ವಿಜಯಪುರ: ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು

| Updated By: ಆಯೇಷಾ ಬಾನು

Updated on: Feb 11, 2022 | 11:43 AM

ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕಾರ್ಮಿಕರು ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದರು. ವಿಷಯ ತಿಳಿದ ಬಳಿಕ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಜಯಪುರ: ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು
ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು
Follow us on

ವಿಜಯಪುರ: ಮಧ್ಯ ಪ್ರದೇಶದ ಮೂವತ್ತಕ್ಕೂ ಅಧಿಕ ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. 10 ಮಕ್ಕಳು ಸೇರಿ 35 ಕಾರ್ಮಿಕರನ್ನು ಇಂಡಿ ಪೊಲೀಸರು ರಕ್ಷಿಸಿದ್ದಾರೆ.

ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕಾರ್ಮಿಕರು ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದರು. ವಿಷಯ ತಿಳಿದ ಬಳಿಕ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಮಾಹಿತಿ ಮೇರೆಗೆ ಕಬ್ಬಿನ ಜಮೀನಿನ ಮೇಲೆ ದಾಳಿ ಮಾಡಿದ ಇಂಡಿ ಪೊಲೀಸರು, ಅಕ್ರಮ‌ ಬಂಧನದಲ್ಲಿದ್ದ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಸುಮಾರು 10 ಮಕ್ಕಳು ಸೇರಿ 35 ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಕಾರ್ಮಿಕರನ್ನ ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ಗುಬ್ಬೇವಾಡ ಗ್ರಾಮದ ಶರಣಪ್ಪ ಕೋಲಿ‌ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ ವ್ಯಕ್ತಿಯ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶರಣಪ್ಪ ಕೋಲಿ ಹಾಗೂ ರೋಹಿತ್, ಮಧ್ಯಪ್ರದೇಶದ ರತ್ನಾ ಜಿಲ್ಲೆಯಿಂದ ಕಾರ್ಮಿಕರನ್ನು ಕರೆ ತಂದಿದ್ದರು. ಬಿರಾದಾರ್ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಕೆಲಸ ಮಾಡಬೇಕೆಂದು ಕಾರ್ಮಿಕರಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ ಹೆದರಿದ ಕಾರ್ಮಿಕರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಂಕಷ್ಟ ಹೇಳಿಕೊಂಡಿದ್ದರು. ಬಳಿಕರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಮಾಹಿತಿ ನೀಡಿ ಸಹಾಯ ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ ಜಮೀನಿಗೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು ಅಕ್ರಮ ಬಂಧನದಲ್ಲಿದ್ದ ಕಾರ್ಮಿಕರನ್ನ ಬಿಡುಗಡೆಗೊಳಿಸಿದ್ದಾರೆ. 35 ಕಾರ್ಮಿಕರು, 10 ಮಕ್ಕಳನ್ನ ರಕ್ಷಣೆ‌ ಮಾಡಿದ್ದಾರೆ. ರಾತ್ರಿಯೇ ಎಲ್ಲಾ ಕಾರ್ಮಿಕರನ್ನು ರಕ್ಷಣೆ ಮಾಡಿ‌ ಮಹಾರಾಷ್ಟ್ರದ ಸೊಲ್ಲಾಪುರ ರೈಲು ನಿಲ್ದಾಣದಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ಕಾರ್ಮಿಕರನ್ನು ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಮಹಿಳೆ ಬಂಧನ, ಹಿನ್ನೆಲೆ ಏನಿತ್ತು?

Published On - 11:41 am, Fri, 11 February 22