AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್‌ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ ಹನಿಟ್ರ್ಯಾಪ್ ಪ್ರಕರಣಗಳ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.

ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್
ಆರೊಪಿಗಳಾದ ಮಹೇಶ್, ತೌಶೀಫ್ ಮತ್ತು ಅಮೂಲ್
ಅಶೋಕ ಯಡಳ್ಳಿ, ವಿಜಯಪುರ
| Updated By: ಭಾವನಾ ಹೆಗಡೆ|

Updated on:Nov 19, 2025 | 9:04 AM

Share

ವಿಜಯಪುರ, ನವೆಂಬರ್ 19: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು (Honeytrap Cases) ಹೆಚ್ಚುತ್ತಿವೆ. ಇದೀಗ ಇದೇ ಹನಿಟ್ರ್ಯಾಪ್ ವಿಚಾರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಜನ್ಮ ಕೊಟ್ಟ ತಾಯಿಯನ್ನೇ ಬಳಸಿಕೊಂಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ವೊಂದರ ಮ್ಯಾನೇಜರ್​ನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಲಕ್ಷ ಲಕ್ಷ ಸುಲಿಗೆ ಮಾಡಲು ಯತ್ನಿಸಿದ ಘಟನೆ ವಿಜಯಪುರ (Vijayapur) ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.

ಮ್ಯಾನೇಜರ್ ಜೊತೆಗಿನ ಖಾಸಗಿ ವೀಡಿಯೋ ಮಾಡಿದ್ದ ಮಹಿಳೆ

ಪಟ್ಟಣದಲ್ಲಿ ಎಳನೀರು ಮಾರಾಟ ಮಾಡುತ್ತಿದ್ದ 44 ವರ್ಷದ ಮಹಿಳೆ ಸರ್ಕಾರಿ ಬ್ಯಾಂಕ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಸಲುಗೆ ಬೆಳೆಸಿ ಕಳೆದ ನವೆಂಬರ್ 1 ರಂದು ತನ್ನ ಗೆಳೆತಿ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ನಡೆಸಿದ್ದರು. ಇದೇ ವೇಳೆ ಮನೆಯ ಕಿಟಿಕಿಯಲ್ಲಿ ಮೊಬೈಲ್ ಇಟ್ಟಿದ್ದನ್ನು ಕಂಡ ಮ್ಯಾನೇಜರ್, ಪ್ರಶ್ನೆ ಮಾಡಿದಾಗ ಫೋನ್ ಕೆಟ್ಟಿದೆ ಎಂದು ಸಬೂಬು ಹೇಳಿದ್ದರು. ಬಳಿಕ ನವೆಂಬರ್ 5 ರಂದು ಬ್ಯಾಂಕ್ ಮ್ಯಾನೇಜರ್​ಗೆ ಕರೆ ಮಾಡಿದ ಮಹಿಳೆ , ನಾವಿಬ್ಬರು ಏಕಾಂತದಲ್ಲಿರುವುದನ್ನು ಯಾರೋ ವಿಡಿಯೋ ಮಾಡಿದ್ದಾರೆ. ಅವರ ಬಳಿ ಮಾತನಾಡಿ ಬಗೆ ಹರಿಸಿಕೊಳ್ಳಿ ಎಂದು ಹೇಳಿದ್ದರು.

ಪತ್ರಕರ್ತನೆಂದು ಹೇಳಿ ಹಣ ವಸೂಲಿಗೆ ಯತ್ನ

ಇದೇ ವೇಳೆ ಮಹಿಳೆಯ ಅಳಿಯ ಮಹೇಶ ಬಗಲಿ, ಪತ್ರಕರ್ತ ತೌಶೀಫ್ ಖುರೇಷಿ ಎನ್ನುವವರಿಗೆ ನಿಮ್ಮಿಬ್ಬರ ವಿಡಿಯೋ ಸಿಕ್ಕಿವೆ ಎಂದು ಮ್ಯಾನೇಜರ್​ಗೆ ಬೆದರಿಸಿದ್ದ. ಈ ಹೇಯ ಕೃತ್ಯದಲ್ಲಿ ಮಹಿಳೆಯ ಸ್ವಂತ ಮಗನೂ ಸೇರಿದ್ದನೆಂಬುದು ತಿಳಿದುಬಂದಿದೆ. ತೌಶೀಫ್ ಖುರೇಷಿ, ಮಹೇಶ ಬಗಲಿ ಹಾಗೂ ಮಹಿಳೆಯ ಪುತ್ರ ಅಮೂಲ್ ಸೇರಿಕೊಂಡು ಬ್ಯಾಂಕ್ ಮ್ಯಾನೇಜರ್ ಬಳಿ ಬಂದು ಎಲ್ಲಾ ಬಗೆಹರಿಸಿಕೊಳ್ಳಿ. ಎಲ್ಲರಿಗೂ ಸೇರಿದಂತೆ 10 ಲಕ್ಷ ಹಣ ನೀಡಬೇಕು. ಇಲ್ಲವಾದರೆ ಮಾಧ್ಯಮಗಳಲ್ಲಿ ವಿಡಿಯೋ ಲೀಕ್ ಮಾಡಲಾಗುತ್ತದೆ ಎಂದು ಹೆದರಿಸಿದ್ದಾರೆ. ಇದರಿಂದ ಭಯಗೊಂಡ ಬ್ಯಾಂಕ್ ಮ್ಯಾನೇಜರ್ ಇಂಡಿ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಮಹಿಳೆ ಸೇರಿದಂತೆ ಉಳಿದ ಮೂವರ ಮೇಲೆ ದೂರು ನೀಡಿದ್ದಾರೆ.

ಇದನ್ನೂ ಓದಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಹತ್ಯೆ: ಕಾರಣವೇನು?

ಹಲವರಿಗೆ ಇದೇ ರೀತಿ ವಂಚಿಸಿರುವ ಶಂಕೆ

ಈ ಪ್ರಕರಣ ಕುರಿತು ದೂರು ದಾಖಲಿಸಿಕೊಂಡ ಇಂಡಿ ಪಟ್ಟಣ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತೌಶೀಫ್, ಮಹೇಶ ಹಾಗೂ ಮಹಿಳೆ ಪರಾರಿಯಾಗಿದ್ದಾರೆ. ಇದೀಗ ಮಹಿಳೆಯ ಪುತ್ರನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಹಿಳೆ ಸಹಿತ ಇಡೀ ಟೀಂ ಇಂಡಿ ಪಟ್ಟಣದಲ್ಲಿ ಹಲವಾರು ಜನರಿಗೆ ಇದೇ ರೀತಿ ಹನಿಟ್ರ್ಯಾಪ್ ಮಾಡಿ  ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆ ಯಾರಾದರೂ ನೊಂದವರು, ಬೆದರಿಕೆಗೆ ಒಳಗಾದವರು ಇದ್ದರೆ ದೂರು ನೀಡಿ ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:03 am, Wed, 19 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ