ವಿಜಯಪುರ: ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಮತದಾನ ಬಹಿಷ್ಕಾರ ಮಾಡಿದ ಹುಲ್ಲೂರ ತಾಂಡಾ ನಿವಾಸಿಗಳು

|

Updated on: Mar 31, 2023 | 2:14 PM

ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ತಾಂಡಾದ ಮತದಾರರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಹಮಾರೋ ತಾಂಡೋ ಹಮಾರಾ ರಾಜ್ ಎಂದು ಪ್ಲೆಕ್ಸ್ ಹಚ್ಚುವ ಮೂಲಕ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ ಮಾಡಿದ್ದಾರೆ.

ವಿಜಯಪುರ: ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಮತದಾನ ಬಹಿಷ್ಕಾರ ಮಾಡಿದ ಹುಲ್ಲೂರ ತಾಂಡಾ ನಿವಾಸಿಗಳು
ವಿಜಯಪುರ ಜಿಲ್ಲೆಯಲ್ಲಿ ಮತದಾನ ಬಹಿಷ್ಕಾರ
Follow us on

ವಿಜಯಪುರ: ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ತಾಂಡಾದ ಮತದಾರರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಹಮಾರೋ ತಾಂಡೋ ಹಮಾರಾ ರಾಜ್ ಎಂದು ಪ್ಲೆಕ್ಸ್ ಹಚ್ಚುವ ಮೂಲಕ ವಿಧಾನಸಭಾ ಚುನಾವಣೆಗೆ(Karnataka Assembly Election) ಬಹಿಷ್ಕಾರ ಮಾಡಿದ್ದಾರೆ. ಇನ್ನು ‘ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಒಳ ಮೀಸಲಾತಿಯನ್ನ ಹಿಂಪಡೆಯಬೇಕು ಅಲ್ಲಿಯವರೆಗೂ ನಮ್ಮ ಗ್ರಾಮಕ್ಕೆ ಯಾವುದೇ ರಾಜಕೀಯ ಮುಖಂಡರ ಪ್ರವೇಶ ನಿಷೇಧಿಸಲಾಗಿದೆ. ನೊಂದ ನನ್ನ ಸಮಾಜದ ಜನರಿಗೆ ನ್ಯಾಯ ಸಿಗೋವರೆಗೂ ಯಾವುದೇ ಪಕ್ಷದ ಕಾರ್ಯಕರ್ತರು ಜನರ ಮನೆಗೆ ತೆರಳಿ ಮನವಲಿಸಿ ಮತ ಕೇಳುವ ಅರ್ಹತೆ ಇರವುದಿಲ್ಲ ಎಂದು ತಾಂಡಾದ ಜನರು ಫ್ಲೆಕ್ಸ್​ನಲ್ಲಿ ಬರೆದಿದ್ದಾರೆ.

ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದಿಂದ ಪ್ರತಿಭಟನೆ

ಕಲಬುರಗಿ: ಒಳಮೀಸಲಾತಿ ಜಾರಿಗೆ ವಿರೋಧಿಸಿ ರಾಜ್ಯದ ಅನೇಕ ಜಿಲ್ಲೆಗಳ ಜನರು ಪ್ರತಭಟನೆ ನಡೆಸಿದ್ದಾರೆ. ಅದರಂತೆ ಇದೀಗ ಬಂಜಾರ ಸಮುದಾಯದಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ. ಬಳಿಕ ಒಳಮೀಸಲಾತಿ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಬಿಜೆಪಿಯಲ್ಲಿರುವ ಲಂಬಾಣಿ ಶಾಸಕರು,‌ ಸಂಸದರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸ್ಸು

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಈ ಕಾಯ್ದೆಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಮಾಣ ಶೇ. 15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ.

 ಆರೋಪಗಳಿಗೆ ಟ್ವೀಟ್​ ಮೂಲಕ ಉತ್ತರ ನೀಡಿದ್ದ ಸಿಎಂ

ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನವಾಗಿದೆ. ಉಳಿದ ಸಾಂವಿಧಾನಿಕ ಪ್ರಕ್ರಿಯೆಗಳು ಜಾರಿಯಲ್ಲಿವೆ. ಜನ ಜಾಣರಿದ್ದಾರೆ. ನಿಮ್ಮ ಆರೋಪಗಳು ಕಂಠ ಶೋಷಣೆಗೆ ಮಾತ್ರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ವಿರುದ್ಧ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಟ್ವೀಟ್‌ ಮೂಲಕ ಕಿಡಿಕಾರಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Fri, 31 March 23