನದ ಸಂಸ್ಥೆಯಿಂದ ಸರ್ಕಾರಿ ಶಾಲೆ ಮಕ್ಕಳಿಗೆ ವಿಮೆ ಭಾಗ್ಯ
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on: Jan 20, 2025 | 2:43 PM

Share

ವಿಜಯಪುರ, ಜನವರಿ 20: ಸರ್ಕಾರಿ ಶಾಲೆಗಳಲ್ಲಿ (Government School) ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ (Basangouda Patil Yatnal) ಅಧ್ಯಕ್ಷತೆಯ ಸಿದ್ದಿಸಿರಿ ಸೌಹಾರ್ಧ ಸಂಘದಿಂದ ಗುಂಪು ವಿಮೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದ್ದು ದೇಶದಲ್ಲೇ ಮೊದಲು ಎನ್ನಬಹುದು.

ಸರ್ಕಾರಿ ಶಾಲೆಯ ಮಕ್ಕಳಿಗೆ ಅನುಕೂಲವಾಗಲೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ಅಧ್ಯಕ್ಷತೆಯ ಸಿದ್ದಿಸಿರಿ ಸೌಹಾರ್ಧ ಸಂಘದಿಂದ ಗುಂಪು ವಿಮೆ ಸೌಲಭ್ಯ ಮಾಡಿಸಿದ್ದಾರೆ. ಎಸ್​ಬಿಐ ಬ್ಯಾಂಕ್ ಸಹಯೋಗ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ವಿಜಯಪುರ ನಗರ ಭಾಗದಲ್ಲಿರುವ ಎಲ್ಲ ಸರ್ಕಾರಿ ಶಾಲೆಯ 1 ರಿಂದ 10 ತರಗತಿಗಳ ವಿದ್ಯಾರ್ಥಿಗಳಿಗೆ ವಿಮೆ ಮಾಡಿಸಿದ್ದಾರೆ.

ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಸಿಗೆ ನೀರು ಹಾಕುವ ಮೂಲಕ ವಿಮಾ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಸಾಂಕೇತಿಕವಾಗಿ ಕೆಲ ಮಕ್ಕಳಿಗೆ ವಿಮಾ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ, ಏನಾದರೂ ಅನಾಹುತವಾಗಿ ಮಕ್ಕಳ ಜೀವಕ್ಕೆ ಸಂಚಕಾರ ಆದರೆ ಅವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಬರುತ್ತದೆ. ವಿಕಲಾಂಗತೆ ಆದರೆ, ದೊಡ್ಡ ಪ್ರಮಾಣದ ಶಸ್ತ್ರಚಿಕಿತ್ಸೆ ಆದರೆ 1 ಲಕ್ಷ ರೂ. ಸಹಾಯ ಧನ ಈ ವಿಮೆಯಿಂದ ಸಿಗುತ್ತದೆ. ಇತ್ತೀಚೆಗೆ ನಗರದ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮೂರು ಮಕ್ಕಳು ಬಿದ್ದು ಸಾವನ್ನಪ್ಪಿದ್ದ ಘಟನೆಯಿಂದ ಜಾಗೃತವಾಗಿ ಗುಂಪು ವಿಮಾ ಯೋಜನೆಯನ್ನು ಸರ್ಕಾರಿ ಶಾಲಾ ಮಕ್ಕಳಿಗೆ ಒದಗಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲೊಂದು ವಿಶೇಷ ಮದುವೆ: ಸಿರಿಧಾನ್ಯ ಕಲ್ಯಾಣೋತ್ಸವ

ಸರ್ಕಾರಿ ಶಾಲೆಗಳ 15,279 ವಿದ್ಯಾರ್ಥಿಗಳಿಗೆ ವಿಮೆ ಮಾಡಿಸಲಾಗಿದೆ. ಈಗಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ವಿದ್ಯಾರ್ಥಿಗಳಿಗೂ ಕೂಡ ವಿಮೆ ಮಾಡಿಸಿಕೊಡಿ ಎಂದು ಅನೇಕರು ಮನವಿ ಮಾಡಿದ್ದಾರೆ. ಆ ಮಕ್ಕಳಿಗೂ ವಿಮೆ ಮಾಡಿಸಲಾಗುತ್ತದೆ ಎಂದು ಭರವಸೆ ನೀಡಿದರು. ಈಗ ಯಾವುದೇ ಚುನಾವಣೆ ಇಲ್ಲ. ಮತಗಳಿಗಾಗಿ ನಾನು ಈ ಕಾರ್ಯ ಮಾಡಿಲ್ಲ ಎಂದು ಯತ್ನಾಳ ಇದೇ ವೇಳೆ ಹೇಳಿದರು.

ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಿಸಬೇಕಿದೆ. ಅದಕ್ಕಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಹೆಚ್ಚು ಅಂಕ ಪಡೆಯುವ ಹಾಗೂ ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಒಂದು ಲ್ಯಾಪ್ ಟಾಪ್ ನೀಡಲಾಗುತ್ತದೆ. ವಿಮೆ ಹಾಗೂ ಲ್ಯಾಪ್ ಟಾಪ್ ಗಾಗಿ ಪ್ರತಿ ವರ್ಷ 20 ಲಕ್ಷ ರೂಪಾಯಿ ಖರ್ಚಾಗಲಿದೆ. ಅದನ್ನು ಸಿದ್ದಸಿರಿ ಸೌಹಾರ್ಧ ಸಂಘದಿಂದ ನೀಡಲಾಗುತ್ತದೆ ಎಂದು ಯತ್ನಾಳ ತಿಳಿಸಿದರು. ನಗರ ಶಾಸಕ ಯತ್ನಾಳ ಅವರ ಈ ಕಾರ್ಯಕ್ಕೆ ವಿವಿಧ ಶಾಲಾ ಶಿಕ್ಷಕರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ನಾಗಠಾಣ ಶಾಸಕ ವಿಠಲ ಕಟಕದೊಂಡ ಹಾಗೂ ಇತರೆ ಆಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ