Siddeshwara Swamiji Death: ನಡೆದಾಡುವ ದೇವರು ಎಂದು ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

| Updated By: ವಿವೇಕ ಬಿರಾದಾರ

Updated on: Jan 02, 2023 | 10:28 PM

Siddeshwara Swamiji Passes Away: ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

Siddeshwara Swamiji Death: ನಡೆದಾಡುವ ದೇವರು ಎಂದು ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ
ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ
Follow us on

ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರು ಇಂದು (ಜನವರಿ 02) ದೈವಾಧೀನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು.

Published On - 10:12 pm, Mon, 2 January 23