ವಿಜಯಪುರ: ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ರಂತೆ ಎಂಬ ಮಾತು ಇಲ್ಲಿ ಅನ್ವಯವಾಗುತ್ತದೆ. ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ವಿಜಯಪುರ ನಗರದ ಶಾಪೇಟೆಯಲ್ಲಿ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಯ ಪಾಲಾಗಿದ್ಧಾನೆ.

ವಿಜಯಪುರ: ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಯುವಕ ಆತ್ಮಹತ್ಯೆಗೆ ಯತ್ನ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 10, 2024 | 7:32 PM

ವಿಜಯಪುರ, ಫೆ.10: ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ(Vijayapura) ನಗರದ ಶಾಪೇಟೆಯಲ್ಲಿ ನಡೆದಿದೆ. ಇದೀಗ ಯುವಕ ಆಸ್ಪತ್ರೆಯ ಪಾಲಾಗಿದ್ಧಾನೆ. ನಗರದ ಶಾಪೇಟೆ ನಿವಾಸಿ ಶಾರುಖ್ ಸೌದಾಗರ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಇತನಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ಧಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಶಾರುಖ್ ತಂದೆ ಮೆಹಬೂಬಸಾಬ್ ಸ್ಥಳಿಯ ಮಹಿಳೆ ರುಬೀನಾ ಎಂಬುವವರ ಬಳಿ ಸಾಲ ಮಾಡಿದ್ದರಂತೆ. ಆದರೆ,ತೆಗೆದುಕೊಂಡ ಸಾಲವನ್ನು ಮರು ಪಾವತಿ ಮಾಡಿಲ್ಲವಂತೆ. ಈ ಹಿನ್ನಲೆ ರುಬೀನಾ ಮೆಹಬೂಬಸಾಬ್ ಸೌದಾಗರ್​ರನ್ನು ಕೇಳುವುದನ್ನು ಬಿಟ್ಟು, ಅವರ ಪುತ್ರ ಶಾರುಖ್​ಗೆ ಪೀಡಿಸುತ್ತಿದ್ದಳಂತೆ. ಇದರಿಂದ ಬೇಸರಗೊಂಡ ಶಾರುಖ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ಕುರಿತು ಎಪಿಎಂಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ಧಾರೆ. ತನಿಖೆ ಮುಂದುವರೆದಿದ್ದು, ಪೊಲೀಸರ ತನಿಖೆ ಬಳಿಕ ಮತ್ತಷ್ಟು ಸತ್ಯಾಂಶ ಹೊರ ಬರಲಿದೆ.

ಇದನ್ನೂ ಓದಿ:ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಗೂಡ್ಸ್ ಗಾಡಿ ಪಲ್ಟಿ; ಅದೃಷ್ಟವಶಾತ್​ ಪಾರಾದ ಚಾಲಕ

ಬೆಂಗಳೂರು: ನಗರದ ಮಲ್ಲೇಶ್ವರಂ ಬಳಿಯ ಸುಜಾತ ಟಾಕೀಸ್​​ ಬಳಿ ಖಾಸಗಿ ಕಂಪನಿಗೆ ಸೇರಿದ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್​​ ವಾಹನ ಪಲ್ಟಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 10 February 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ